ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ

ಶಾಸಕರ ರಾಜೀನಾಮೆ; ಅಲ್ಪಮತಕ್ಕೆ ಕುಸಿದ ಸರ್ಕಾರ•ನೈತಿಕ ಹೊಣೆ ಹೊತ್ತು ಸಿಎಂ ಪದತ್ಯಾಗ ಮಾಡಲಿ

Team Udayavani, Jul 10, 2019, 10:26 AM IST

1–July-5

ಬೀದರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಬೀದರ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರವು ಬಹುಮತ ಇಲ್ಲದೆ ಅಲ್ಪಮತಕ್ಕೆ ಕುಸಿದು ಹೋಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೈತಿಕ ಹೊಣೆ ಹೊತ್ತು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದ ಡಾ|ಅಂಬೇಡ್ಕರ್‌ ಹಾಗೂ ಭಗತ್‌ಸಿಂಗ್‌ ವೃತ್ತದಿಂದ ಪ್ರತಿಭಟನಾ ರ್ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಕಳೆದ ವರ್ಷ ಅಧಿಕಾರಕ್ಕೆ ಬಂದ ಮೈತ್ರಿ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಬದಲಾಗಿ ನಿತ್ಯ ಶಾಸಕರು ಹಾಗೂ ಸಚಿವರು ಪದೇ ಪದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ಮುಖ್ಯಮಂತ್ರಿಗೆ ಬೇದರಿಕೆ ಒಡ್ಡುತ್ತ ಬರುತ್ತಿದ್ದಾರೆ. ಇದರಿಂದ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದು ಹೋಗಿದೆ. ರೈತರು ಬರದಿಂದ ಕಂಗಾಲಾಗಿದ್ದು, ದಾರಿ ತಿಳಿಯದಂತಾಗಿದೆ. ರಾಜ್ಯದ ಎಲ್ಲೆಡೆ ನೀರಿನ ಹಾಹಾಕಾರ ಎದುರಾಗಿದೆ. ಸಾರ್ವಜನಿಕರು ಮತ್ತು ಜಾನುವಾರುಗಳು ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಆದರೆ ಮುಖ್ಯಮಂತ್ರಿಗಳು ಮಾತ್ರ ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಶಾಸಕರು ಹಾಗೂ ಸಚಿವರು ರೇಸಾರ್ಟ್‌ನಲ್ಲಿ ಜನರ ದುಡ್ಡಿನಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಆಕ್ರೋಷ ವ್ಯಕ್ತ ಪಡಿಸಿದರು.

ಮೈತ್ರಿ ಸರ್ಕಾರದ 13 ಶಾಸಕರು ಈಗಾಗಲೇ ಸಭಾಪತಿಗೆ ರಾಜಿನಾಮೆ ನೀಡಿದ್ದಾರೆ. ಅದರಂತೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಕೂಡ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದ ಸರ್ಕಾರ ಬಹುಮತ ಕಳೆದುಕೊಂಡಿದೆ. ಹೀಗಾಗಿ ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ಸೋಮನಾಥ ಪಾಟೀಲ, ಬಾಬುರಾವ್‌ ಕಾರಭಾರಿ, ಈಶ್ವರ್‌ಸಿಂಗ್‌ ಠಾಕೂರ್‌, ಜಯಕುಮಾರ ಕಾಂಗೆ, ಗುರುನಾಥ ಜಾಂತಿಕರ್‌, ವಿಜಯಕುಮಾರ ಪಾಟೀಲ, ಹಣಮಂತ ಬುಳ್ಳಾ, ಮಲ್ಲಿಕಾರ್ಜುನ ಪಾಟೀಲ, ಜಗನ್ನಾಥ ವಿ. ಪಾಟೀಲ, ಜಗನ್ನಾಥ ಪಾಟೀಲ, ರಾಜಕುಮಾರ ಚಿದ್ರಿ, ವಿಜಯಕುಮಾರ ಪಾಟೀಲ, ಚಂದ್ರಶೇಖರ ಪಾಟೀಲ, ಹಣಮಂತರಾವ್‌ ಬುಳ್ಳಾ, ಘಾಳೆಪ್ಪಾ ಚಟ್ನಳ್ಳಿ, ಮಹೇಶ್ವರ ಸ್ವಾಮಿ, ಚಂದ್ರಯ್ನಾ ಸ್ವಾಮಿ, ಲುಂಬುಣಿ ಗೌತಮ್‌, ಉಪೇಂದ್ರ ದೇಶಪಾಂಡೆ, ಶಿವಪುತ್ರಪ್ಪಾ, ರಾಜು ವಡ್ಡಿ ಸೇರಿದಂತೆ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.