ಕಟ್ಟಡ ಛಾವಣಿ ಕುಸಿತ; ಹೆಚ್ಚಾಯ್ತು ಭಯ

Team Udayavani, Jun 10, 2019, 11:14 AM IST

10-Juen-11

ಬೀದರ: ಬೀದರ್‌ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬ್ರಿಮ್ಸ್‌) ಆಸ್ಪತ್ರೆ ಕಟ್ಟಡ ಮುಂಭಾಗದ ಛಾವಣಿ ಬಿದ್ದಿರುವುದು.

ಬೀದರ: ಬಹುಕೋಟಿ ರೂ.ವೆಚ್ಚದಲ್ಲಿ ನಿಮಾರ್ಣಗೊಂಡಿರುವ ಬೀದರ್‌ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬ್ರಿಮ್ಸ್‌) ಆಸ್ಪತ್ರೆ ಉದ್ಘಾಟನೆಗೊಂಡ ಎರಡೇ ವರ್ಷದಲ್ಲಿ ಆಸ್ಪತ್ರೆ ಮುಂಭಾಗದ ಛಾವಣಿ ಕುಸಿಯಲು ಶುರುವಾಗಿದ್ದು, ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಂತಾಗಿದೆ. ಅಲ್ಲದೇ ರೋಗಿಗಳಲ್ಲಿ ಆತಂಕ ಹುಟ್ಟುವಂತೆ ಮಾಡಿದೆ.

13-08-2017ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಯ ಕಟ್ಟಡ ಉದ್ಘಾಟಿಸಿದ್ದರು. ನಗರದಲ್ಲಿ 450 ಹಾಸಿಗೆಗಳ ಆಸ್ಪತ್ರೆ ನಿರ್ಮಿಸುವ ಮೂಲಕ ಈ ಭಾಗದ ಬಡವರಿಗೆ ಆರೋಗ್ಯ ಸೇವೆ ಕಲ್ಪಿಸಬೇಕೆಂಬ ನಿಟ್ಟಿನಲ್ಲಿ ಕಟ್ಟಡ ಕಾಮಗಾರಿ ಆರಂಭಗೊಂಡ ದಿನದಿಂದಲೇ ಕಳಪೆಯಾಗಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಅಲ್ಲದೆ, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಕಟ್ಟಡ ಕಾಮಗಾರಿ ಪೂರ್ಣಗೊಳ್ಳದೆ ತರಾತುರಿಯಲ್ಲಿ ಆಸ್ಪತ್ರೆ ಉದ್ಘಾಟಿಸುವುದು ಬೇಡವೆಂದು ವಿರೋಧ ವ್ಯಕ್ತಪಡಿಸಿದ್ದವು.

ಕಳಪೆ ಕಾಮಗಾರಿ ಕುರಿತು ಅನೇಕ ಬಾರಿ ಆರೋಪಗಳು ಕೇಳಿ ಬಂದಿದ್ದರೂ ಜಿಲ್ಲೆಯ ಯಾವ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿದ್ದಿಲ್ಲ. ಆದರೆ, ಶನಿವಾರ ಸಂಜೆ ಸುರಿದ ಸಾಧಾರಣ ಮಳೆಗೆ ಆಸ್ಪತ್ರೆ ಮುಂಭಾಗದ ಛಾವಣಿ ಕುಸಿಯುವ ಮೂಲಕ ಕಟ್ಟಡ ಕಾಮಗಾರಿ ಕಳಪೆ ಎಂಬುದು ಸಾಬೀತು ಆದಂತಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ. ಅಲ್ಪ ಪ್ರಮಾಣ ಮಳೆಗೇ ಹೀಗಾದರೆ ಭಾರೀ ಮಳೆ ಬಂದರೆ ಕಟ್ಟಡ ಉಳಿಯುತ್ತಾ ಎಂಬ ಪ್ರಶ್ನೆ ಹುಟ್ಟಿಕೊಳ್ಳುವಂತಾಗಿದೆ.

ಯಾರು ಹೊಣೆ: ಸರ್ಕಾರದ ಬಹು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಆಸ್ಪತ್ರೆಯ ದುಸ್ಥಿತಿಗೆ ಯಾರು ಹೊಣೆ ಎಂಬ ಪ್ರಶ್ನೆಗೆ ಯಾರೂ ಉತ್ತರಿಸುತ್ತಿಲ್ಲ. ಸದ್ಯ ಆಸ್ಪತ್ರೆ ಕಟ್ಟಡ ಕಾಮಗಾರಿ ಕಳಪೆ ಎಂದು ಗೊತ್ತಾದರೂ ಯಾವ ಅಧಿಕಾರಿಗಳು, ಸಂಬಂಧಿಸಿದ ರಾಜಕಾರಣಿಗಳು ಯಾಕೆ ಮೌನಕ್ಕೆ ಶರಣಾಗಿದ್ದಾರೆ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.

ಸಚಿವರೂ ಭೇಟಿ ನೀಡಿದ್ದರು: ಎರಡು ತಿಂಗಳ ಹಿಂದಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ಪರಿಶೀಲಿಸಿದ್ದರು. ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಕಳಪೆ ಕಾಮಗಾರಿ ಕುರಿತು ಅನೇಕ ಬಾರಿ ಆರೋಪಗಳು ಕೇಳಿ ಬಂದಿದ್ದರೂ ಜಿಲ್ಲೆಯ ಯಾವ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿದ್ದಿಲ್ಲ. ಆದರೆ, ಶನಿವಾರ ಸಂಜೆ ಸುರಿದ ಸಾಧಾರಣ ಮಳೆಗೆ ಆಸ್ಪತ್ರೆ ಮುಂಭಾಗದ ಛಾವಣಿ ಕುಸಿಯುವ ಮೂಲಕ ಕಟ್ಟಡ ಕಾಮಗಾರಿ ಕಳಪೆ ಎಂಬುದು ಸಾಬೀತು ಆದಂತಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ.

ಆಸ್ಪತ್ರೆಯ ಕಟ್ಟಡ ಕಾಮಗಾರಿ ಆರಂಭದಿಂದ, ಆಸ್ಪತ್ರೆಯಲ್ಲಿ ಖರೀದಿಸಿದ ವಸ್ತುಗಳವರೆಗೂ ರಾಜ್ಯಮಟ್ಟದ ಅಧಿಕಾರಿಗಳ ತಂಡದಿಂದ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಅಕ್ರಮಕ್ಕೆ ಸಾಥ್‌ ನೀಡಿದವರ, ಅಕ್ರಮ ನಡೆಸಿದವರ ವಿರುದ್ಧ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬೇಕು. ಈ ಅಕ್ರಮದಲ್ಲಿ ರಾಜಕಾರಣಿಗಳು, ಅಧಿಕಾರಿಗಳು, ಗುತ್ತೆದಾರರು ಯಾರೇ ಶಾಮೀಲಾಗಿದ್ದರೂ ಯಾವುದೇ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವ ಕೆಲಸವಾಗಬೇಕು.
ಗುರುನಾಥ ರಾಜಗೀರಾ,
ಹೋರಾಟಗಾರ

ಟಾಪ್ ನ್ಯೂಸ್

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.