ಬೆಳೆ ಮಾಹಿತಿ ಸಂಗ್ರಹಕ್ಕೆ ಡ್ರೋಣ್‌ ಕಣ್ಣು

•ಬೀದರ್‌ನಲ್ಲಿ ಪೈಲೆಟ್ ಪ್ರೊಜೆಕ್ಟ್ ಅನುಷ್ಠಾನ •ಅಂತಾರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆಯಿಂದ ಪರಿಶೀಲನೆ

Team Udayavani, May 31, 2019, 1:12 PM IST

1-June-19

ಬೀದರ: ಐಸಿಆರ್‌ಎಸ್‌ಎಟಿ ಸಂಸ್ಥೆಯ ಡ್ರೋಣ್‌.

ದುರ್ಯೋಧನ ಹೂಗಾರ
ಬೀದರ:
ರೈತರ ಹೊಲಗಳಲ್ಲಿನ ಬೆಳೆಗಳ ಮಾಹಿತಿ ಸಂಗ್ರಹಿಸಲು ರಾಜ್ಯದಲ್ಲಿಯೇ ಮೊದಲ ಬಾರಿಗೆ ಗಡಿ ಜಿಲ್ಲೆಯಲ್ಲಿ ಪೈಲೆಟ್ ಪ್ರೊಜೆಕ್ಟ್ ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯ ರಾಜಗೀರಾ ಗ್ರಾಮದ ಸುತ್ತಲಿನ ಪ್ರದೇಶದ ಒಂದು ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಈ ಬಾರಿ ಡ್ರೋಣ್‌ ಮೂಲಕ ಬೆಳೆಗಳ ಸ್ಥಿತಿಗತಿಯ ಸರ್ವೇ ಕಾರ್ಯ ನಡೆಯಲಿದೆ.

ಅಂತಾರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ (ಐಸಿಆರ್‌ಎಸ್‌ಎಟಿ) ಬೆಳೆ ಪರಿಶೀಲನೆ ನಡೆಸಲಿದೆ. ಈ ಸಂಸ್ಥೆ 45 ವರ್ಷಗಳಿಂದ ಬೆಳೆಗಳ ಕುರಿತು ಸಂಶೋಧನೆ ನಡೆಸುತ್ತಿದ್ದು, ಭಾರತ ಸೇರಿದಂತೆ ವಿದೇಶದಲ್ಲಿ ಇದರ ಅಂಗ ಸಂಸ್ಥೆಗಳಿವೆ. ಸದ್ಯ ನೇರೆ ರಾಜ್ಯ ತೆಲಂಗಾಣದ ಹೈದ್ರಾಬಾದನ ಸಂಸ್ಥೆ ಅಧಿಕಾರಿಗಳು ಜಿಲ್ಲೆಯ ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಸಮೀಕ್ಷೆ, ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡುವ ವಿವಿಧ ಬೆಳೆಗಳ ಸ್ಥಿತಿಗತಿಯನ್ನು 3ರಿಂದ 4 ನಾಲ್ಕು ಬಾರಿ ಡ್ರೋಣ್‌ ಮೂಲಕ ಪರಿಶೀಲನೆ ನಡೆಸಲಿದ್ದಾರೆ.

ಇದರಿಂದ ಏನು ಪ್ರಯೋಜನ?: ಡ್ರೋಣ್‌ ಮೂಲಕ ಬೆಳೆಗಳ ಪರಿಶೀಲನೆ ನಡೆಸುವುದರಿಂದ ಹೊಲದಲ್ಲಿನ ಬೆಳೆಗಳ ಬೆಳವಣಿಗೆ ಮತ್ತು ಕೃಷಿ ಕಾರ್ಯಾಚರಣೆಗಳ ನೈಜ ಸಮಯದ ಚಿತ್ರಣ, ಬೆಳೆಗಳ ಕೀಟನಾಶಕ, ಸಸ್ಯದ ಎತ್ತರ ಮತ್ತು ಹೂ ಬಿಡುವ ಸ್ಥಿತಿಗಳ ಲಕ್ಷಣಗಳನ್ನು ರೆಕಾರ್ಡ್‌ ಮಾಡಿ ನೈಜ ಸಮಯದ ನೈಜ ವರದಿಯನ್ನು ಕೃಷಿ ಇಲಾಖೆ ಪಡೆಯಬಹುದಾಗಿದೆ. ಹೊಲದಲ್ಲಿನ ಬೆಳೆಗಳ ಸ್ಥಿತಿ ನೋಡಿ ರೈತರಿಗೆ ಸೂಕ್ತ ಮಾರ್ಗದರ್ಶ ನೀಡುವ ಕಾರ್ಯ ಕೂಡ ಮಾಡಲಿದ್ದಾರೆ. ಅಲ್ಲದೆ, ಯಾವ ರೈತರ ಹೊಲದಲ್ಲಿ ಯಾವ ಬೆಳೆಯನ್ನು ಎಷ್ಟು ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ, ಎಷ್ಟು ಪ್ರಮಾಣದ ಬೆಳೆ ಬೆಳೆಯಲಾಗಿದೆ. ಒಟ್ಟಾರೆ ಕೃಷಿ ಭೂಮಿಯಲ್ಲಿ ಎಷ್ಟು ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ನೈಜ ವರದಿಯನ್ನು ಸರ್ವೇ ಮಾಡುವ ಸಂಸ್ಥೆಯವರು ಕೃಷಿ ಇಲಾಖೆಗೆ ನೀಡಲಿದ್ದಾರೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ, ಬರ ಹಾಗೂ ಬೆಳೆಗಳ ವಿಮೆ ಸಂದರ್ಭದಲ್ಲಿ ಕೂಡ ಡ್ರೋಣ್‌ ಸಹಾಯದ ಮೂಲಕ ಬೆಳೆ ಪರಿಶೀಲನೆ ನಡೆಸಿ ವರದಿ ತಯಾರಿಸಿ ವಿಮಾ ಕಂಪನಿಗಳಿಗೆ ಕಳುಹಿಸಲು ಕೂಡ ಇದು ಸಹಕಾರಿಯಾಗಿದೆ ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು.

ಬೆಳೆದ ಬೆಳೆಗೆ ಮಾತ್ರ ವಿಮೆ: ಪ್ರಸಕ್ತ ಸಾಲಿನಲ್ಲಿ ರೈತರು ತಮ್ಮ ಹೊಲದಲ್ಲಿ ಬೆಳೆದ ಬೆಳೆಗಳಿಗೆ ಮಾತ್ರ ವಿಮೆ ಮಾಡಿಸಬೇಕು ಎಂಬ ಸಂದೇಶವನ್ನು ಕೃಷಿ ಇಲಾಖೆ ಈಗಾಗಲೇ ರೈತರಿಗೆ ನೀಡುತ್ತಿದೆ. ಎಷ್ಟು ಎಕರೆ ಪ್ರದೇಶದಲ್ಲಿ ಯಾವ ಬೆಳೆ ಬಿತ್ತನೆ ನಡೆಯುತ್ತದೆಯೋ ಅದಕ್ಕೆ ಮಾತ್ರ ಬೆಳೆವಿಮೆ ಮಾಡಿಸುವಂತೆ ಸೂಚಿಸಿದ್ದಾರೆ. ಕಾರಣ ಡ್ರೋಣ್‌ ಮೂಲಕ ಈ ಬಾರಿ ಸರ್ವೇ ಕಾರ್ಯ ನಡೆಯಲಿದ್ದು, ರೈತರಿಗೆ ಯಾವುದೇ ಸಮಸ್ಯೆ ಉಂಟಾಗಬಾರದು ಎಂಬ ಉದ್ದೇಶ ಇಲಾಖೆ ಹೊಂದಿದೆ.

ಪ್ರಸಕ್ತ ಸಾಲಿನಲ್ಲಿ ಡ್ರೋಣ್‌ ಮೂಲಕ ಬೆಳೆ ಸರ್ವೇ ಕಾರ್ಯಕ್ಕೆ ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ ಪೈಲೆಟ್ ಪ್ರೊಜೆಕ್ಟ್ ಆಗಿ ಜಿಲ್ಲೆಯ ರಾಜಗೀರಾ ವಲಯದ ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಐಸಿಆರ್‌ಎಸ್‌ಎಟಿ ಸಂಸ್ಥೆಯವರು ಸರ್ವೇ ಕಾರ್ಯ ನಡೆಸಲಿದ್ದಾರೆ. ಮುಂಗಾರು ಬೆಳೆಗಳ ಕುರಿತು ಎಲ್ಲಾ ಹಂತದ ಚಿತ್ರಣವನ್ನು ಡ್ರೋಣ್‌ ಮೂಲಕ ಸೆರೆ ಹಿಡಿದು ಡಾಟಾ ಸಂಗ್ರಹಿಸಲಾಗುತ್ತದೆ. ಡ್ರೋಣ್‌ ಹಾರಿಸುವ ಕುರಿತು ಜಿಲ್ಲಾಧಿಕಾರಿ, ಎಸ್‌ಪಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅನುಮತಿ ದೊರೆತ ನಂತರ ಮುಂದಿನ ಕಾರ್ಯಗಳು ನಡೆಯಲಿವೆ. • ಸಿ.ವಿದ್ಯಾನಂದ,
ಕೃಷಿ ಇಲಾಖೆಯ ಜಂಟಿ ನಿರ್ದೇಶಕ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.