ವಾಡಿಕೆ ಮಳೆ ಶೇ.27 ಕೊರತೆ

ಜನವರಿಯಿಂದ ಸುರಿಯಬೇಕಿತ್ತು 436 ಮಿ.ಮೀ. •ಆಗಸ್ಟ್‌ 8ರವರೆಗೆ ಸುರಿದಿದೆ 317 ಮಿ.ಮೀ.

Team Udayavani, Aug 9, 2019, 10:44 AM IST

9-Agust-6

ಬೀದರ: ಕಾರಂಜಾ ಜಲಾಶಯದ ನೋಟ.

ಬೀದರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಆರ್ಭಟ ಮುಂದುವರಿದಿದ್ದು, ಜನರು ಪ್ರತಿದಿನ ಸಂಕಟ ಪಡುವಂತಾಗಿದೆ. ಆದರೆ, ಗಡಿ ಜಿಲ್ಲೆ ಬೀದರನಲ್ಲಿ ಮಾತ್ರ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಇಂದಿಗೂ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.

ಮಳೆಗಾಲದಲ್ಲಿ ಕೂಡ ಕುಡಿಯುವ ನೀರನ್ನು ಟ್ಯಾಂಕರ್‌ ಮೂಲಕ ಪೂರೈಸಲಾಗುತ್ತಿದೆಯೇ ಎಂಬ ವಿಷಯ ತಿಳಿದು ಜನರಿಗೆ ಆಘಾತ ಉಂಟಾಗಬಹುದು. ಆದರೆ ಇದು ವಾಸ್ತವ ಸಂಗತಿಯಾಗಿದೆ. ಈ ವರ್ಷ ಜನವರಿ ತಿಂಗಳಿಂದ ಆಗಸ್ಟ್‌ 8ರ ವರೆಗೆ ಸರಾಸರಿ 436 ಮಿ.ಮೀ. ಮಳೆ ಸುರಿಯಬೇಕಿತ್ತು. ಆದರೆ, 317 ಮಿ.ಮೀ. ಮಳೆಯಾಗಿದ್ದು, ಶೇ.27 ಮಳೆ ಕೊರತೆ ಜಿಲ್ಲೆಗೆ ಕಾಡುತ್ತಿದೆ. ಕಳೆದ ಎರಡು ವರ್ಷಗಳಿಂದ ಮಳೆ ಕೊರತೆಯಿಂದ ಅಂತರ್ಜಲ ಪಾತಾಳ ಕಂಡಿತ್ತು. ಇದೀಗ ಮಳೆಗಾಲ ಆರಂಭಗೊಂಡು ಎರಡು ತಿಂಗಳು ಕಳೆದರೂ ಕೂಡ ಅಂತರ್ಜಲ ಸುಧಾರಿಸುವ ಲಕ್ಷಣಗಳು ಇಂದಿಗೂ ಗೋಚರಿಸುತ್ತಿಲ್ಲ. ಹಾಗಂತ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿಲ್ಲ ಎಂದಲ್ಲ. ನಿರಂತರ ತುಂತುರ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ಒಂದು ವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಸರಾಸರಿ 109 ಮಿ.ಮೀ. ಮಳೆಯಾಗಿದೆ. ಆದರೂ ಕೂಡ ಬೇಸಿಗೆಯಲ್ಲಿ ಒಣಗಿದ ತೆರೆದ ಬಾವಿಗಳು ಹಾಗೂ ಕೊಳವೆ ಬಾವಿಗಳಿಗೆ ನಿಗದಿತ ಪ್ರಮಾಣದ ನೀರು ಬಂದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಬೆಳೆಗೆ ಉತ್ತಮ ಆಹಾರ ನೀಡುತ್ತಿದೆ ಹೊರತು ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ನೀಡುವಂತೆ ಆಗುತ್ತಿಲ್ಲ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಸದ್ಯ ಸುರಿದ ಮಳೆ ಭೂಯಿಯ ಆಳದ ವರೆಗೆ ಇಳಿದಿಲ್ಲ. ಕೇವಲ ಮೂರರಿಂದ ನಾಲ್ಕು ಅಡಿ ಮಾತ್ರ ಭೂಮಿಯಲ್ಲಿ ತೆಂವಾಶ ಕಂಡುಬರುತ್ತಿದೆ ಎಂದು ಗ್ರಾಮೀಣ ಜನರು ಹೇಳುತ್ತಿದ್ದಾರೆ.

ಕಾರಂಜಾ ಜಲಾಶಯ: ಆ.8ರ ವರೆಗೆ ಸುರಿದ ಮಳೆಯಿಂದ ಕಾರಂಜಾ ಜಲಾಶಯಕ್ಕೆ 0.143 ಟಿಎಂಸಿ ನೀರು ಒಳ ಹರಿವು ಬಂದಿದೆ. ಆ.7 ಬುಧವಾರ ಸುರಿದ ಮಳೆಗೆ 57.87 ಕ್ಯೂಸೆಕ್‌ ನೀರು ಒಳ ಹರಿವು ಬಂದಿದೆ. 1.307 ಟಿಎಂಸಿ ನೀರು ಜಲಾಶಯದಲ್ಲಿ ಇದ್ದು, 0.932 ಟಿಎಂಸಿ ನೀರು ಬಳಕೆಗೆ ಯೋಗ್ಯವಾಗಿದೆ ಎಂದು ಕಾರಂಜಾ ಅಧಿಕಾರಿ ಆನಂದಕುಮಾರ ಮಾಹಿತಿ ನೀಡಿದ್ದಾರೆ.

ತಾಲೂಕುವಾರು ಮಳೆ: ಒಂದು ವಾರದಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಆ.1ರಿಂದ ಆ.8ರ ಬೆಳಗ್ಗೆ 8 ಗಂಟೆ ವರೆಗೆ ಔರಾದ ತಾಲೂಕಿನಲ್ಲಿ 80 ಮಿ.ಮೀ., ಬೀದರ ತಾಲೂಕಿನಲ್ಲಿ 109 ಮಿ.ಮೀ., ಭಾಲ್ಕಿ 87 ಮಿ.ಮೀ., ಬಸವಕಲ್ಯಾಣ 125 ಮಿ.ಮೀ., ಹುಮನಾಬಾದ 125 ಮಿ.ಮೀ. ಮಳೆಯಾಗಿದೆ. ವರ್ಷದ ಮಳೆಯ ಆಧಾರದಲ್ಲಿ ನೋಡುವುದಾದರೆ ಈ ವರೆಗೆ ಔರಾದ ತಾಲೂಕಿನಲ್ಲಿ ಶೇ.35, ಬೀದರ ತಾಲೂಕಿನಲ್ಲಿ ಶೇ.35, ಭಾಲ್ಕಿ ತಾಲೂಕಿನಲ್ಲಿ ಶೇ.32, ಬಸವಕಲ್ಯಾಣ ತಾಲೂಕಿನಲ್ಲಿ ಶೇ.13, ಹುಮನಾಬಾದ ತಾಲೂಕಿನಲ್ಲಿ ಶೇ.20ರಷ್ಟು ಮಳೆ ಕೊರತೆ ಇದೆ.

ಮೋಡ ಕವಿದ ವಾತಾವರಣ: ಜಿಲ್ಲೆಯಲ್ಲಿ ಒಂದು ವಾರದಿಂದ ನಿರಂತರ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಆದರೆ, ಭಾರಿ ಪ್ರಮಾಣದಲ್ಲಿ ಮಾತ್ರ ಮಳೆ ಸುರಿಯುತ್ತಿಲ್ಲ. ಆಗಾಗ ತುಂತುರು ಮಳೆಯಾಗುತ್ತಿದ್ದು, ಬೆಳೆಗಳಿಗೆ ಉತ್ತಮ ಶಕ್ತಿ ತುಂಬುತ್ತಿದೆ. ಸದ್ಯದ ಸ್ಥಿತಿಯಲ್ಲಿ ಜಿಲ್ಲೆಯ ವಿವಿಧೆಡೆ ಬೆಳೆಗಳು ಉತ್ತಮವಾಗಿ ಬೆಳೆಯುತ್ತದ್ದು, ರೈತರ ಮುಖದಲ್ಲಿ ಸಂತಸ ಮೂಡಿದೆ. ಈ ವರ್ಷ ಉತ್ತಮ ಫಸಲು ಬರುವ ನಿರೀಕ್ಷೆಯನ್ನು ರೈತರು ಹೊಂದಿದ್ದಾರೆ.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.