ನೆರೆ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲ

ಸತ್ತ ಮೇಲೆ ಪರಿಹಾರ ನೀಡುತ್ತದೆಯೇ ಸರ್ಕಾರ?: ಖಂಡ್ರೆ •ರಾಜ್ಯ-ಕೇಂದ್ರಗಳಿಂದ ನಿರ್ಲಕ್ಷ್ಯ

Team Udayavani, Sep 13, 2019, 3:00 PM IST

13-Sepctember-15

ಬೀದರ: ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಧರಣಿ ಸತ್ಯಾಗ್ರಹ ನಡೆಸಿದ ಬಳಿಕ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಬೀದರ: ನೆರೆ ಸಂಭವಿಸಿದ ಪ್ರದೇಶಗಳಲ್ಲಿ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲಗೊಂಡಿವೆ. ನೆರೆ ಪ್ರದೇಶದಲ್ಲಿನ ಜನರು ಸತ್ತಮೇಲೆ ಸರ್ಕಾರ ಪರಿಹಾರ ನೀಡುತ್ತದೆಯೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರಶ್ನಿಸಿದ್ದಾರೆ.

ನೆರೆ ಹಾವಳಿ ಸಂತ್ರಸ್ತರ ಬಗ್ಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ನೆರೆ ಪರಿಸ್ಥಿತಿ ಕುರಿತು ಅಮಿತ್‌ ಶಾ ಅವರು ವೈಮಾನಿಕ ಸಮೀಕ್ಷೆ ನಡೆಸಿ 40 ದಿನಗಳು ಕಳೆದರೂ ಕೂಡ ಈವರೆಗೆ ಕೇಂದ್ರ ಸರ್ಕಾರದಿಂದ ನಯಾಪೈಸೆ ಬಂದಿಲ್ಲ. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಜನರು ಸತ್ತಮೇಲೆ ಪರಿಹಾರ ಬರುತ್ತದಾ ಎಂದು ಪ್ರಶ್ನಿಸಿದರು. 2008-09ರಲ್ಲಿ ರಾಜ್ಯದಲ್ಲಿ ಇದೇ ಪರಿಸ್ಥಿತಿ ಉಂಟಾಗಿತ್ತು. ಆಗ ರಾಜ್ಯದಲ್ಲಿ ಬಿಜೆಪಿ ಸರಕಾರ ಹಾಗೂ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ರಾಜ್ಯದ ಸ್ಥಿತಿ ನೋಡಿ ಯುಪಿಎ ಸರ್ಕಾರ ಕೂಡಲೇ ಎರಡು ಸಾವಿರ ಕೋಟಿ ಪರಿಹಾರ ಕಲ್ಪಿಸಿತ್ತು. ಆದರೆ, ಇಂದು ನೆರೆ ಸಂತ್ರಸ್ಥರ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾಗಳು ನಿರ್ಲಕ್ಷ್ಯ ತೋರುತ್ತಿವೆ ಎಂದು ಆರೋಪಿಸಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನರು ಯಾಕೆ ಮತ ಹಾಕಿದರು ಎಂಬುದು ಇಂದಿಗೂ ಗೊತ್ತಾಗಿಲ್ಲ. ಚುನಾವಣೆಯಲ್ಲಿ ಇವಿಎಂಗಳ ಸಮಸ್ಯೆ ಇತ್ತೋ ಏನೊ ಎಂಬುದು ಗೊತ್ತಾಗಿಲ್ಲ ಎಂದ ಅವರು, ಜನರ ಸಂಕಷ್ಟಕ್ಕೆ ಆಡಳಿತ ಪಕ್ಷದವರು ಸ್ಪಂದಿಸುತ್ತಿಲ್ಲ. ಲೋಕ ಸಭೆ ಚುನಾವಣೆಯಲ್ಲಿ ಗೆದ್ದ ಸದಸ್ಯರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಕೂಡ ಬಿಜೆಪಿ ಸರ್ಕಾರ ಇದ್ದರೂ ಕೂಡ ನೆರೆ ಸಂತ್ರಸ್ತರಿಗೆ ನೆರವು ದೊರೆಯುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ ಸಂಭವಿಸಿದ ನೆರೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕಿತ್ತು. ಈ ಮೂಲಕ ಕೇಂದ್ರ ಸರ್ಕಾರದ ವಿಶೇಷ ಅನುದಾನ ರಾಜ್ಯಕ್ಕೆ ದೊರೆಯುತ್ತಿತ್ತು. ಆದರೆ, ಸದ್ಯ ಪ್ರತಿ ಜಿಲ್ಲೆಗೆ ಎರಡು ಮೂರು ಕೋಟಿ ಅನುದಾನ ಮಾತ್ರ ಕಲ್ಪಿಸಿದ್ದು, ಕೂಡಲೇ ಸರ್ಕಾರ ಪರಿಹಾರ ಕಲ್ಪಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಉಂಟಾದ ಸ್ಥಿತಿಯಿಂದ 88 ಜನರು ಪ್ರಾಣ ಕಳೆದುಕೊಂಡಿದ್ದಾರೆ. 10 ಜನರು ಕಾಣೆಯಾಗಿದ್ದಾರೆ. 7 ಲಕ್ಷ ಜನರು ಮನೆ ಕಳೆದುಕೊಂಡಿದ್ದಾರೆ. ರೈತರು 7.90 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ವಿವಿಧ ಬೆಳೆಗಳನ್ನು ಕಳೆದುಕೊಂಡಿದ್ದಾರೆ. 2.37 ಲಕ್ಷ ಮಳೆಗಳಿಗೆ ಹಾನಿ ಸಂಭವಿಸಿದೆ. 35 ಸಾವಿರ ಕಿ.ಮೀ. ರಸ್ತೆ ಹಾಳಾಗಿದೆ. ಅಲ್ಲದೆ, ಅನೇಕ ಪ್ರಮಾಣದ ಹಾನಿ ಸಂಭವಿಸಿದೆ. ಬೆಳೆ ಕಳೆದುಕೊಂಡ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ 50 ಸಾವಿರ ಪರಿಹಾರ ನೀಡಬೇಕು. ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡಬೇಕು ಎಂದ ಅವರು, ಕೂಡಲೆ ಸರ್ಕಾರ ಸಂತ್ರಸ್ತರ ನೇರವಿಗೆ ಧಾವಿಸದಿದ್ದರೆ ಕಾಂಗ್ರೆಸ್‌ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.

ವಿಧಾನಪರಿಷತ್‌ ಸದಸ್ಯ ಅರವಿಂದಕುಮಾರ್‌ ಅರಳಿ, ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಆನಂದ ದೇವಪ್ಪ, ದತ್ತು ಮೂಲಗಿ, ನರಸಿಂಗ್‌ರಾವ್‌ ಸೂರ್ಯವಂಶಿ, ಕೆ.ಪುಂಡಲಿಕರಾವ್‌, ಎಂ.ಎ. ಸಮಿ, ಎಂ.ಡಿ. ಫೇರೊಜ್‌ ಖಾನ್‌, ಚಂದ್ರಸಿಂಗ್‌ ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.