2326 ಮಕ್ಕಳಿಗೆ ಸಿಕ್ಕಿಲ್ಲ ಸೈಕಲ್

•3,626 ವಿದ್ಯಾರ್ಥಿಗಳ ಪೈಕಿ 1,300 ವಿದ್ಯಾರ್ಥಿಗಳಿಗೆ ಮಾತ್ರ ವಿತರಿಸಲಾಗಿದೆ ಉಚಿತ ಸೈಕಲ್

Team Udayavani, Jul 30, 2019, 12:22 PM IST

bidar-tdy-1

ಬಸವಕಲ್ಯಾಣ: ವಿದ್ಯಾರ್ಥಿಗಳಿಗೆ ವಿತರಿಸಲು ಸಿದ್ಧಗೊಂಡಿರುವ ಸೈಕಲ್ಗಳನ್ನು ಬಂಗ್ಲಾ ರಸ್ತೆಯ ಹಳೆ ವಿದ್ಯಾಪೀಠ ಕಟ್ಟಡದ ಗೋದಾಮ ಬಳಿ ನಿಲ್ಲಿಸಲಾಗಿದೆ.

ಬಸವಕಲ್ಯಾಣ: ಶಾಲೆಗಳು ಶುರುವಾಗಿ ಬರೊಬ್ಬರಿ ಎರಡು ತಿಂಗಳು ಕಳೆಯುತ್ತ ಬಂದರೂ ಕೆಲವೇ ಕೆಲವು ಶಾಲೆಗಳ ವಿದ್ಯಾರ್ಥಿಗಳಿಗೆ ಸೈಕಲ್ ದೊರೆತಿದ್ದು, ಹಲವು ಶಾಲೆಗಳ ವಿದ್ಯಾರ್ಥಿಗಳ ಕೈಗೆ ಇನ್ನು ಸೈಕಲ್ ದೊರೆತಿಲ್ಲ.

ಗ್ರಾಮೀಣ ಹಾಗೂ ನಗರ ಪ್ರದೇಶದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಸರ್ಕಾರ ಈ ಸೈಕಲ್ಗಳನ್ನು ಉಚಿತವಾಗಿ ವಿತರಿಸುತ್ತಿದ್ದು, ಈ ಸಲ ವಿಳಂಬವಾಗಿದ್ದರಿಂದ ಸಾರಿಗೆಗೆ ಹಣ ಖರ್ಚು ಮಾಡಿ ಶಾಲೆಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ವ್ಯಾಪ್ತಿಗೆ ಒಳಪಡುವ ತಾಲೂಕಿನ 114 ಸರ್ಕಾರಿ ಶಾಲೆಗಳಲ್ಲಿ ಪ್ರಸಕ್ತ ವರ್ಷ 8ನೇ ತರಗತಿಗೆ ಪ್ರವೇಶ ಪಡೆದ 3,626 ವಿದ್ಯಾರ್ಥಿಗಳ ಪೈಕಿ ಕೇವಲ 1,300 ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಸೈಕಲ್ ವಿತರಿಸಲಾಗಿದ್ದು, ಇನ್ನೂ 2,326 ವಿದ್ಯಾರ್ಥಿಗಳಿಗೆ ಸೈಕಲ್ಗಳನ್ನು ವಿತರಿಸಬೇಕಿದೆ.

ಯಡಿಯೂರಪ್ಪನವರು ಆಗ ಮುಖ್ಯಮಂತ್ರಿ ಆಗಿದ್ದಾಗ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂಲವಾಗಲಿ ಎಂಬ ಉದ್ದೇಶದಿಂದ ಉಚಿತ ಸೈಕಲ್ ವಿತರಣೆ ಯೋಜನೆ ಜಾರಿಗೆ ತಂದಿದ್ದರು. ಆದರೆ ಟೆಂಡರ್‌ ಪಡೆದ ಗುತ್ತಿಗೆದಾರರು ಶಾಲೆಗಳಿಗೆ ಜೂನ್‌ ತಿಂಗಳಲ್ಲೇ ಬಿಡಿ ಭಾಗಗಳನ್ನು ಪೂರೈಸುವ ಬದಲು, ಈಗ 15 ದಿವಸಗಳ ಹಿಂದಷ್ಟೆ ಪೂರೈಸಿದ್ದಾರೆ. ಹೀಗಾಗಿ ಅವುಗಳನ್ನು ಬಂಗ್ಲಾ ರಸ್ತೆಯ ಹಳೆ ವಿದ್ಯಾಪೀಠದ ಕಟ್ಟಡದಲ್ಲಿ ಜೋಡಿಸಲಾಗುತ್ತಿದ್ದು, ಪ್ರತಿನಿತ್ಯ ಜೋಡಣೆಯಾದಷ್ಟು ಸೈಕಲ್ಗಳನ್ನು ಆಯಾ ಶಾಲೆಗಳಿಗೆ ವಿತರಿಸಲಾಗುತ್ತಿದೆ. ಆದಷ್ಟು ಬೇಗ ಎಲ್ಲ ಶಾಲೆಗಳಿಗೆ ಸೈಕಲ್ ವಿತರಿಸಲಾಗುವುದು ಎಂದು ಮಂಠಾಳ ಬಿಆರ್‌ಸಿ ವಿನೋದ ರಾಠೊಡ ತಿಳಿಸಿದ್ದಾರೆ.

ಶಾಲೆ ಆರಂಭದಲ್ಲೇ ಬರಬೇಕಿದ್ದ ಸೈಕಲ್ನ ಬಿಡಿ ಭಾಗಗಳು, ಈಗ 15 ದಿನಗಳ ಹಿಂದಷ್ಟೆ ಬಂದಿವೆ. ಜೋಡಿಸಲಾದ ಸೈಕಲ್ಗಳನ್ನು ನಿತ್ಯ ಶಾಲೆಗಳಿಗೆ ಪೂರೈಸಲಾಗುತ್ತಿದೆ. ಆದಷ್ಟು ಬೇಗ ಎಲ್ಲ ಶಾಲೆಗಳಿಗೆ ವಿತರಿಸಲು ಪ್ರಯತ್ನಿಸಲಾಗುವುದು.•ವಿನೋದ ರಾಠೊಡ, ಬಿಆರ್‌ಸಿ

ಶಾಲೆಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ. ಬಹುತೇಕ ಶಾಲೆಗಳಲ್ಲಿ ಸೈಕಲ್ ವಿತರಿಸಿಲ್ಲ. ಇದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಆದಷ್ಟು ಬೇಗ ಎಲ್ಲ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು.•ಲೋಕೇಶ ಮೋಳಕೇರೆ, ಎಬಿವಿಪಿ ಮುಖಂಡ

 

•ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.