262 ಕೆ.ಜಿ ಗಾಂಜಾ ಜಪ್ತಿ; ಇಬ್ಬರ ಸೆರೆ
Team Udayavani, May 29, 2022, 2:36 PM IST
ಬೀದರ: ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಲಕ್ಷಾಂತರ ರೂ. ಮೌಲ್ಯದ 262 ಕೆ.ಜಿ ಗಾಂಜಾ ಜಪ್ತಿ ಮಾಡಿದ ಘಟನೆ ತಾಲೂಕಿನ ಬಗದಲ್ ಠಾಣೆ ವ್ಯಾಪ್ತಿಯ ಮೀನಕೇರಾ ಕ್ರಾಸ್ ಬಳಿ ಶನಿವಾರ ನಡೆದಿದೆ.
ಅಕ್ರಮವಾಗಿ ಹೈದರಾಬಾದ್ ಕಡೆಯಿಂದ ಹುಮನಾಬಾದಗೆ ಗಾಂಜಾ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಘಟನೆ ಸಂಬಂಧ ಭಾಲ್ಕಿ ತಾಲೂಕಿನ ಶಾಮರಾಜಪುರನ ರಸ್ತುಮ್ ಅಲಿಯಾಸ್ ಖಾಲೀದ್ ಹಾಗೂ ಮಾವಿನಹಳ್ಳಿಯ ಮೋಹನ್ ಕಾಶಿನಾಥ ಎಂಬವರನ್ನು ಬಂಧಿಸಲಾಗಿದೆ. 26.20 ಲಕ್ಷ ರೂ. ಮೌಲ್ಯದ ಗಾಂಜಾ ಹಾಗೂ ಟಾಟಾ ಗೂಡ್ಸ್ ವಾಹನ, ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ.
ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರೆ ನೇತೃತ್ವದಲ್ಲಿ ಪಿಎಸೈ ಸಂಗೀತಾ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಬಗದಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ