ಸಾಧಕರಿಗೆ ನಗದು ಬಹುಮಾನ


Team Udayavani, Aug 12, 2020, 2:40 PM IST

ಸಾಧಕರಿಗೆ ನಗದು ಬಹುಮಾನ

ಬೀದರ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬೀದರ ಮತ್ತು ಯಾದಗಿರಿ ಜಿಲ್ಲಾ ಮತ್ತು ತಾಲೂಕು ಟಾಪರ್ಸ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಆ.15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಗದು ಬಹುಮಾನ ವಿತರಿಸಿ ಸನ್ಮಾನಿಸಲಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಮೂವರು ಮತ್ತು ತಾಲೂಕು ಮಟ್ಟದ ಮೂವರು ಟಾಪರ್ಸ್‌ಗಳಿಗೆ ನಗದು ಬಹುಮಾನ ವಿತರಿಸಲಿದ್ದು, ಜಿಲ್ಲಾ ಟಾಪರ್ಸ್ ಗಳಿಗೆ ಪ್ರಥಮ ಬಹುಮಾನವಾಗಿ 11,000 ರೂ., ದ್ವಿತೀಯ ಬಹುಮಾನ 7,000 ರೂ.ಹಾಗೂ ತೃತೀಯ ಬಹುಮಾನ 5,000 ರೂ. ನೀಡಲಾಗುವುದು. ತಾಲೂಕು ಟಾಪರ್ಸ್‌ಗಳಿಗೆಪ್ರಥಮ ಬಹುಮಾನವಾಗಿ 7,000, ದ್ವಿತೀಯ 5,000 ಹಾಗೂ ತೃತೀಯ 2,500 ರೂ. ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೆ ಶಾಸಕರಾಗಿದ್ದಾಗ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ವೃದ್ಧಿಸಿ, ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುತ್ತ ಬಂದಿದ್ದೇನೆ. ಈಗ ತಾವು ಸಚಿವರಾಗಿದ್ದು, ಈ ಬಾರಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡುತ್ತಿದ್ದು, ಇದರಿಂದ ಮಕ್ಕಳ ಮನೋಬಲ ಹೆಚ್ಚಿಸಲು ಸಹಕಾರಿ ಆಗಲಿದೆ. ಮುಂದಿನ ದಿನಗಳಲ್ಲಿ ಮಕ್ಕಳ ಪಾಲಕರಿಗೂ ಸನ್ಮಾನಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಹರ್ಷ: ಕೋವಿಡ್ ಸೋಂಕು ಭೀತಿ ನಡುವೆಯೂ ಜಿಲ್ಲೆಯ ವಿದ್ಯಾರ್ಥಿಗಳು ಸುರಕ್ಷತೆಯಿಂದ ಪರೀಕ್ಷೆ ಎದುರಿಸಿ ಹಿಂದೆಂದಿಗಿಂತಲೂ ಉತ್ತಮ ಸಾಧನೆ ತೋರಿಸಿ ಇತರರಿಗೆ ಮಾದರಿಯಾಗಿದ್ದಾರೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಪ್ರತಿಸಲ ಕಡೆಯ ಸ್ಥಾನದಲ್ಲಿರುತ್ತಿದ್ದ ಜಿಲ್ಲೆ ಈ ಬಾರಿ ಸುಧಾರಣೆ ಕಂಡಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು 29ರಿಂದ 24ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಪಿಯುಸಿಯಲ್ಲಿಯೂ ಈ ವರ್ಷ 18ನೇ ಸ್ಥಾನಕ್ಕೇರಿರುವುದು ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳಿಗೆ ಸೂಚನೆ: ಈ ಬಾರಿಯ ಫಲಿತಾಂಶದಲ್ಲಿ ಇನ್ನೂ ಹೆಚ್ಚಿನ ಸ್ಥಾನ ಬರಬಹುದೆಂಬ ನಿರೀಕ್ಷೆ ಹೊಂದಿದ್ದೆ. ಆದರೂ ಆಶಾದಾಯಕ ಫಲಿತಾಂಶ ಬಂದಿದೆ. ಮುಂದಿನ ದಿನಗಳಲ್ಲಿ ಬೀದರ ಜಿಲ್ಲೆಯು ಟಾಪ್‌ 10 ಜಿಲ್ಲೆಗಳ ಪಟ್ಟಿಯಲ್ಲಿ ಇರಬೇಕು ಎನ್ನುವುದು ನನ್ನ ಸದಾಶಯ. ಅದರಂತೆ ಸಾರ್ವನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.