ಮಾಸ್ಕ್ ಧರಿಸದವರಿಗೆ ದಂಡ ಕಾರ್ಯಾಚರಣೆ

Team Udayavani, Jun 29, 2020, 9:02 AM IST

A fine operation for those who don’t wear the mask

ಬೀದರ: ನಗರದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವ, ಸಾಮಾಜಿಕ ಅಂತರ ಕಾಪಾಡದೇ ಇರುವವರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವ ವ್ಯಕ್ತಿಗಳಿಗೆ ದಂಡ ವಿಧಿಸಿ ತಿಳಿವಳಿಕೆ ಮೂಡಿಸುವ ವಿಶಿಷ್ಟ ಕಾರ್ಯಾಚರಣೆ ರವಿವಾರ ನಡೆಸಲಾಯಿತು.

ಜಿಲ್ಲಾಧಿಕಾರಿ ನಿರ್ದೇಶನದಂತೆ 18 ಇಲಾಖೆಗಳ ಅಧಿಕಾರಿಗಳ ತಂಡದಿಂದ ಬೀದರ ನಗರಾದ್ಯಂತ ಬೆಳಗ್ಗೆಯಿಂದಲೇ ಬಿರುಸಿನ ಸಂಚಾರ ನಡೆಯಿತು. ಕೋವಿಡ್‌-19 ಸೋಂಕು ತಡೆಗೆ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಲ್ಲೆಂದರಲ್ಲಿ ಉಗುಳಬಾರದು ಎನ್ನುವ ನಿಯಮಗಳನ್ನು ಉಲ್ಲಂಘಿ ಸಿದವರ ಮೇಲೆ ಸ್ಥಳದಲ್ಲೇ ಅ ಧಿಕಾರಿಗಳು 200 ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದರು.

ವಿವಿಧ 18 ಇಲಾಖೆಗಳ ಅಧಿಕಾರಿಗಳು ತಮಗೆ ಹಂಚಿಕೆಯಾದ 1ರಿಂದ 35ವಾರ್ಡ್‌ಗಳಲ್ಲಿ ಪೊಲೀಸ್‌ ಸಿಬ್ಬಂದಿ ಜೊತೆಗೆ ಸಂಚರಿಸಿ ದಂಡ ವಿಧಿಸಿದರು. ಹೊಟೇಲ್‌ ಮತ್ತು ಅಂಗಡಿಗಳಲ್ಲಿನ ಸ್ಥಿತಿಗತಿ ಪರಿಶೀಲಿಸಿದರು. ದೈಹಿಕ ಅಂತರಕ್ಕೆ ವ್ಯವಸ್ಥೆ ಮಾಡದ ಕೆಲವು ಹೊಟೇಲ್‌ಗ‌ಳ ಮಾಲೀಕರಿಗೆ, ಅಂಗಡಿಗಳಲ್ಲಿ ಸ್ಯಾನಿಟೈಜರ್‌ ಇಟ್ಟಿರದ, ಮಾಸ್ಕ್ ಧರಿಸದ ಕೆಲವು ಅಂಗಡಿಗಳ ಮಾಲೀಕರಿಗೂ ದಂಡ ವಿಧಿಸಿದರು. ಜಿಲ್ಲಾದ್ಯಂತ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೋವಿಡ್‌ ನಿಯಮಗಳನ್ನು ಕೆಲವರು ಉಲ್ಲಂಘಿಸುವುದು ಕಂಡು ಬರುತ್ತಿದೆ. ವೈಯಕ್ತಿಕ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದಾಗಿ ಮಾಸ್ಕ್ ಧರಿಸುವುದು ಎಲ್ಲರ ಜವಾಬ್ದಾರಿಯಾಗಲಿ, ಇದು ಎಲ್ಲರಿಗೂ ಪ್ರೇರಣೆಯಾಗಲಿ ಎನ್ನುವ ಸಂದೇಶ ಸಾರ್ವಜನಿಕರಿಗೆ ಹೋಗುವ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ತಿಳಿಸಿದ್ದು, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಮಾಸ್ಕ್ ಧರಿಸುವ ಜತೆಗೆ ಸುರಕ್ಷಿತ ಅಂತರ ಕಾಪಾಡಿ ಸಮಾಜದ ಸ್ವಾಸ್ಥ್ಯಕಾಪಾಡಲು ಸಹಕರಿಸಬೇಕೆಂದು ಕೋರಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.