
ಚುನಾವಣೆ ಕರ್ತವ್ಯಕ್ಕೆ ಗೈರು: ಇಬ್ಬರು ಸಸ್ಪೆಂಡ್
Team Udayavani, Mar 20, 2023, 6:25 AM IST

ಬೀದರ: ಚುನಾವಣೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಔರಾದ ತಾಲೂಕಿನಲ್ಲಿ ಚುನಾವಣೆ ಕಾರ್ಯ ನಿರ್ವಹಣೆ ಹಾಗೂ ತರಬೇತಿ ಕೈಗೊಂಡಿದ್ದು, ಈ ಬಗ್ಗೆ ಔರಾದ ಪಂಚಾಯತ್ ರಾಜ್ ಉಪ ವಿಭಾಗದ ಎಫ್‌ಡಿಎ ವಿಠಲರಾವ್ ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ ರಾಜಕುಮಾರ ಅವರಿಗೆ ಮುಂಚಿತವಾಗಿ ತಿಳಿಸಿದರೂ ಯಾವುದೇ ಮುನ್ಸೂಚನೆ ನೀಡದೆ, ಮೇಲಾಧಿಕಾರಿಗಳ ಅನುಮತಿ ಪಡೆಯದೆ ತರಬೇತಿಗೆ ಗೈರಾಗಿದ್ದಾರೆ.
ಆ ಮೂಲಕ ಚುನಾವಣೆ ಕಾರ್ಯದಲ್ಲಿ ತೊಡಕುಂಟು ಮಾಡಿದ್ದಾರೆ. ಈ ಪ್ರಯುಕ್ತ ಇಬ್ಬರು ಅಧಿಕಾರಿಗಳನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಹಾಗೂ ನಿಯಮಾನುಸಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
