ಗುಲ್ಬರ್ಗಾ ವಿವಿ ವಿರುದ್ದ ಎಬಿವಿಪಿ ಆಕ್ರೋಶ: ವಿದ್ಯಾರ್ಥಿ ವಿರೋಧಿ ನಿಲುವಿಗೆ ಖಂಡನೆ

Team Udayavani, Sep 21, 2022, 5:46 PM IST

14VV

ಬೀದರ: ಗುಲ್ಬರ್ಗಾ ವಿಶ್ವ ವಿದ್ಯಾಲಯ ವಿದ್ಯಾರ್ಥಿ ವಿರೋಧಿ ನಿಲುವು ಅನುಸರಿಸುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಮಂಗಳವಾರ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು. ಕೋವಿಡ್‌ ಕಾರಣದಿಂದ ಪ್ರಮೋಟ್‌ ಆದವರು ಪರೀಕ್ಷೆ ಬರೆಯಬೇಕೆಂಬ ವಿವಿ ನಿಲುವು ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಿದೆ. ರಾಜ್ಯದ ಎಲ್ಲ ವಿವಿಗಳ 2 ಮತ್ತು 4ನೇ ಸೆಮಿಸ್ಟರ್‌ ವಿದ್ಯಾರ್ಥಿಗಳನ್ನು ಪ್ರಮೋಟ್‌ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಆದರೀಗ ಗುಲ್ಬರ್ಗ ವಿವಿಯಲ್ಲಿ ಒಂದೋ, ಎರಡೋ ವಿಷಯ (ಪ್ರಥಮ, ತೃತೀಯ ಸೆಮ್‌ಗಳಲ್ಲಿ) ಫೇಲ್‌ ಆದವರನ್ನು 2, 4ನೇ ಸೆಮ್‌ಗೆ ಪ್ರಮೋಟ್‌ ಮಾಡಿಲ್ಲ. ಪರೀಕ್ಷೆ ಬರೆಯಬೇಕು ಎಂದು ಹೇಳುತ್ತಿರುವುದು ವಿದ್ಯಾರ್ಥಿಗಳಿಗೆ ಶಾಕ್‌ ನೀಡಿದೆ ಎಂದು ಹೇಳಿದೆ.

ಕೋವಿಡ್‌ ಕಾರಣಕ್ಕೆ 2020, 2021ರಲ್ಲಿ ಕ್ರಮವಾಗಿ ನಡೆಯಬೇಕಿದ್ದ ಎರಡು, ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಪ್ರಮೋಟ್‌ ಮಾಡಲಾಗಿತ್ತು. ಇದಕ್ಕೆ 1, 3ನೇ ಸೆಮಿಸ್ಟರ್‌ ಫಲಿತಾಂಶ ಅಧಾರವಾಗಿ ಇಟ್ಟುಕೊಳ್ಳಲಾಗಿತ್ತು. 1, 3ರಲ್ಲಿ ಫೇಲ್‌ ಅದವರನ್ನು ಪ್ರಮೋಟ್‌ ಮಾಡಲಾಗಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದರೀಗ ದಿಢೀರ್‌ ಅಂತ ಸುತ್ತೋಲೆ ಹೊರಡಿಸಿರುವ ವಿವಿ 2 ಮತ್ತು 4 ನೇ ಸೆಮ್‌ ಪರೀಕ್ಷೆಗಳನ್ನು ಬರೆಯಲೇಬೇಕು ಎಂದು ಹೇಳಿದ್ದು, ವಿದ್ಯಾರ್ಥಿಗಳಲ್ಲಿ ಅಪಘಾತ ಮೂಡಿಸಿದೆ. ಲಾಕ್‌ ಡೌನ್‌ನಿಂದ 2, 4ನೇ ಸೆಮ್‌ನ ಒಂದೂ ತರಗತಿ ನಡೆದಿಲ್ಲ, ಜತೆಗೆ ಪಠ್ಯದ ಏನೆಂಬುದು ಗೊತ್ತಿಲ್ಲ. ಹೀಗಿರುವಾಗ ಪರೀಕ್ಷೆ ಬರೆಯಬೇಕು ಎಂದಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಈಗಾಗಲೇ ಪದವಿ ಪೂರ್ಣಗೊಳ್ಳುವುದು ಒಂದು ವರ್ಷ ವಿಳಂಬವಾಗಿದೆ. 2, 4ನೇ ಸೆಮ್‌ ಪರೀಕ್ಷೆ ಬರೆದು ಫಲಿತಾಂಶ ಬರಲು ಒಂದು ವರ್ಷ ಕಾಯಬೇಕಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಅಲ್ಲದೆ ಪ್ರಮೋಟ್‌ ಗೆ 2019-20, 2020-21ರಲ್ಲಿ 2, 4ನೇ ಸೆಮ್‌ ವಿದ್ಯಾರ್ಥಿಗಳಿಂದ ಪರೀಕ್ಷೆ ಶುಲ್ಕ ಕಟ್ಟಿಸಿಕೊಂಡು ಕೋವಿಡ್‌ ಕಾರಣಕ್ಕೆ ಪ್ರಮೋಟ್‌ ಮಾಡಲಾಗಿತ್ತು. ಆದರೀಗ ಮತ್ತೆ ಪರೀಕ್ಷೆ ಬರೆಯಲು ಹೇಳುತ್ತಿರುವುದಲ್ಲದೆ, ಪುನಃ 1600 ರೂ. ಶುಲ್ಕ ಕೇಳುತ್ತಿದ್ದಾರೆ. ಪ್ರಸ್ತುತ ಮತ್ತು ಪ್ರಮೋಟ್‌ ಆಗದ ಸೆಮ್‌ ಸೇರಿ 3,200 ರೂ. ಕಟ್ಟಬೇಕೆಂದು ಹೇಳುತ್ತಿದ್ದ, ಹೀಗೆ ಫೀಸ್‌ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಈ ಹಿಂದೆ ತಿಳಿಸಿರುವಂತೆ ಎರಡನೇ ಹಾಗು ನಾಲ್ಕನೇ ಸೆಮಿಸ್ಟರ್‌ ಪ್ರಮೋಟ್‌ ಮಾಡಿರುವ ನಿಲುವು ವಿದ್ಯಾರ್ಥಿಗಳ ಭವಿಷ್ಯ ದೃಷ್ಟಿಯಿಂದ ಮುಂದುವರೆಸಿ ಸದ್ಯ ವಿವಿ ಹೊರಡಿಸಿರುವ ಸುತ್ತೋಲೆ ವಾಪಸ್‌ ಪಡೆಯಬೇಕು. ಇಲ್ಲದಿದ್ದಲ್ಲಿ ವಿವಿ ಮುತ್ತಿಗೆ ಹಾಕಿ ಬೃಹತ್‌ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪ್ರತಿಭಟನೆಯಲ್ಲಿ ನಗರ ಕಾರ್ಯದರ್ಶಿ ಅಂಬ್ರೇಶ್‌, ಹೇಮಂತ್‌, ಅಭಿಷೇಕ, ಪವನ ರಾಜಗೀರ, ಓಂಕಾರ ರೆಡ್ಡಿ, ಭಜರಂಗ ಗಡಿ ಕುಸುನೂರು, ಆಕಾಶ ರಾಜಗೀರ, ಪ್ರೇಮ ಸಾಗರ ಇನ್ನಿತರರಿದ್ದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.