ಜಾನುವಾರು ಕಿವಿ ಗುಂಡಿ ಅಳವಡಿಕೆ


Team Udayavani, Aug 18, 2018, 11:44 AM IST

bid-3.jpg

ಬೀದರ: ಜಾನುವಾರುಗಳಿಗೆ ಕಿವಿ ಗುಂಡಿಗಳನ್ನು ಅಳವಡಿಸುವ ಕಾರ್ಯ ಒಳ್ಳೆಯ ಉದ್ದೇಶ ಹೊಂದಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಜಿಲ್ಲಾದ್ಯಂತ ಈ ಕಾರ್ಯಕ್ರಮವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆರ್‌.ಸೆಲ್ವಮಣಿ ಹೇಳಿದರು.

ಗೂನ್ನಳ್ಳಿಯಲ್ಲಿ ಜಿಲ್ಲಾ ಪಂಚಾಯತ್‌, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಬೀದರ ಹಾಗೂ ಬೀದರ ಕಲಬುರಗಿ ಯಾದಗಿರಿ ಹಾಲು ಒಕ್ಕೂಟ ಕಲಬುರಗಿ ಸಂಯುಕ್ತಾಶ್ರಯದಲ್ಲಿ ಇನಾಪ್‌ ಯೋಜನೆಯಡಿ ಗುರುವಾರ ನಡೆದ ಜಾನುವಾರುಗಳಿಗೆ ಕಿವಿ ಗುಂಡಿಗಳನ್ನು ಅಳವಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ| ರವಿ ಭೂರೆ ಪ್ರಾಸ್ತಾವಿಕ ಮಾತನಾಡಿ,
ಜಿಲ್ಲೆಯಲ್ಲಿ ಒಟ್ಟು 1.50 ಲಕ್ಷ ಕಿವಿಗುಂಡಿಗಳನ್ನು ಹಾಕಬೇಕಿದೆ. ಆದ್ದರಿಂದ ನಾವು ಈ ಕಾರ್ಯವನ್ನು ಸಮಾರೋಪಾದಿಯಲ್ಲಿ
ಮಾಡಬೇಕಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು. ಕಿವಿ ಗುಂಡಿಗಳನ್ನು ಅಳವಡಿಸಿಕೊಳ್ಳಲು ಜನರು ಮುಂದೆ ಬರಬೇಕು. ಇದಕ್ಕೆ ಜನರು ಬೇಡ ಅನ್ನಬಾರದು ಎಂದು ತಿಳಿಸಿದರು.

ಚಿಟ್ಟಾ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪ್ರತಿಭಾ ವಿದ್ಯಾಸಾಗರ ಸ್ವಾಮಿ ಮಾತನಾಡಿ, ಜಾನುವಾರುಗಳು ದೇವರಿದ್ದಂತೆ.
ಹಸು ಹಾಗೂ ಎಮ್ಮೆ ಹಾಲಿನಲ್ಲಿ ಹೆಚ್ಚು ಪ್ರಮಾಣದಲ್ಲಿ ರೋಗ ನಿರೋಧಕ ಶಕ್ತಿ ಇರುತ್ತದೆ. ಮಕ್ಕಳು ಆರೋಗ್ಯದಿಂದ
ಬಾಳಿ ಬದುಕಲು ಹಾಲು ಅತಿ ಅವಶ್ಯವಾಗಿದೆ. ಆದ್ದರಿಂದ ಪ್ರತಿ ಮನೆಯಲ್ಲೂ ಹಸು, ಎಮ್ಮೆಗಳನ್ನು ಸಾಕಲು ಜನರು
ಮುಂದಾಗಬೇಕು ಎಂದು ತಿಳಿಸಿದರು. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಜಿಯಾವುಲ್‌ ಮಾತನಾಡಿ, ಜಾನುವಾರುಗಳಿಗೆ ಕಿವಿ ಗುಂಡಿಗಳನ್ನು ಹಾಕುವುದರಿಂದ ರೈತರಿಗೆ ಬಹಳ ಅನುಕೂಲವಾಗಲಿದೆ. ಆದ್ದರಿಂದ ಜಿಲ್ಲೆಯ ಪ್ರತಿಯೊಬ್ಬ ರೈತರು ತಮ್ಮ ಜಾನುವಾರುಗಳಿಗೆ ಕಿವಿ ಗುಂಡಿಗಳನ್ನು ಅಳವಡಿಸಲು ಕಾಳಜಿ ವಹಿಸಬೇಕು. ದೇಶಿ ಆಕಳು ಸಾಕಣೆ ಪ್ರಮಾಣ ಕಡಿಮೆಯಾಗಿದೆ.

ಆದ್ದರಿಂದ ರೈತರು ಜಾನುವಾರು ಸಾಕುವುದನ್ನು ಪರಿಪಾಠವನ್ನಾಗಿಸಿಕೊಳ್ಳಬೇಕು. ರೈತರು ಜಾನುವಾರುಗಳನ್ನು ಹೆಚ್ಚು ಸಂಖ್ಯೆಯಲ್ಲಿ ಸಾಕುವುದರಿಂದ ಬೆಳೆ ಉತ್ಪಾದನಾ ವೆಚ್ಚ ಕಡಿಮೆಯಾಗಲಿದೆ. ಇದನ್ನು ಪ್ರತಿಯೊಬ್ಬ ರೈತರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸ್ಥಳೀಯ ಗ್ರಾಮ್‌ ಪಂಚಾಯತ್‌ ಉಪಾಧ್ಯಕ್ಷೆ ಲಾಲಮ್ಮ ನರಸಪ್ಪ, ಸದಸ್ಯ ಗಫಾರ್‌ಸಾಬ್‌, ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಚಂದ್ರಕಲಾ, ಕೆಎಂಎಫ್‌ ವ್ಯವಸ್ಥಾಪಕ ಡಾ| ಸುನೀಲಕುಮಾರ, ಉಪ ವ್ಯವಸ್ಥಾಪಕ ಮನೋಹರ ಕುಲಕರ್ಣಿ, ಪ್ರಗತಿಪರ ರೈತ ಹಣಮಂತಪ್ಪ, ಬೆಂಗಳೂರಿನ ಡಾ| ಮಲಗೋಳ್‌, ಡಾ| ಧನರಾಜ, ಡಾ| ಶೇಶಪ್ಪ, ಡಾ| ಓಂಕಾರ ಪಾಟೀಲ, ಡಾ| ಚಂದ್ರಶೇಖರ ಪಾಟೀಲ, ಲಲಿತಾಬಾಯಿ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.