ಶಿಕ್ಷಣ ಕ್ಷೇತ್ರ ಸುಧಾರಣೆಗೆ ನಿರಂತರ ಶ್ರಮ: ಅಜಯ್‌ ಕಾಮತ್‌


Team Udayavani, Oct 24, 2021, 1:01 PM IST

12school

ರಾಯಚೂರು: ದೇಶದ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ, ಸಮಸ್ಯೆಗಳ ನಿವಾರಣೆಗೆ ಹಾಗೂ ದೇಶದ ಪ್ರತಿ ಮಗುವಿಗೂ ಸಮಾನ ಶಿಕ್ಷಣ ಸಿಗಬೇಕು ಎಂಬ ಮಹೋನ್ನತ ಧ್ಯೆಯದೊಂದಿಗೆ ಉತ್ಸಾಹಿ ವಿದ್ಯಾರ್ಥಿಗಳು ಪ್ರಾರಂಭಿಸಿದ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಶನ್‌ ಸಂಘಟನೆ ಇಂದು ಎಲ್ಲ ರಾಜ್ಯಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಸಂಘಟನೆ ರಾಜ್ಯ ಕಾರ್ಯದರ್ಶಿ ಅಜಯ್‌ ಕಾಮತ್‌ ತಿಳಿಸಿದರು.

ನಗರದ ಸ್ವಾಮಿ ವಿವೇಕಾನಂದ ಕಾಲೇಜನಲ್ಲಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125ನೇ ಜನ್ಮ ವಾರ್ಷಿಕ ಹಾಗೂ ಭಗತ್‌ ಸಿಂಗ್‌ ಅವರ 114ನೇ ಜನ್ಮದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ರಾಯಚೂರು ಮತ್ತು ಯಾದಗಿರಿ ವಲಯ ಮಟ್ಟದ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಸತತವಾಗಿ 7 ದಶಕಗಳಿಂದ ನಮ್ಮ ಸಂಘಟನೆ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳನ್ನು ಸಂಘಟಿಸುತ್ತಾ ಸಾವಿರಾರು ಐತಿಹಾಸಿಕ ಹೋರಾಟಗಳನ್ನು ಕಟ್ಟಿದೆ. ಸಕ್ರಿಯವಾಗಿ ವಿದ್ಯಾರ್ಥಿಗಳನ್ನು ಸಂಘಟಿಸುತ್ತಿದೆ. ಬಡತನ, ಅಸಮಾನತೆ, ನಿರುದ್ಯೋಗ, ಮಹಿಳೆಯರ ಮೇಲಿನ ದೌರ್ಜನ್ಯ. ಹಾಗೂ ಕೋಮು ವೈಷಮ್ಯವಿಲ್ಲದ ಭಾರತದ ನಿರ್ಮಿಸುವುದು ಭಗತ್‌ ಸಿಂಗ್‌, ನೇತಾಜಿ ಸುಭಾಷ ಚಂದ್ರ ಬೋಸ್‌ರಂಥ ಮಹಾತ್ಮರ ಕನಸಾಗಿತ್ತು. ಈ ಕನಸು ನನಸು ಮಾಡುವುದೇ ನಮ್ಮ ಸಂಘಟನೆ ಗುರಿ ಎಂದರು.

ಸರ್ಕಾರಗಳು, ವಿಶ್ವವಿದ್ಯಾಲಯಗಳು ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ಪರೀಕ್ಷೆ ನಡೆಸಲು ಮುಂದಾದಾಗ, ಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್‌ ಪರೀಕ್ಷೆ ಹೇರಬೇಡಿ. ಎಲ್ಲ ವಿದ್ಯಾರ್ಥಿಗಳಿಗೂ ಲಸಿಕಿ ಆದ ನಂತರವೇ ಆಫ್‌ಲೈನ್‌ ತರಗತಿ ನಡೆಸಿ ಎಂಬ ಹೋರಾಟ ಮೆಚ್ಚುಗೆ ಪಡೆಯಿತು. ಹೋರಾಟಕ್ಕೆ ಮಣಿದು ಯುಜಿಸಿ ನೂತನ ಪರೀಕ್ಷಾ ಮಾರ್ಗಸೂಚಿ ಪ್ರಕಟಿಸಿತ್ತು. ನಮ್ಮ ಹಲವಾರು ಶಿಕ್ಷಣ ತಜ್ಞರು ಹಾಗೂ ಸಮಾಜ ಸುಧಾರಕರು, ಶಿಕ್ಷಣದ ಪ್ರತಿಯೊಬ್ಬರಿಗೂ ಸಿಗಬೇಕು ಮತ್ತು ಆ ಶಿಕ್ಷಣವು ವೈಜ್ಞಾನಿಕ, ಧರ್ಮನಿರಪೇಕ್ಷವಾಗಿರಬೇಕು ಎಂದು ಪ್ರತಿಪಾದಿಸಿದ್ದರು.

ಆದರೆ, ಇಂದು ಕ್ರಮೇಣ ಶಿಕ್ಷಣ ಉಳ್ಳವರ ಪಾಲಾಗುತ್ತಿದೆ. ವ್ಯಕ್ತಿತ್ವ ನಿರ್ಮಿಸುವ ಉದ್ದೇಶದಿಂದ ದೂರವಾಗಿ ಕೇವಲ ಸರ್ಟಿಫಿಕೇಟ್‌ಗಾಗಿ, ಅಂಕಗಳಿಕೆಗಾಗಿ ಎಂಬಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಮಹೇಶ್‌ ಚೀಕಲಪರ್ವಿ ಮಾತನಾಡಿದರು. ರಾಜ್ಯ ಘಟಕದ ಸದಸ್ಯರಾದ ಮುಖಂಡರಾದ ವೆಂಕಟೇಶ್‌ ದೇವದುರ್ಗ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಪೀರಸಾಬ್‌, ಅಪೂರ್ವ, ರಮೇಶ ದೇವಕರ್‌ ಸೇರಿ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.