ಎಲ್ಲ ಕಾರ್ಯಕ್ಕೆ ಅಂಗನವಾಡಿ ಸಿಬ್ಬಂದಿ ನಿಯೋಜನೆ ಸಲ್ಲ

Team Udayavani, Jan 17, 2019, 8:04 AM IST

bid-2.jpg

ಬೀದರ: ಮಕ್ಕಳ ಪಾಲನೆ-ಪೋಷಣೆಯ ಮಹತ್ವದ ಜವಾಬ್ದಾರಿ ಸ್ಥಾನದಲ್ಲಿರುವ ಅಂಗನವಾಡಿ ನೌಕರರನ್ನು ಪ್ರತಿಯೊಂದು ಕಾರ್ಯಕ್ರಮಕ್ಕೆ ನಿಯೋಜಿಸುವುದು ತಪ್ಪಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ನಗರದ ಜಿಲ್ಲಾ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಗನವಾಡಿ ನೌಕರರು ಬೇರೆ ಕಾರ್ಯಕ್ರಮಕ್ಕೆ ಹೋಗಿರುವ ದಿನ, ಅಂಗನವಾಡಿಗಳಲ್ಲಿನ ಮಕ್ಕಳಿಗೆ ಆಹಾರ ಸೇರಿದಂತೆ ಅಗತ್ಯ ಸೌಕರ್ಯ ಸಿಗದೇ ಮಕ್ಕಳ ಸೇವೆಯಲ್ಲಿ ಅಡೆತಡೆ ಉಂಟಾಗುವುದು ಕಂಡು ಬರುತ್ತಿದೆ. ಹೀಗಾಗಿ ಅಂಗನವಾಡಿ ನೌಕರರ ಬದಲಾಗಿ ಸ್ವಸಹಾಯ ಸಂಘದ ಸದಸ್ಯರಿಗೆ, ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಕಾರ್ಯಕ್ರಮಕ್ಕೆ ಕರೆಯಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಮತದಾರರ ದಿನ: ಪ್ರತಿ ವರ್ಷ ಜನವರಿ 25ರಂದು ಆಚರಿಸುವ ರಾಷ್ಟ್ರೀಯ ಮತದಾರರ ದಿನವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕು. ದಿನಾಚರಣೆಯು ಜಿಲ್ಲಾ, ತಾಲೂಕು ಮತ್ತು ಮತಗಟ್ಟೆ ಮಟ್ಟದಲ್ಲಿ ಕೂಡ ಅಚ್ಚುಕಟ್ಟಾಗಿ ನಡೆಯುವಂತಾಗಬೇಕು. ಈ ಸಂದರ್ಭದಲ್ಲಿ ಹೊಸದಾಗಿ ನೋಂದಣಿಯಾಗಿರುವ ಮತದಾರರನ್ನು ಸನ್ಮಾನಿಸಬೇಕು. ‘ಪ್ರೌಡ್‌ ಟು ಬಿ ಓಟರ್‌ ರೆಡಿ ಟು ವೋಟ್’ ಎನ್ನುವ ಘೋಷಣೆ ಚುನಾವಣಾ ಆಯೋಗದ ಲೋಗೊ ಇರುವ ಬ್ಯಾಡ್ಜ್ ಮತ್ತು ಚುನಾವಣಾ ಗುರುತಿನ ಚೀಟಿಯನ್ನು ವಿತರಿಸಲಾಗುತ್ತದೆ.

ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ನಿರ್ಮಿಸಿರುವ ಇವಿಎಂ ಹಾಗೂ ವಿವಿಪ್ಯಾಟ್, ನೋಂದಣಿ ಸೇರ್ಪಡೆ ಬಗ್ಗೆ ವಿಡಿಯೋಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮತದಾರರ ಪಟ್ಟಿಯಲ್ಲಿ ಮಹಿಳಾ ಮತದಾರರ ಹೆಸರು ನೋಂದಣಿ ಪ್ರಮಾಣ ಜಿಲ್ಲೆಯಲ್ಲಿ ಇನ್ನೂ ಹೆಚ್ಚಬೇಕಿದೆ. ಈ ನಿಟ್ಟಿನಲ್ಲಿ ದಿನಾಚರಣೆ ವೇಳೆಯಲ್ಲಿ ಹೆಚ್ಚು ಮಹಿಳೆಯರು ಸೇರುವಂತೆ ನೋಡಿಕೊಳ್ಳಬೇಕು. ಸ್ವಸಹಾಯ ಸಂಘದ ಸದಸ್ಯರನ್ನು ಹೆಚ್ಚು ಸಂಖ್ಯೆಯಲ್ಲಿ ಸೇರಿಸಲು ಮೊದಲ ಆದ್ಯತೆ ಕೊಡಬೇಕು ಎಂದರು. ಈ ನಿಟ್ಟಿನಲ್ಲಿ ಬೃಹತ್‌ ಜನಜಾಗೃತಿ ರ್ಯಾಲಿ ನಡೆಸುವಂತಾಗಬೇಕು ಎಂದು ತಿಳಿಸಿದರು.

ಸ್ವೀಪ್‌ ಸಮಿತಿಯ ಸಮನ್ವಯಾಧಿಕಾರಿ ಗೌತಮ ಅರಳಿ ಮಾತನಾಡಿಮ ಶಾಲಾ-ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್‌ಗ ಆಯಾ ಶಾಲೆಯ ಪ್ರಾಂಶುಪಾಲರು ಮುಖ್ಯಸ್ಥರಾಗಿರುತ್ತಾರೆ. ಈ ಕ್ಲಬ್‌ಗ ಉತ್ತಮ ಸಂಪನ್ಮೂಲ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಮತದಾರರ ಹೆಸರು ನೋಂದಣಿ ಹಾಗೂ ಮತದಾನ ಜಾಗೃತಿಯಂತಹ ವಿಷಯಗಳನ್ನು ಮಕ್ಕಳಿಗೆ ತಿಳಿಸುತ್ತ ಹೋಗಬೇಕು. ಈ ವಿಷಯದಲ್ಲಿ ಉತ್ತಮ ಪ್ರಗತಿ ಸಾಧಿಸಿದವರಿಗೆ ಸನ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ಚುನಾವಣಾ ಸಾಕ್ಷರತಾ ಕ್ಲಬ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ತಿಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಿಇಒ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.