ಅನುಭವ ಮಂಟಪ ಉತ್ಸವ ಭಿತ್ತಿ ಪತ್ರ ಬಿಡುಗಡೆ

Team Udayavani, Oct 21, 2017, 10:01 AM IST

-gul-1.jpg

ಭಾಲ್ಕಿ: ಬಸವಕಲ್ಯಾಣದ ಅನುಭವ ಮಂಟಪ ಪರಿಸರದಲ್ಲಿ ನ.25, 26 ರಂದು ನಡೆಯಲಿರುವ 38ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಹಾಯ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್‌ ಅನುಭವ ಮಂಟಪ ವತಿಯಿಂದ ಶುಕ್ರವಾರ ನಡೆದ 38ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವದ ಭಿತ್ತಿಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕಿದೆ. ಈ ನಿಟ್ಟಿನಲ್ಲಿ ತಾವು ಸಚಿವರಾದ ಮೇಲೆ ಬಸವಕಲ್ಯಾಣದಲ್ಲಿ ಶರಣರ ಸ್ಮಾರಕ, ಗುಹೆಗಳ ಸಂರಕ್ಷಣೆ ಹಾಗೂ ನೂತನ ಅನುಭವ ಮಂಟಪ ನಿರ್ಮಾಣಕ್ಕಾಗಿ ಅಂದಾಜು 600 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿದ್ದು, ಹಿರಿಯ ಸಾಹಿತಿ ಗೋರಚ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಮಾರ್ಚ್‌ ಒಳಗೆ ಮುಖ್ಯಮಂತ್ರಿಗಳನ್ನು ಕರೆಸಿ ಕಾಮಗಾರಿಗಳಿಗೆ ಚಾಲನೆ
ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಪವಿತ್ರ ಭೂಮಿಯಲ್ಲಿ ಅನುಭವ ಮಂಟಪ ಉತ್ಸವ ನಡೆಯುತ್ತಿರುವುದು ಸಂತಸ ತಂದಿದೆ. 21ನೇ ಶತಮಾನದಲ್ಲಿ ಅನುಭವ ಮಂಟಪ ಅಭಿವೃದ್ಧಿಯಲ್ಲಿ ಡಾ| ಚನ್ನಬಸವ ಪಟ್ಟದ್ದೇವರು, ಭೀಮಣ್ಣ ಖಂಡ್ರೆ ಸೇರಿದಂತೆ ಹಲವರ ಕೊಡುಗೆ ಮಹತ್ವದ್ದಾಗಿದೆ. 37 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಶರಣ ಕಮ್ಮಟದಂತಹ ಕಾರ್ಯಕ್ರಮಗಳಿಂದ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದೆ ಎಂದು ಹೇಳಿದರು.

ಅನುಭವ ಮಂಟಪ ಉತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಬಾಬು ವಾಲಿ ಮಾತನಾಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ಸವ ಯಶಸ್ವಿಗೊಳಿಸುವುದಾಗಿ ಭರವಸೆ ನೀಡಿದರು. ಸಾನ್ನಿಧ್ಯ ವಹಿಸಿದ್ದ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಕಲ್ಯಾಣದ ಅನುಭವ ಮಂಟಪ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕಿದೆ. ಅದರ ಭಾಗವಾಗಿ ನಡೆಯುತ್ತಿರುವ ಶರಣ ಕಮ್ಮಟ, ಅನುಭವ ಮಂಟಪ ಉತ್ಸವಕ್ಕೆ ಎಲ್ಲರ ಸಹಾಯ, ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಶ್ರೀ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದರು. ಅನುಭವ ಮಂಟಪ ಉತ್ಸವ ಗೌರವಾಧ್ಯಕ್ಷ ಜಯರಾಜ ಖಂಡ್ರೆ, ಕಾರ್ಯಾಧ್ಯಕ್ಷ ಶಿವರಾಜ ನರಶೆಟ್ಟೆ, ಪುರಸಭೆ ಅಧ್ಯಕ್ಷ ವಿಶಾಲ ವಿಶ್ವಂಬರ ಪುರಿ, ಹಣಮಂತರಾವ್‌ ಚವ್ಹಾಣ, ಶಶಿಧರ ಕೋಸಂಬೆ ಇದ್ದರು. ಚಂದ್ರಕಾಂತ ಬಿರಾದಾರ ರೂಪಿಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.