ವರ್ಷದಲ್ಲಿ ಅರಸು ಭವನ ಪೂರ್ಣ:ಖೂಬಾ


Team Udayavani, Aug 21, 2017, 11:39 AM IST

bidar 3.jpg

ಬಸವಕಲ್ಯಾಣ: ನಗರದಲ್ಲಿ ಡಿ.ದೇವರಾಜ ಅರಸು ಭವನ ನಿರ್ಮಾಣಕ್ಕಾಗಿ 1 ಕೋಟಿ ರೂ. ಮಂಜೂರಾಗಿದ್ದು, ಒಂದು
ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು. ನಗರದ ಸರ್ಕಾರಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 102ನೇ ಜನ್ಮದಿನಾಚಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವರ್ಷ ನಡೆಯಲಿರುವ ಅರಸು ಅವರ ಜನ್ಮದಿನಾಚರಣೆ ನೂತನ ಭವನದಲ್ಲಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಡಿ.ದೇವರಾಜ ಅರಸು ಇತಿಹಾಸ ನಿರ್ಮಿಸಿದವರು. ಭೂ ಸುಧಾರಣೆಯಂತಹ ಕಾಯ್ದೆ ಜಾರಿಗೆ ತಂದ ಅವರು, ಬಡವರ ಬಗ್ಗೆ ಕಾಳಜಿ ಹೊಂದಿದ್ದ ಹಿರಿಯ ರಾಜಕೀಯ ಮುತ್ಸದಿ. ಅವರು ತೋರಿಸಿದ ದಾರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನಡೆದಿದ್ದಾರೆ. ರಾಜ್ಯದಲ್ಲಿ ಹಿಂದುಳಿದ, ಬಡವರ ಪರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು. ಮೊಳಕೇರಾ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕ್ಷೇಮಲಿಂಗ ಬೆಳಂಬಗೆ ವಿಶೇಷ ಉಪನ್ಯಾಸ ನೀಡಿದರು. ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ಉಪಾಧ್ಯಕ್ಷ ಸಂಗಮೇಶ ಬಿರಾದಾರ, ತಹಶೀಲ್ದಾರ ಕೀರ್ತಿ, ತಾಪಂ ಇಒ ವಿಜಯಕುಮಾರ ಮಡ್ಡೆ, ನಗರಸಭೆ ಪೌರಾಯುಕ್ತ ಮಹ್ಮದ ಯುಸೂಫ್‌, ಗ್ರೇಡ್‌-2 ತಹಶೀಲ್ದಾರ ಸಂಗಯ್ಯ ಸ್ವಾಮಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಅಂಬಾರಾಯ ಉಪಸ್ಥಿತರಿದ್ದರು. ಇದೇ ವೇಳೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮತ್ತು ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು. ಅಸಮಾಧಾನ: ಅನಗತ್ಯ ವ್ಯಕ್ತಿಗಳು ವೇ ದಿಕೆ ಮೇಲಿದ್ದಿದ್ದಕ್ಕೆ ಅಸಮಾಧಾನ ವ್ಯಕ್ತ ಪಡಿಸಿದ ಶಾಸಕ ಖೂಬಾ, ಕಾರ್ಯಕ್ರಮವನ್ನು ಕಾಟಾಚಾರಕ್ಕೆ ಮಾಡದೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಶಿಸ್ತು ಮತ್ತು ಸಂಪ್ರದಾಯ ಕಾಪಾಡಿಕೊಳ್ಳಬೇಕು. ಅಗತ್ಯಕ್ಕಿಂತ ಹೆಚ್ಚು ಖುರ್ಚಿಯಾಕೆ ಹಾಕಲಾಗಿದೆ. ವಿಶೇಷ ಉಪನ್ಯಾಸ ನೀಡಲು ಬಂದವರಿಗೆ ಸ್ಥಳ ಇಲ್ಲದಾದರೆ ಹೇಗೆ ಎಂದು ಆಯೋಜಕರನ್ನು ತರಾಟೆಗೆ ತೆಗೆದುಕೊಂಡರು. ಹೀಗಾಗಿ ವೇದಿಕೆ ಹತ್ತಿರ ಕುಳಿತಿದ್ದ ಜಿಪಂ ಸದಸ್ಯೆ ನಿರ್ಮಲ ಮಾನೆಗೊಪಾಳೆ ಸೇರಿದಂತೆ ಇತರರು ಖುರ್ಚಿ ಖಾಲಿ ಮಾಡಿದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.