ಕಲೆ-ಸಾಹಿತ್ಯ ರಕ್ಷಣೆ ನಮ್ಮ ಜವಾಬ್ದಾರಿ


Team Udayavani, Feb 4, 2019, 10:21 AM IST

bid-1.jpg

ಬೀದರ: ಕಲೆ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಹೇಳಿದರು.

ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪಡಿಷತ್ತು, ಜಿಲ್ಲಾ ಚಿತ್ರಕಲಾ ಕಾಲೇಜುಗಳು ಮತ್ತು ಜಿಲ್ಲಾ ಚಿತ್ರ ಕಲಾ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಚಿತ್ರ-ಪುಸ್ತಕ ಸಂತೆಗೆ ಚಾಲನೆ ನೀಡಿದ ಅವರು ಮಾತನಾಡಿದರು.

ಸಾಹಿತ್ಯ ಹಾಗೂ ಕಲೆ ಒಂದು ನಾಣ್ಯದ ಎರಡು ಮುಖ. ಮಹಾ ನಗರಗಳಲ್ಲಿ ನಡೆಯುವ ಪುಸ್ತಕ ಸಂತೆ ಹಾಗೂ ಚಿತ್ರ ಸಂತೆ ನಗರದಲ್ಲಿ ನಡೆದಿರುವುದು ಸಂತಸ ತಂದಿದೆ. ಇಂತಹ ಕಾರ್ಯಕ್ರಮಗಳು ಪ್ರತಿವರ್ಷ ನಡೆಯುವಂತಾಗಬೇಕು. ಈ ಮೂಲಕ ಸಾಹಿತ್ಯ ಹಾಗೂ ಚಿತ್ರ ಕಲಾವಿದರನ್ನು ಗೌರವಿಸುವ ಕಾರ್ಯ ಆಗಬೇಕು ಎಂದರು.

ನಾಡೋಜ ಡಾ| ಜೆ.ಎಸ್‌.ಖಂಡೇರಾವ್‌ ಮಾತನಾಡಿ, ಬೆಂಗಳೂರು ನಗರದಲ್ಲಿ ನಡೆಯುವ ಸಂತೆಗಳು ಗಡಿ ಜಿಲ್ಲೆ ಬೀದರನಲ್ಲಿ ನಡೆದಿರುವುದು ಹರ್ಷ ತಂದಿದೆ. ಈ ಸಂತೆಯಲ್ಲಿ ಹಿರಿಯ ಮತ್ತು ಕಿರಿಯ ಕಲಾವಿದರು ಎನ್ನುವ ಭೇದ ಭಾವ ಇಲ್ಲ. ತಮ್ಮ ಕ್ಷೇತ್ರದಲ್ಲಿ ಹೆಚ್ಚು ಪರಿಣತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಕಲಾವಿದರ ನಡುವೆ ವಿಚಾರ ವಿನಿಮಯ, ಚರ್ಚೆ, ಸಂವಾದಗಳಿಗೆ ಈ ಚಿತ್ರ ಸಂತೆ ಅವಕಾಶ ಮಾಡಿಕೊಡುತ್ತದೆ. ವಿವಿಧ ಜಿಲ್ಲೆಗಳ ಕಲಾವಿದರು ಸಂತೆಯಲ್ಲಿ ಭಾಗವಹಿಸಿದ್ದು, ಜನರು ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಇದಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಬಾಲ ಗಾಂಧಿ ವೇಷಧಾರಿಗಳ ಮೆರವಣಿಗೆ ನೋಡುಗರ ಗಮನ ಸೇಳಿಯಿತು. ನಂತರ ಸುಮಾರು 350ಕ್ಕೂ ಅಧಿಕ ವಿದ್ಯಾರ್ಥಿಗಳು ಚಿತ್ರ ಸ್ಪರ್ಧೆಯಲ್ಲಿ ಭಾಗವಹಿಸಿ ವಿವಿಧ ಚಿತ್ರಗಳನ್ನು ಬಿಡಿಸಿದರು. ಸಂತೆಯಲ್ಲಿ ಭಾಗವಹಿಸಿದ ಕಲಾವಿದರ ಚಿತ್ರಗಳು ಹಾಗೂ ಪುಸ್ತಕಗಳನ್ನು ವೀಕ್ಷಿಸಿ ಖರೀದಿಸಿದರು. ಒಟ್ಟಾರೆ ರವಿವಾರ ನಡೆದ ವಿಭಿನ್ನ ಸಂತೆ ಕಾರ್ಯಕ್ರಮಗಳು ಸಾರ್ವಜನಿಕರ ಆಕರ್ಷಣೆ ಕೇಂದ್ರವಾಗಿತ್ತು.

ಅಕ್ಕ ಅನ್ನಪೂರ್ಣ ತಾಯಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಷ್ಣುಕಾಂತ ಠಾಕೂರ್‌ ಸೇರಿದಂತೆ ಅನೇಕ ಕಲಾವಿದರು ಭಾಗವಹಿಸಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.