ಪರಿಹಾರದ ಮೊತ್ತ ಹೆಚ್ಚಿಸಲು ಬಂಡೆಪ್ಪ ಖಾಶೆಂಪುರ್‌ ಆಗ್ರಹ


Team Udayavani, Feb 22, 2022, 11:52 AM IST

14apeal

ಬೀದರ: ಕುರಿ, ಮೇಕೆಗಳು ಮೃತಪಟ್ಟಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಖಾಶೆಂಪುರ್‌ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಅಧಿವೇಶನದಲ್ಲಿ ಪ್ರಶ್ನೋತ್ತರದ ವೇಳೆ ಮಾತನಾಡಿ ಅವರು, ಹೆಚ್ಚಾಗಿ ಹಾಲುಮತ, ಎಸ್ಸಿ-ಎಸ್ಟಿ ಸೇರಿದಂತೆ ಹಿಂದುಳಿದ ವರ್ಗದ ಬಡ ಜನರು ಕಷ್ಟಪಟ್ಟು ಕುರಿ, ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಮೃತ ಕುರಿ, ಮೇಕೆಗೆ ತಲಾ ಐದು ಸಾವಿರ ರೂ. ಪರಿಹಾರ ನೀಡಲಾಗುತ್ತಿದ್ದು, ಕೋವಿಡ್‌ ಹಿನ್ನೆಲೆ ಕಳೆದೆರಡು ವರ್ಷಗಳಿಂದ ನಿಲ್ಲಿಸಲಾಗಿದೆ. ಇದರಿಂದ ಸಾಕಾಣಿಕೆದಾರರು ಸಂಕಷ್ಟದಲ್ಲಿದ್ದಾರೆ ಎಂದರು.

ಈ ಹಿಂದೆ ಎಷ್ಟು ಕುರಿ, ಮೇಕೆಗಳು ಮೃತಪಟ್ಟಿವೆ ಎಂಬ ದಾಖಲೆ ಪರಿಶೀಲಿಸಿ ಸಾಕಾಣಿಕೆದಾರರಿಗೆ ಪರಿಹಾರ ಒದಗಿಸಬೇಕು. ಕುರಿ, ಮೇಕೆಗಳ ಮರಿ ಮೃತಪಟ್ಟರೆ 2.5 ಸಾವಿರ ರೂ., ದೊಡ್ಡ ಕುರಿ, ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರವಿದೆ. ಆದರೆ ಈಗ ಕುರಿ, ಮೇಕೆಗಳು 20 ಸಾವಿರ ರೂ. ಗಿಂತ ಹೆಚ್ಚಿನ ಬೆಲೆ ಬಾಳುತ್ತಿವೆ. ಹಾಗಾಗಿ ಪರಿಹಾರದ ಮೊತ್ತ ಕನಿಷ್ಟ 10 ಸಾವಿರ ರೂ. ನಿಗದಿ ಮಾಡುವಂತೆ ಒತ್ತಾಯಸಿದರು.

ಮೇಯಿಸಲು ವ್ಯವಸ್ಥೆ ಕಲ್ಪಿಸಿ: ಕುರಿ-ಮೇಕೆ ಮೇಯಿಸಲು ಸಮಸ್ಯೆಯಾಗುತ್ತಿದೆ. ಕಂದಾಯ ಮತ್ತು ಅರಣ್ಯ ಭೂಮಿಗಳಲ್ಲಿ ಕುರಿ, ಮೇಕೆಗಳಿಗೆ ನೀರಿನ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು. ಕುರಿ, ಮೇಕೆ ಸಾಕಾಣಿಕೆಯಿಂದ ವರ್ಷದಲ್ಲೇ ಡಬಲ್‌ ಆಗುತ್ತದೆ. ಹಾಗಾಗಿ ಸಾಕಾಣಿಕೆ ಉತ್ತೇಜಿಸುವ ಕೆಲಸ ಆಗಬೇಕು. ಜತೆಗೆ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ-ಮೇಕೆ ಸಾಕಾಣಿಕೆಗೆ ಒದಗಿಸುತ್ತಿರುವ ಸಹಾಯಧನದ ಮೊತ್ತ 75 ಸಾವಿರ ರೂ. ಗೆ ಹೆಚ್ಚಿಸಬೇಕು ಎಂದರು.

ಸಚಿವರ ಪ್ರಶ್ನೆಗೆ ಉತ್ತರಿಸಿದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ, ಪರಿಹಾರದ ಮೊತ್ತ ಹೆಚ್ಚಳ ಕುರಿತು ಶೀಘ್ರ ಸಂಬಂಧಪಟ್ಟವರ ಜತೆ ಸಭೆ ನಡೆದ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.