ಬಸವಕಲ್ಯಾಣ ಉಪ ಚುನಾವಣೆ: ‘ಕೈ’ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಆರಂಭ
Team Udayavani, Nov 28, 2020, 8:05 PM IST
ಬೀದರ್: ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ. ಆಗಲೇ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಕೆಪಿಸಿಸಿ ರಚಿಸಿರುವ ಅಭ್ಯರ್ಥಿ ಆಯ್ಕೆ ಸಮಿತಿಯ ಮೊದಲ ಸಭೆ ನಗರದ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ನಡೆದಿದೆ. ಸಮಿತಿಯ ಅಧ್ಯಕ್ಷರಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಸಂಯೋಜಕರಾಗಿರುವ ಶಾಸಕ ರಾಜಶೇಖರ ಪಾಟೀಲ ನೇತೃತ್ವದಲ್ಲಿ ಸದಸ್ಯರು ಸಭೆ ನಡೆಸಿದ್ದಾರಲ್ಲದೇ ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಮಿತಿ ಪ್ರತ್ಯೇಕ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದೆ.
ಬಳಿಕ 20 ಜನ ಟಿಕೆಟ್ ಆಕಾಂಕ್ಷಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ 8 ಜನ ಆಕಾಂಕ್ಷಿಗಳು ವ್ಯೆಯಕ್ತಿಕ ಟಿಕೆಟ್ ಆಗ್ರಹದ ಜತೆಗೆ ಸ್ಥಳೀಯರಿಗೆ ಮಾತ್ರ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರೇ, ಇನ್ನೂ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ, ಈ ಬಾರಿ ಅಲ್ಪಸಂಖ್ಯಾತರ ಒಬ್ಬರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ಮತ್ತೆ ಕೆಲವರು ಹೈಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಇರುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: ಸ್ಥಳೀಯ ರೈಲುಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳ!
ಎಂಎಲ್‌ಸಿ ವಿಜಯಸಿಂಗ್ ಅವರು ಎಂಎಲ್‌ಸಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ ಮತ್ತು ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದೇನೆ. ಹೀಗಾಗಿ ತಮಗೆ ಟಿಕೆಟ್ ನೀಡಬೇಕು ಎಂದು ಕೋರಿದರು. ಇದೇ ವೇಳೆ ವಿಜಯಸಿಂಗ್ ಮತ್ತು ಗೌತಮ ನಾರಾಯಣರಾವ್ ಅವರ ಪರ ಬೆಂಬಲಿಗರು ಸಮಿತಿಗೆ ಟಿಕೆಟ್ ಗಾಗಿ ಮನವಿ ಸಲ್ಲಿಸಿದರು.
ಆಕಾಂಕ್ಷಿಗಳೊಂದಿಗೆ ಸಭೆ ಬಳಿಕ ಮಾತನಾಡಿದ ಸಮಿತಿಯ ಅಧ್ಯಕ್ಷ ಈಶ್ವರ ಖಂಡ್ರೆ, ಆಯ್ಕೆ ಸಮಿತಿ ಆಕಾಂಕ್ಷಿತ ಅಭ್ಯರ್ಥಿಗಳ ವರದಿಯನ್ನು ಶೀಘ್ರ ವರಿಷ್ಠರಿಗೆ ಸಲ್ಲಿಸಲಿದ್ದು, ಅರ್ಹರನ್ನು ಪಕ್ಷ ಆಯ್ಕೆ ಮಾಡಲಿದೆ. ಉಳಿದವರೆಲ್ಲರೂ ಪಕ್ಷದ ನಿರ್ಣಯಕ್ಕೆ ಬದ್ಧರಾಗಿ ಅಭ್ಯರ್ಥಿಯ ಗೆಲುವಿಗೆ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಮಿತಿ ಸದಸ್ಯರಾದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಶಾಸಕ ಶರಣಪ್ರಕಾಶ ಪಾಟೀಲ, ಸಂತೋಷ್ ಲಾಡ್, ಮಾಜಿ ಉಪ ಸಭಾಪತಿ ಬಿಆರ್ ಪಾಟೀಲ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ ಭಾಗವಹಿಸಿದ್ದರು. ಶಾಸಕ ಪ್ರಿಯಾಂಕ ಖರ್ಗೆ ಗೈರಾಗಿದ್ದರು.
ಇದನ್ನೂ ಓದಿ: ಬೊಕ್ಕ ಪಟ್ನ ಇಂದ್ರಜಿತ್ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರಪತಿ ಪೊಲೀಸ್ ಪದಕ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ