“ಲಿಂಗಾಯತ ರ್ಯಾಲಿ’ಗೆ ಬೀದರ ಸಜ್ಜು


Team Udayavani, Jul 19, 2017, 3:32 PM IST

19-BID-1.gif

ಬೀದರ: ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸಾಂವಿಧಾನಿಕ ಮಾನ್ಯತೆಗಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ರಾಜ್ಯ
ಸರ್ಕಾರಕ್ಕೆ ಆಗ್ರಹಿಸಿ ಜು.19ರಂದು ಲಿಂಗಾಯತ ಸಮನ್ವಯ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ “ಲಿಂಗಾಯತ ಮಹಾ
ರ್ಯಾಲಿ’ಗೆ ಬೀದರ ಸಜ್ಜಾಗಿದ್ದು, ಸಾವಿರಾರು ಜನ ಸೇರುವ ನಿರೀಕ್ಷೆ ಇದೆ.

ಲಿಂಗಾಯತ ರ್ಯಾಲಿಯ ಪ್ರಚಾರಾರ್ಥ ಜಿಲ್ಲೆಯ ತಾಲೂಕು ಕೇಂದ್ರ ಹಾಗೂ ಹೋಬಳಿ ಮಟ್ಟದಲ್ಲಿ ವಾಹನಗಳ ಮೂಲಕ
ಪ್ರಚಾರ ನಡೆಸಲಾಗಿದೆ. ಪ್ರಮುಖ ರಸ್ತೆ, ವೃತ್ತಗಳಲ್ಲಿ ರ್ಯಾಲಿ ಕುರಿತು ಕಟೌಟ್‌ಗಳನ್ನು ಹಾಕಲಾಗಿದೆ. ನಗರದಲ್ಲಿ ಸಮನ್ವಯ ಸಮಿತಿ
ಕಾರ್ಯಕರ್ತರು ಮನೆ ಮನೆಗೂ ತೆರಳಿ ರ್ಯಾಲಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಮಂಗಳವಾರ ನಗರದಲ್ಲಿ
ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೈಕ್‌ ರ್ಯಾಲಿ ನಡೆಸಿ ರ್ಯಾಲಿಯ ಪ್ರಚಾರ ಮಾಡಲಾಗಿದೆ. ಈಗಾಗಲೇ ವಿವಿಧ
ಒಳಪಂಗಡಗಳು, ಲಿಂಗಾಯತ ಪರ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. 

ಬೀದರ ಮಾತ್ರವಲ್ಲದೇ ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳು ಹಾಗೂ ನೆರೆಯ ತೆಲಂಗಾಣ ಮತ್ತು ಮಹಾರಾಷ್ಟ್ರದ ವಿವಿಧೆಡೆಯಿಂದ ಸಾವಿರಾರು ಜನ ಬಸವಾನುಯಾಯಿಗಳು ಸೇರಲಿದ್ದಾರೆ. ಕಲಬುರಗಿಯ ಸುಲಫಲ ಮಠದ ಶ್ರೀಗಳ ನೇತೃತ್ವದಲ್ಲಿ ಸುಮಾರು 20 ಜನ ಸ್ವಾಮೀಜಿಗಳು ರ್ಯಾಲಿಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಇದು ಮೌನ ಮೆರವಣಿಗೆ ಆಗಿದ್ದು, ಯಾವುದೇ ಜಯಘೋಷ ಇರುವುದಿಲ್ಲ. ಅಂದು ಬೆಳಗ್ಗೆ 11 ಗಂಟೆಗೆ ನಗರದ ನೆಹರು ಕ್ರೀಡಾಂಗಣದಿಂದ ಶುರುವಾಗಲಿರುವ ರ್ಯಾಲಿಯು ಸರ್ವಿಸ್‌ ಸ್ಯಾಂಡ್‌, ಅಂಬೇಡ್ಕರ ವೃತ್ತ, ಶಹಾಗಂಜ್‌, ಗವಾನ್‌ ವೃತ್ತ,
ಚೌಬಾರಾ, ಬಸವೇಶ್ವರ ವೃತ್ತದ ಮೂಲಕ ಹಾಯ್ದು ಜಿಲ್ಲಾ ಧಿಕಾರಿ ಕಚೇರಿ ಎದುರು ಸಮಾವೇಶಗೊಳ್ಳುವುದು. ನಂತರ
ಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾಗಳಿಗೆ ಸಲ್ಲಿಸಲಿದ್ದಾರೆ.

ವೀರಶೈವ ಲಿಂಗಾಯತ ಮತ್ತು ಲಿಂಗಾಯತ ಎರಡು ಬೇರೆ ಪದ. ಹಿಂದೆ ವೀರಶೈವ ಲಿಂಗಾಯತ ಎಂದು ಶಿಫಾರಸ್ಸು ಮಾಡಿದ್ದ ಪ್ರಸ್ತಾವನೆಗೆ ಮೂರು ಬಾರಿ ತಿರಸ್ಕಾರಗೊಂಡಿದೆ. ಹಾಗಾಗಿ ಲಿಂಗಾಯತ ಪದದೊಂದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ರ್ಯಾಲಿ ಮೂಲಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು. ಇದೊಂದು ಲಿಂಗಾಯತರ ಸ್ವಾಭಿಮಾನದ ರ್ಯಾಲಿ ಆಗಿದ್ದು, ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲೆಯ ಮಠಾಧೀಶರುಗಳು ಕೋರಿದ್ದಾರೆ. 

ಈ ಬೃಹತ್‌ ಪ್ರತಿಭಟನೆಯಲ್ಲಿ ಲಿಂಗಾಯತ ಭಕ್ತಾದಿಗಳು ಭಾಗವಹಿಸಬೇಕು. ಪ್ರಕೃತಿಯ ಯಾವುದೇ ಪ್ರತಿಕೂಲ ವಾತಾವರಣ ಇರಲಿ ಅಥವ ಇರದೇ ಇರಲಿ ಯಾವುದಕ್ಕೂ ಲೆಕ್ಕಿಸದೇ ಧರ್ಮ ಕ್ರಾಂತಿಯ ಈ ಪ್ರತಿಭಟನೆಯಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕಿದೆ ಎಂದು ಸಮಿತಿ
ಪ್ರಕಟಣೆಯಲ್ಲಿ ಕರೆ ನೀಡಿದೆ. ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಬುಧವಾರವೂ ಮಳೆ ಮುಂದುವರಿದಲ್ಲಿ ರ್ಯಾಲಿಯಲ್ಲಿ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ. ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್‌ನಿಂದ ಅಗತ್ಯ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 

ವಾಹನ ನಿಲುಗಡೆಗೆ ಸ್ಥಳ ನಿಗದಿ-ಪ್ರಸಾದ ವ್ಯವಸ್ಥೆ
ಲಿಂಗಾಯತ ರ್ಯಾಲಿಯಲ್ಲಿ ಭಾಗವಹಿಸಲು ವಿವಿಧ ಭಾಗಗಳಿಂದ ಬರುವ ಜನರಿಗೆ ಅವರ ವಾಹನಗಳ ನಿಲುಗಡೆಗಾಗಿ ಸೂಚಿಸಿದ ಸ್ಥಳಗಳಲ್ಲಿಯೇ ನಿಲ್ಲಿಸಿ ಬರಬೇಕೆಂದು ಲಿಂಗಾಯತ ಸಮನ್ವಯ ಸಮಿತಿ ಕೋರಿದೆ. ಔರಾದ ಮತ್ತು ಮಹಾರಾಷ್ಟ್ರ ಕಡೆಯಿಂದ
ಬರುವ ವಾಹನಗಳಿಗೆ ನವದಗೇರಿ ಹತ್ತಿರ ಇರುವ ರಿಂಗ್‌ ರೋಡ್‌ನಿಂದ ಹೌಸಿಂಗ್‌ ಬೋರ್ಡ್‌ ಕಾಲೋನಿಯ ಜೈಲ್‌ ಕಾರ್ನರ್‌ ಬಳಿ ಇರುವ ಶಿವ ಮಂದಿರ ಬಳಿ ಇಳಿದು, ಕೆಳಗಡೆ ಇರುವ ಝೀರಾ ಕನವೇನನಲ್‌ ಹಾಲ್‌ ಮತ್ತು ಗುರುದ್ವಾರ ಪರಿಸರದಲ್ಲಿ ನಿಲ್ಲಿಸಬೇಕು. ಝೀರಾ ಕನ್ವೆನನ್‌ ಹಾಲ್‌ನಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಹುಮನಾಬಾದ್‌, ಬಸವಕಲ್ಯಾಣ ಮತ್ತು ಭಾಲ್ಕಿ ಕಡೆಯಿಂದ ಬರುವವರು ನ್ಯಾಷನಲ್‌ ಕಾಲೇಜು, ಬರೀದ್‌ ಶಾಹಿ, ಶಿವನಗರದ ಶಾಹೇಬ್‌ ಲೇಔಟ್‌ ಗಳಲ್ಲಿ ಪಾರ್ಕಿಂಗ್‌ ಮಾಡಬೇಕು. ಬೆಲ್ದಾಳೆ ಕಲ್ಯಾಣ ಮಂಟಪದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಮನ್ನಳಿ, ಕಮಠಾಣ, ಬೀದರ ದಕ್ಷಿಣ ಕ್ಷೇತ್ರ, ಜಹೀರಾಬಾದ ಮತ್ತು ಹೈದ್ರಾಬಾದ ಕಡೆಯಿಂದ ಬರುವವರಿಗೆ ಬಿ.ವಿ.ಬಿ. ಕಾಲೇಜು,
ಕೆಆರ್‌ಇ ಕಾಲೇಜು ಆವರಣದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಎಂಎಸ್‌ ಕಲ್ಯಾಣ ಮಂಟಪದಲ್ಲಿ ಪ್ರಸಾದ ವ್ಯವಸ್ಥೆ
ಮಾಡಲಾಗಿದೆ. ಪ್ರಸಾದ ವ್ಯವಸ್ಥೆಯನ್ನು ರ್ಯಾಲಿ ಮುಗಿದ ನಂತರ ಏರ್ಪಡಿಸಲಾಗಿದೆ. ನೆರೆ ರಾಜ್ಯ ಹಾಗೂ ಕರ್ನಾಟಕದ ವಿವಿಧ ಜಿಲ್ಲೆ, ಸ್ಥಳೀಯ ತಾಲೂಕುಗಳಿಂದ ಜನರು ಬರುವುದರಿಂದ ನಗರದ ಸಾರ್ವಜನಿಕರು ಸಹಕರಿಸಬೇಕು ಎಂದು ಸಮಿತಿ ಮನವಿ ಮಾಡಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.