ಬೀದರ್ ನಲ್ಲಿ ನೀರಸ ‘ಭಾರತ್ ಬಂದ್’
Team Udayavani, Dec 8, 2020, 12:51 PM IST
ಬೀದರ್: ಕೇಂದ್ರದ ಕೃಷಿ ಕಾಯ್ದೆಗಳ ತಿದ್ದುಪಡಿ ರದ್ದತಿಗೆ ಆಗ್ರಹಿಸಿ ರೈತ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ‘ಭಾರತ್ ಬಂದ್’ ಗೆ ಗಡಿ ಜಿಲ್ಲೆ ಬೀದರ್ ನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಕೇವಲ ಸಂಘಟನೆಗಳ ಪ್ರತಿಭಟನೆಗೆ ಮಾತ್ರ ಸೀಮಿತವಾಗಿದೆ.
ಬೀದರ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿರುವ ಬಂದ್ ನಿಂದ ದೈನಂದಿನ ಚಟುವಟಿಕೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಬಸ್, ವಾಹನಗಳ ಸಂಚಾರ ಎಂದಿನಂತಿದ್ದು, ಅಂಗಡಿ ಮುಗ್ಗಟ್ಟುಗಳು ತೆರೆದಿವೆ. ಆದರೂ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ.
ಇದನ್ನೂ ಓದಿ:ಕುಖ್ಯಾತ ರೌಡಿಶೀಟರ್ ಕುಣಿಗಲ್ ಗಿರಿ ಬಂಧನ
ಪ್ರತಿಭಟನೆ ವೇಳೆ ಮಾತನಾಡಿದ ರೈತ ಸಂಘಟನೆಗಳ ಮುಖಂಡರು ಕೇದ್ರ ಸರ್ಕಾರದ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿವೆ. ಕೂಡಲೇ ಕಾಯ್ದೆಗಳನ್ನು ವಾಪಸ್ ಪಡೆಯುವ ಮೂಲಕ ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.
ಬೀದರ್ ಜಿಲ್ಲಾ ರೈತ ಸಂಘ, ರೈತ ಮತ್ತು ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಬೆಂಬಲ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ