Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಈಶ್ವರಪ್ಪ ಮತ್ತು ಯಡಿಯೂರಪ್ಪ ಟಿಕೆಟ್ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿಲ್ಲ

Team Udayavani, Mar 24, 2024, 8:01 PM IST

1-qwewqe

ಬೀದರ್ : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಪ್ರಾಥಮಿಕ ಸದಸ್ಯರೂ ಇಲ್ಲದ, ಮನೆಗಳಲ್ಲಿ ಕೆಲಸ ಮಾಡಿಕೊಂಡಿದ್ದ ಮಕ್ಕಳು, ಪತ್ನಿ ಮತ್ತು ಸೊಸೆಯನ್ನು ಬೀದಿಗೆ ತಂದಿದ್ದಾರೆ. ಕಾಂಗ್ರೆಸ್ ಯೋಗ್ಯತೆಗೆ ಯಾರೂ ಕಾರ್ಯಕರ್ತರು ಸಿಗಲಿಲ್ಲವೇ? ಎಂದು ವಿಪಕ್ಷ ನಾಯಕ ಆರ್. ಅಶೋಕ ಲೇವಡಿ ಮಾಡಿದ್ದಾರೆ.

ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ರಾಜ್ಯದ 20 ಜನ ಮಂತ್ರಿಗಳು ಕಾಂಗ್ರೆಸ್ಸಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಯಾರೊಬ್ಬ ಸಚಿವರು ಸಹ ಸ್ಪರ್ಧೆಗೆ ಧೈರ್ಯ ಮಾಡಲಿಲ್ಲ. ಕಾರ್ಯಕರ್ತರು ಸಹ ಸಿಗಲಿಲ್ಲ. ಹಾಗಾಗಿ ಗತಿ ಇಲ್ಲದೇ ಕುಟುಂಬದ ಸದಸ್ಯರ ಹೆಸರನ್ನು ಘೊಷಿಸಿದ್ದಾರೆ ಎಂದು ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ300 ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ್ದ ಪಕ್ಷ ಅದನ್ನು ಸಾಧಿಸಿತ್ತು. ಈ ಬಾರಿ ಪ್ರಧಾನಿ ಮೋದಿ 400ರ ಟಾರ್ಗೆಟ್ ನೀಡಿದ್ದು, ಅದನ್ನು ತಲುಪುತ್ತೇವೆ ಎಂದು ವಿಶ್ವಾಸ ಇದೆ. ಕಳೆದ ಎರಡು ಚುನಾವಣೆಗಳಲ್ಲಿ ವಿರೋಧ ಪಕ್ಷ ಸ್ಥಾನ ಉಳಿಸಿಕೊಳ್ಳಲು ಸಹ ಕಾಂಗ್ರೆಸ್‌ಗೆ ಯೋಗ್ಯತೆ ಸಿಗಲಿಲ್ಲ. ಈಗಲೂ ಅದೇ ಸ್ಥಿತಿ ಮರುಕಳಿಸಲಿದೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಈ ಬಾರಿ ಎಲ್ಲ 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಗೆಲ್ಲಲಿದೆ. ಕಳೆದ ಬಾರಿ ಒಂದು ಸ್ಥಾನ ದೃಷ್ಟಿಗಾಗಿ ಬಿಟ್ಟುಕೊಟ್ಟಿದ್ದೇವು. ಆದರೆ, ಈ ಬಾರಿ ಆ ಸ್ಥಾನವೂ ಬಿಜೆಪಿ ಪಾಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಶೋಕ್, ಮೈತ್ರಿ ಧರ್ಮ ಪಾಲನೆಯಿಂದಾಗಿ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಡಬೇಕಾಯಿತು ಎಂದು ಹೇಳಿದರು.

ವೇದಿಕೆಯಲ್ಲಿ ಚರ್ಚೆ ಮಾಡಿಲ್ಲ

ಕೆ.ಎಸ್ ಈಶ್ವರಪ್ಪ ಬಿಜೆಪಿಯ ಹಳೆ ಕಾರ್ಯಕರ್ತರು. ಯಾರೇ ಅಸಮಾಧಾನಿತರು ಸಹ ಬಿಜೆಪಿ ಪಕ್ಷ ಅಥವಾ ಪ್ರಧಾನಿಯನ್ನು ದೂಷಿಸುತ್ತಿಲ್ಲ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದೇ ಅವರ ಆಶಯ. ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರಿಬ್ಬರು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿಲ್ಲ, ಅದು ನಾಲ್ಕು ಗೋಡೆಗಳ ಮಧ್ಯೆ ನಡೆದಿದ್ದು, ಅಲ್ಲಿಯೇ ಪರಿಹಾರವೂ ಆಗಲಿದೆ. ಒಂದು ವಾರದ ನಂತರ ಎಲ್ಲರೂ ಬಿಜೆಪಿ ಜತೆ ಇರುತ್ತಾರೆ. ಇನ್ನೂ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸುಮಲತಾ ಮತ್ತು ಕರಡಿ ಸಂಗಣ್ಣ ಅವರು ಸೋಮವಾರ ಭೇಟಿಯಾಗಲಿದ್ದು, ಅವರ ಮನವೊಲಿಕೆ ಸಫಲವಾಗಲಿದೆ. ಬೀದರ ಕ್ಷೇತ್ರದಲ್ಲಿ ಸಂಧಾನ ಮಾಡುವಂಥ ಸ್ಥಿತಿ ಏನಿಲ್ಲ, ಎಲ್ಲ ಭಿನ್ನಮತ ಶಮನವಾಗಿದೆ.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದು ಪಾಟೀಲ, ಅವಿನಾಶ ಜಾಧವ್, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಸುಭಾಷ ಗುತ್ತೇದಾರ್, ಎಂ.ಜಿ ಮೂಳೆ, ಅಮರನಾಥ ಪಾಟೀಲ, ಈಶ್ವರಸಿಂಗ್ ಠಾಕೂರ್ ಇದ್ದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.