ಬೀದರ್ ನ ಗಾಂಧಿ ಗಂಜ್ ಪೊಲೀಸ್ ಠಾಣೆಯ ಸಿಬ್ಬಂದಿಗೆ ಸೋಂಕು: ಠಾಣೆ ತಾತ್ಕಾಲಿಕ ಸೀಲ್ ಡೌನ್
Team Udayavani, Jun 28, 2020, 3:08 PM IST
ಬೀದರ್: ಗಾಂಧಿ ಗಂಜ್ ಪೊಲೀಸ್ ಠಾಣೆಯ ಸಿಬ್ಬಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್ ಡೌನ್ ಮಾಡಲಾಗಿದೆ ಎಂದು ಎಸ್.ಪಿ ಡಿ.ಎಲ್ ನಾಗೇಶ್ ತಿಳಿಸಿದ್ದಾರೆ.
ಕೋವಿಡ್-19 ಸೋಂಕಿತ ಸಿಬ್ಬಂದಿಯ ಸಂಪರ್ಕಕ್ಕೆ ಬಂದಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.
ಗಾಂಧಿ ಗಂಜ್ ಠಾಣೆಯ ಎಲ್ಲ ಕಾರ್ಯ ಚಟುವಟಿಕೆಗಳನ್ನು ನಗರದ ಮಾರ್ಕೆಟ್ ಪೊಲೀಸ್ ಠಾಣೆಯ ಕಟ್ಟಡದಿಂದ ನಡೆಯಲ್ಲಿದ್ದು, ಸಾರ್ವಜನಿಕರು ಯಾವುದೇ ದೂರು, ಅಹವಾಲುಗಳನ್ನು ಅಲ್ಲಿಗೆ ಸಲ್ಲಿಸಬಹುದು ಎಂದು ಹೇಳಿದ್ದಾರೆ.