ಬೀದರ್: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕಳ್ಳತನ ಪ್ರಕರಣದ ಆರೋಪಿಗಳು
Team Udayavani, Nov 29, 2020, 9:00 PM IST
ಹುಮನಾಬಾದ್: ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವ ವೇಳೆ ಚಾಕುವಿನಿಂದ ಹಲ್ಲೆ ಮಾಡಿ ಓಡಿ ಹೋಗಲು ಯತ್ನಿಸಿದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ರವಿವಾರ ಸಂಜೆ ಪಟ್ಟಣ ಹೊರವಲಯದಲ್ಲಿ ನಡೆದಿದ್ದು, ಘಟನೆಯಲ್ಲಿ ಪಿಎಸ್‌ಐ ಮತ್ತು ಸಿಬ್ಬಂದಿಗಳಿಗೆ ಗಾಯಗಳಾಗಿವೆ.
ಬೀದರ್ ನಗರದ ಇರಾನಿ ಬಡಾವಣೆಯ ಇಬ್ಬರು ಆರೋಪಿಗಳು ಎಂದು ಮಾಹಿತಿ ಲಭ್ಯವಾಗಿದೆ. ಈ ಆರೋಪಿಗಳು ಮನ್ನಾಎಖೇಳ್ಳಿ ಹಾಗೂ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಸರ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದೆನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಠಾಣೆಯ ಪಿಎಸ್‌ಐ ಮತ್ತು ಸಿಬ್ಬಂದಿಗಳು ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾಗಿದ್ದು, ಈ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಓಡಿ ಹೋಗಲು ಯತ್ನಿಸಿದ ಹಿನ್ನಲೆಯಲ್ಲಿ ಪೊಲೀಸರು ಗಾಳಿಯನ್ನು ಮೂರು ಗುಂಡು ಹಾರಿಸಿದ್ದಾರೆ. ಈ ಕುರಿತು ಎಎಸ್‌ಪಿ ಡಾ. ಗೋಪಾಲ್ ಬ್ಯಾಕೋಡ್ ‘ಉದಯವಾಣಿ’ಗೆ ಖಚಿತಪಡಿಸಿದ್ದಾರೆ.
ಇಬ್ಬರು ಆರೋಪಿಗಳು ಮಿತ್ರ ಪೊಲೀಸ್ ಎಂದು ಗುರುತಿನ ಚೀಟಿ ತಯಾರಿಸಿಕೊಂಡು ಜನರನ್ನು ಯಾಮಾರಿಸುವ ಕೆಲಸ ಮಾಡುತ್ತಿರುವ ಬಗ್ಗೆ ಕೂಡ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಪಿಎಸ್‌ಐ ರವಿಕುಮಾರ, ಅಪರಾಧ ವಿಭಾಗದ ಪಿ.ಎಸ್.ಐ ಕಿರಣಕುಮಾರ ಹಾಗೂ ಸಿಬ್ಬಂದಿಗಳಾದ ಭಗವಾನ ಹಾಗೂ ನವೀನ ಅವರಿಗೆ ಗಾಯಗಳಾಗಿವೆ. ಈ ಕುರಿತು ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸಿದ್ದಾರೆ. ಹೆಚ್ಚುವರಿ ಎಸ್.ಪಿ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ವಿವರ ಪಡೆದಿದ್ದಾರೆ.
ಇದನ್ನೂ ಓದಿ: ಸರ್ಕಾರದ ಮಾತುಕತೆ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು: ತೀವ್ರ ಹೋರಾಟದ ಎಚ್ಚರಿಕೆ
ಘಟನೆಯ ವಿವರ:
ಬೈಕ್ ಮೇಲೆ ಸರ ಕಳ್ಳರು ಸಂಚರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ರವಿಕುಮಾರ್, ಅಪರಾಧ ವಿಭಾಗದ ಪಿಎಸ್‌ಐ ಕಿರಣಕುಮಾರ್, ಸಿಬ್ಬಂದಿಗಳಾದ ಭಗವಾನ, ನವೀನ ಹಾಗೂ ಮಲ್ಲು ನೇತೃತ್ವದಲ್ಲಿ ಪಟ್ಟಣದ ಹೊರವಲಯದ ಹೆದ್ದಾರಿಯಲ್ಲಿ ಬಂಧಿಸಲು ಮುಂದಾದಾಗ ಇಬ್ಬರು ಆರೋಪಿಗಳು ಹಾಗೂ ಪೊಲೀಸರ ಮಧ್ಯ ಗಲಾಟೆ ಉಂಟಾಗಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಆರೋಪಿಗಳು ಪೊಲೀಸರ ಮೇಲೆಯೇ ಹರಿತವಾದ ವಸ್ತುವಿನಿಂದ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಿಎಸ್‌ಐ ರವಿಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಇಬ್ಬರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: ಸರಣಿ ಸೋತರೂ, ಹೊಸ ದಾಖಲೆ ಬರೆದ ನಾಯಕ ವಿರಾಟ್ ಕೊಹ್ಲಿ !
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
ಸಾಲಗಾರರ ಕಾಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!
ದೇವೇಗೌಡರ ಮೂರ್ತಿ ಪ್ರತಿಷ್ಠಾಪಿಸಿ ವಚನ ಪಾಲಿಸಿದ್ದ ಸಿಂದಗಿಯ ಮನಗೂಳಿ ಮುತ್ಯಾ!
ಶಿವಮೊಗ್ಗ: ಯುವಕರಿಬ್ಬರಿಗೆ ಚಾಕು ಇರಿತ, ಓರ್ವ ಸಾವು- ಇನ್ನೊಬ್ಬನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್ಗಳ ದೇಣಿಗೆ
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
ಆನ್ಲೈನ್ ನಲ್ಲಿ ಸೋರಿಕೆಯಾಯ್ತು ಒನ್ ಪ್ಲಸ್ 9 ಫೋನ್ ನ ಚಿತ್ರ..!
ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿತ, ದರೋಡೆ: ಆರು ಮಂದಿ ಖದೀಮರ ಸೆರೆ