ಸೌಲಭ್ಯಕ್ಕಾಗಿ ಕಣ್ಣೇರಿಟ್ಟ ಬ್ರಿಮ್ಸ್ ನೌಕರರು

Team Udayavani, May 8, 2020, 2:32 PM IST

5-May-20

ಬೀದರ: ಬ್ರಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಅಳಲು ತೋಡಿಕೊಂಡ ಡಿ ದರ್ಜೆ ಮಹಿಳಾ ನೌಕರರು

ಬೀದರ: ಬ್ರಿಮ್ಸ್‌ ಆಸ್ಪತ್ರೆಯ ಇಬ್ಬರು ಆಯಾಗಳಿಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ಡಿ ದರ್ಜೆ ಮಹಿಳಾ ನೌಕರರು (ನಾನ್‌ ಕ್ಲಿನಿಕಲ್‌) ಸೂಕ್ತ ಸೌಲಭ್ಯಗಳು ಕಲ್ಪಿಸುತ್ತಿಲ್ಲ ಎಂದು ಆರೋಪಿಸಿ ಮಂಗಳವಾರ ಬ್ರಿಮ್ಸ್‌ ಅವರಣದಲ್ಲಿ ಕಣ್ಣೀರಿಡುತ್ತ ಗೋಳು ತೋಡಿಕೊಂಡರು.

ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟಿರುವ ವೃದ್ಧನಲ್ಲಿ ಕೋವಿಡ್ ಸೋಂಕು ಇರುವುದು ದೃಡಪಟ್ಟಿತ್ತು. ನಂತರ ಆ ವೃದ್ಧ ಚಿಕಿತ್ಸೆ ಪಡೆಯುವ ವೇಳೆ ಆಸ್ಪತ್ರೆಯ ಇಬ್ಬರು ಡಿ ಗ್ರೂಪ್‌ ನೌಕರರಲ್ಲಿಯೂ ಸೋಂಕು ಹರಡಿದೆ. ಆಸ್ಪತ್ರೆಯಲ್ಲಿ ತಮಗೆ ಪಿಪಿಇ ಕಿಟ್‌, ಹ್ಯಾಂಡ್‌ ಗ್ಲೌಸ್‌ ನೀಡುತ್ತಿಲ್ಲ. ಕ್ವಾರಂಟೈನ್‌ಗೆ ಸೂಕ್ತ ವ್ಯವಸ್ಥೆಯಿಲ್ಲ ಎನ್ನುವುದು ಸೇರಿದಂತೆ ತಮ್ಮ ಸಮಸ್ಯೆಗಳ ಕುರಿತು ಗೋಳು ತೋಡಿಕೊಂಡರು. ಇಬ್ಬರು ಆಯಾಗಳಿಗೆ ಈಗಾಗಲೇ ಕೊರೊನಾ ಪಾಸಿಟಿವ್‌ ಬಂದಿದೆ. ಅವರಿಗೂ ಸೂಕ್ತ ವ್ಯವಸ್ಥೆ ಇಲ್ಲ. ಈ ಬಗ್ಗೆ ಕೇಳಿದರೆ ಕೆಲಸ ಬಿಟ್ಟು ಮನೆಗೆ ಹೋಗಿ ಎಂದು ಹೆದರಿಸುತ್ತಿದ್ದಾರೆ ಎಂದು ಕಣ್ಣೀರಿಟ್ಟರು.

ಕೋವಿಡ್ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ ವೈದ್ಯರು, ಮತ್ತಿತರ ಸಿಬ್ಬಂದಿಯನ್ನು ಹೋಟೆಲ್‌, ಲಾಡ್ಜ್ಗಳಲ್ಲಿ ಇಟ್ಟಿದ್ದಾರೆ. ಆದರೆ, ಡಿ-ದರ್ಜೆಯ ನಮಗೆ ಆಸ್ಪತ್ರೆ ಕೋಣೆಯೊಂದರಲ್ಲಿ ಪ್ಲಾಸ್ಟಿಕ್‌ ಚೀಲ ಹಾಸಿಕೊಂಡು ಮಲಗುವ ದುಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು. ಡಿ-ದರ್ಜೆ ನೌಕರರಿಗೆ (ನಾನ್‌ ಕ್ಲಿನಿಕಲ್‌) ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕಾಲ ಕಾಲಕ್ಕೆ ಸಂಬಳ, ಉದ್ಯೋಗ ಸುರಕ್ಷೆ ನೀಡಬೇಕು. ಅವರಿಗೆ ಜಿಲ್ಲಾ ಆಸ್ಪತ್ರೆ ಆರ್‌ಎಂಒ ಅವರಿಂದ ಕಿರುಕುಳ ಇದೆ. ಅದು ತಪ್ಪಬೇಕು ಎಂದು ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘದ ರಮೇಶ ಪಾಸ್ವಾನ್‌ ಒತ್ತಾಯಿಸಿದರು.

ಸ್ಥಳಕ್ಕಾಗಮಿಸಿದ ಬ್ರಿಮ್ಸ್‌ ವೈದ್ಯಕೀಯ ಅಧೀಕ್ಷಕ ಡಾ| ವಿಜಯಕುಮಾರ ಅಂತೆಪ್ಪನೋರ, ವೈದ್ಯರು, ನರ್ಸಗಳಿಗೆ ನೀಡಿರುವ ಸೌಲಭ್ಯಗಳಂತೆ ಡಿ-ದರ್ಜೆ ನೌಕರರಿಗೂ ವಿಸ್ತರಿಸಲಾಗುವುದು. ಹಾಸ್ಟೆಲ್‌ಗ‌ಳ ಬದಲು ಲಾಡ್ಜ್ಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗುವುದು. ಪಿಪಿಇ ಕಿಟ್‌ ಹಾಗೂ ಮಾಸ್ಕ್ ವಿತರಿಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಗಿದೆ.

ಆರೋಗ್ಯ ಸಿಬ್ಬಂದಿಗೆ ಕೋವಿಡ್ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇಂತಹ ಆರೋಪ ಸತ್ಯವಾದುದ್ದಲ್ಲ. ಯಾರು ಕೋವಿಡ್‌-19 ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೋ ಅಂತಹವರು ವಸತಿ ನಿಲಯ ಇಲ್ಲವೇ ಹೋಟೆಲ್‌ನಲ್ಲಿ ಕ್ವಾರಂಟೈನ್‌ಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಡಾ| ಎಚ್‌.ಆರ್‌. ಮಹಾದೇವ,
ಜಿಲ್ಲಾಧಿಕಾರಿ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.