ಅಗತ್ಯ ವಸ್ತು ಪೂರೈಕೆ: ಪರಿಶೀಲನಾ ಸಭೆ


Team Udayavani, Apr 20, 2020, 3:36 PM IST

20-April-23

ಬೀದರ: ಸಹಾಯಕ ಆಯುಕ್ತ ಅಕ್ಷಯ ಶ್ರೀಧರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು

ಬೀದರ: ಕಂಟೋನ್ಮೆಂಟ್‌ ಪ್ರದೇಶದಲ್ಲಿರುವ ಸಾರ್ವಜನಿಕರಿಗೆ ಕಿರಾಣಿ, ತರಕಾರಿ, ಹಾಲು ಮತ್ತು ಹಣ್ಣು ಸೇರಿದಂತೆ ಅಗತ್ಯ ವಸ್ತುಗಳನ್ನು ಸಮರ್ಪಕ ಪೂರೈಕೆ ಮಾಡುವುದರ ಕುರಿತು ರಚಿಸಿರುವ ತಂಡಗಳ ಕಾರ್ಯವೈಖರಿ ಬಗ್ಗೆ ಪರಿಶೀಲಿಸಲು ಸಹಾಯಕ ಆಯುಕ್ತ ಅಕ್ಷಯ ಶ್ರೀಧರ ಅಧ್ಯಕ್ಷತೆಯಲ್ಲಿ ನಗರದ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಆಯುಕ್ತರು, ಒಂದರಿಂದ 15, 25 ಮತ್ತು 32 ಸೇರಿದಂತೆ ಒಟ್ಟು 17 ವಾರ್ಡ್‌ಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಅಗತ್ಯ ವಸ್ತುಗಳ ಸರಬರಾಜಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳ ತಂಡಕ್ಕೆ ಸಹಾಯಕ ಆಯುಕ್ತರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಕೆಲವು ವಾರ್ಡ್‌ಗಳಲ್ಲಿ ಹಾಲು, ಕಿರಾಣಿ, ತರಕಾರಿ ಸರಬರಾಜಿನಲ್ಲಿ ತೊಂದರೆಯಾಗುತ್ತಿದೆ ಎನ್ನುವ ದೂರುಗಳು ಕೇಳಿಬರುತ್ತಿವೆ. ಇದು ಕೊನೆಯಾಗಬೇಕು. ತಂಡದಲ್ಲಿರುವ ಎಲ್ಲರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಜನರಿಗೆ ಇರುವ ಜೀವನಾವಶ್ಯಕ ಸಾಮಗ್ರಿಗಳನ್ನು ಅವರ ಮನೆಮನೆಗೆ ತಲುಪಿಸುವ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ನಗರಸಭೆ ಪೌರಾಯುಕ್ತ ಬಸಪ್ಪ ಅವರು ತಂಡದಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಿದರು.

ಕಂಟೋನ್ಮೆಂಟ್‌ ಪ್ರದೇಶದಲ್ಲಿರುವ ಜನರ ಬೇಡಿಕೆಯಂತೆ ಕೇಬಲ್‌ ಟಿವಿ ದುರಸ್ತಿ ಮತ್ತು ಸಂಪರ್ಕ ನೀಡುವವರಿಗೆ ಕೂಡ ಪಾಸುಗಳನ್ನು ನೀಡಿದಲ್ಲಿ ಜನರಿಗೆ ಅನುಕೂಲವಾಗಲಿದೆ ಎಂದು ಇದೇ ವೇಳೆ ಕೆಲವರು ಸಹಾಯಕ ಆಯುಕ್ತರಲ್ಲಿ ಕೋರಿದರು. ನಾಡ ತಹಶೀಲ್ದಾರ್‌, ಕಂದಾಯ ನಿರೀಕ್ಷಕರು, ತಾಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್‌ ವೃತ್ತ ನಿರೀಕ್ಷಕರು ಇದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.