ಮಳೆ ಅಬ್ಬರಕ್ಕೆ ಗಡಿನಾಡು ತತ್ತರ

Team Udayavani, Oct 13, 2020, 5:02 PM IST

bidara-tdy-2

ಬೀದರ: ಬಸವಕಲ್ಯಾಣದ ಚುಳಕಿನಾಲಾ ಜಲಾಶಯದಲ್ಲಿ ನೀರು ಗರಿಷ್ಠ ಮಟ್ಟ ತಲುಪಿದ ಹಿನ್ನೆಲೆ ಗೇಟ್‌ಗಳ ಮೂಲಕ ನಾಲಾಗೆ ನೀರು ಹರಿಬಿಟ್ಟಿರುವುದು

ಬೀದರ: ಕಳೆದೆರಡು ದಿನಗಳಿಂದ ಆರ್ಭಟಿಸುತ್ತಿರುವ ಮಳೆಗೆ ಗಡಿ ಜಿಲ್ಲೆ ಬೀದರ ಮತ್ತೆ ತತ್ತರಿಸಿದೆ. 24 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಬಹುತೇಕ ತಾಲೂಕುಗಳು ನಲುಗಿ ಹೋಗಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ.

ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆಗಳು ನೀರು ಪಾಲಾಗಿದ್ದರೆ, ಕೆಲವೆಡೆ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಪರ್ಕ ಕಡಿತವಾಗಿವೆ. ಮನೆಗಳು ಭಾಗಶಃ ಕುಸಿದು ಜನರ ಬದುಕನ್ನು ಅತಂತ್ರಗೊಳಿಸಿದೆ.

ಜಿಲ್ಲೆಯಲ್ಲಿ ರವಿವಾರ ಸಾಯಂಕಾಲದಿಂದ ಸೋಮವಾರ ಬೆಳಗ್ಗೆವರೆಗೆ 13 ಮಿಮೀ. (ವಾಡಿಕೆ ಮಳೆ 3 ಮಿಮೀ) ಮಳೆ ಬಿದ್ದಿದೆ. ಹುಮನಾಬಾದ್‌ ಮತ್ತು ಚಿಟಗುಪ್ಪ ತಾಲೂಕಿನಲ್ಲಿ ಅತಿ ಹೆಚ್ಚು 18 ಮಿಮೀ. (ವಾಡಿಕೆ 5ಮಿಮೀ) ಮಳೆ ಬಿದ್ದಿದ್ದರೆ ಹುಲಸೂರು ತಾಲೂಕಿನಲ್ಲಿ ಕಡಿಮೆ 7 ಮಿಮೀ (ವಾಡಿಕೆ 2 ಮಿಮೀ) ಆಗಿದೆ. ಬೀದರ 15 ಮಿಮೀ (ವಾಡಿಕೆ 2 ಮಿಮೀ), ಬಸವಕಲ್ಯಾಣ 14 ಮಿಮೀ. (ವಾಡಿಕೆ 4ಮಿಮೀ.), ಭಾಲ್ಕಿ 11 ಮಿಮೀ (ವಾಡಿಕೆ 2 ಮಿಮೀ) ಮತ್ತು ಔರಾದ 9 ಮಿಮೀ (ವಾಡಿಕೆ 2 ಮಿಮೀ) ಮಳೆ ಸುರಿದಿದೆ. ಸೋಮವಾರ ಮಧ್ಯಾಹ್ನ ಸಹ ಭಾರೀ ಮಳೆ ಸುರಿದು ಪ್ರವಾಹದ ಸ್ಥಿತಿ ತಂದೊಡ್ಡಿದೆ. ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ 169 ಮಿಮೀ ವಾಡಿಕೆ ಮಳೆಗಿಂತ 275 ಮಿಮೀ.ನಷ್ಟು ಮಳೆ ಬಂದಿದೆ.

ಕಳೆದೆರಡು ವಾರಗಳ ಹಿಂದೆಯಷ್ಟೇ ವರುಣನಾರ್ಭಟಕ್ಕೆ ಒಂದೂವರೆ ಲಕ್ಷ ಹೆಕ್ಟೇರ್‌ ಬೆಳೆ ಮಣ್ಣು ಪಾಲಾಗಿದ್ದು, ಈಗ ಮತ್ತೆ ಮಳೆ ಅವಾಂತರದಿಂದ ಜಮೀನುಗಳಲ್ಲಿ ನೀರುನಿಂತು ಕೆಲವೆಡೆ ಕಟಾವಾಗದೇ ಉಳಿದಿರುವ ಸೋಯಾ ಸಂಪೂರ್ಣ ಹಾನಿಯಾಗಿದೆ. ತೊಗರಿ ಮತ್ತು ಕಬ್ಬು ಸಹ ನೆಲಸಮಗೊಂಡಿದ್ದು, ರೈತರನ್ನು ಕಣ್ಣೀರಲ್ಲಿ ಕೈ ತೊಳೆಯುವಂತೆ ಮಾಡಿದೆ. ಜಿಲ್ಲೆಯ ಅನೇಕ ಕೆರೆಗಳು ಅಪಾಯದ ಮಟ್ಟ ಮೀರಿ ತುಂಬಿರುವುದರಿಂದ ಸುತ್ತಲಿನ ಜಮೀನುಗಳಿಗೆ ನೀರು ನಿಂತು ಬೆಳೆಗಳಿಗೆ ಧಕ್ಕೆ ತಂದಿದೆ.

ಬಸವಕಲ್ಯಾಣ ತಾಲೂಕಿನಲ್ಲಿ ಮಳೆ ಅಬ್ಬರಕ್ಕೆ ಸರ್‌ ಜವಳಗಾ ಕ್ರಾಸ್‌ ಮತ್ತು ಚಿತಕೋಟಾ-ಲಾಡವಂತಿ ಸೇತುವೆ ಮೇಲಿಂದ ನೀರು ಹರಿದಿದ್ದರಿಂದ ಕೆಲ ಕಾಲ ಸಂಚಾರಕ್ಕೆ ಅಡ್ಡಿಯಾಗಿತ್ತು. ಮಳೆಯಿಂದ ಗ್ರಾಮೀಣ ಭಾಗ ಮಾತ್ರವಲ್ಲ ಬೀದರ ನಗರ ಸೇರಿ ಪಟ್ಟಣಗಳಲ್ಲಿ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಸೋಮವಾರ ಮಧ್ಯಾಹ್ನ ಎರಡು ಗಂಟೆಗಳ ಕಾಲ ಮಳೆ ಆರ್ಭಟದಿಂದ ತಗ್ಗು ಪ್ರದೇಶದ ಅಂಗಡಿ ಮುಂಗಟ್ಟು, ಮನೆಗಳಿಗೆ ನೀರು ನುಗ್ಗಿ ಅನಾಹುತ ಸೃಷ್ಟಿಸಿತ್ತು.

ಮೈದುಂಬಿಕೊಂಡ ಕಾರಂಜಾ : ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ ಸಹ ಮೈದುಂಬಿಕೊಂಡಿದ್ದು, 4.591 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾನಯನ ಪ್ರದೇಶದಲ್ಲಿ ಉತ್ತಮ ವರ್ಷಧಾರೆಯಿಂದ 7.691 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ 4.966 ಟಿಎಂಸಿ ನೀರು ಹರಿದು ಬಂದಿದೆ. ಮಾಂಜ್ರಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆ ನದಿ ಪಾತ್ರದ ಜಮೀನುಗಳಲ್ಲೂ ನೀರು ಸಂಗ್ರಹವಾಗಿ ಬೆಳೆಗಳು ಸುಟ್ಟು ಹೋಗಿದ್ದು, ಗ್ರಾಮಸ್ಥರಲ್ಲಿ ಈಗ ನೆರೆ ಆತಂಕ ಶುರುವಾಗಿದೆ.

ಚುಳಕಿನಾಲಾದಲ್ಲಿ ಗರಿಷ್ಠ ಮಟ್ಟ :  ಇನ್ನು 0.938 ಟಿಎಂಸಿ ಅಡಿ ಸಾಮರ್ಥ್ಯದ ಬಸವಕಲ್ಯಾಣ ಸಮೀಪದ ಚುಳಕಿನಾಲಾ ಜಲಾಶಯದಲ್ಲಿ ಸಹ ಗರಿಷ್ಠ ನೀರಿನ ಮಟ್ಟ ತಲುಪಿದ್ದು, ಒಳ ಹರಿವು ಹೆಚ್ಚಳ ಕಾರಣ ಎರಡು ಗೇಟ್‌ಗಳ ಮೂಲಕ 195 ಕ್ಯೂಸೆಕ್‌ ನೀರು ನಾಲಾಗೆ ಬಿಡಲಾಗಿದೆ. ನದಿ ತೀರದ ಗ್ರಾಮಸ್ಥರು ಎಚ್ಚರಿಕೆ ವಹಿಸಬೇಕು. ಜಾನುವಾರುಗಳನ್ನು ನಾಲಾ ತೀರದತ್ತ ಬಿಡದಂತೆ ಜಿಲ್ಲಾಡಳಿತ ಕೋರಿದೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.