ಜನಾಶೀರ್ವಾದ ನಂತರ ಶುರುವಾಯ್ತು ರಾಜೀನಾಮೆ ಪರ್ವ!

50ಕ್ಕೂ ಅಧಿಕ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಜಿಲ್ಲಾಧ್ಯಕ್ಷರ ಜೊತೆಗೆ ಪದಾಧಿಕಾರಿಗಳ ಮಾತುಕತೆ

Team Udayavani, Sep 5, 2021, 4:12 PM IST

ಜನಾಶೀರ್ವಾದ ನಂತರ ಶುರುವಾಯ್ತು ರಾಜೀನಾಮೆ ಪರ್ವ!

ಹುಮನಾಬಾದ: ಪಟ್ಟಣದಲ್ಲಿ ಶುಕ್ರವಾರ ಬಿಜೆಪಿಯಿಂದ ನಡೆದ ಜನಾಶೀರ್ವಾದ ಕಾರ್ಯಕ್ರಮದ ನಂತರ ಬಿಜೆಪಿಯ 50ಕ್ಕೂ ಅಧಿಕ
ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಧ್ವನಿ ಹೊರಹಾಕಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಡಾ|ಸಿದ್ದಲಿಂಗಪ್ಪಾ ಪಾಟೀಲ ಪರಿವಾರದವರು ಪಕ್ಷದ
ಸಿದ್ದಾಂತಗಳ ವಿರುದ್ಧಕೆಲಸ ಮಾಡುತ್ತಿದ್ದಾರೆ ಎಂದು ಕೆಲ ಕಾರ್ಯಕರ್ತರು, ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ಶ್ರಮಿಸಿದ್ದಾರೆ. ಆದರೆ, ಅದು ಒಂದು ಕುಟುಂಬ ಆಯೋಜಿಸಿದ್ದ ಯಾತ್ರೆ ಎಂಬಂತೆ ಬಿಂಬಿಸಲಾಗಿತ್ತು. ಅಲ್ಲದೆ ವಿವಿಧ ಗ್ರಾಮಗಳಲ್ಲಿ ಪಕ್ಷದ ಹೆಸರಲ್ಲಿ ಕಾರ್ಯಕ್ರಮ ನಡೆಸುತ್ತಿದ್ದು, ಪಕ್ಷದ ಯಾವ ಪದಾಧಿಕಾರಿ ಗಳಿಗೆ ಮಾಹಿತಿ ನೀಡುತ್ತಿಲ್ಲ. ಪಕ್ಷದ ಸಿದ್ಧಾಂತಗಳು ಗಾಳಿಗೆ ತೂರಲಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಮೋರ್ಚಾಗಳ 50ಕ್ಕೂ ಹೆಚ್ಚು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎಂದು ವಿವಿಧ ಮೋರ್ಚಾದ ಪದಾಧಿಕಾರಿಗಳು ತಿಳಿಸಿದ್ದಾರೆ.

ಬಿಜೆಪಿಗೆ ಬಲ: ಡಾ| ಸಿದ್ದಲಿಂಗಪ್ಪಾ ಪಾಟೀಲ ಕಾಂಗ್ರೆಸ್‌ ಪಕ್ಷದಲ್ಲಿ ಇರುವಾಗ ಕೂಡ ಯುವ ಶಕ್ತಿ ಸಂಘಟಿಸುವ ಕಾರ್ಯ ನಡೆಸಿದ್ದರು. ಕ್ಷೇತ್ರದ
ಎಲ್ಲಾ ಕಡೆಗಳಲ್ಲಿ ಇಂದಿಗೂ ಜನರ ಸಂಪರ್ಕ ಉಳಿಸಿಕೊಂಡಿದ್ದಾರೆ. ರಾಜಕೀಯ ಗುದ್ದಾಟದಲ್ಲಿ ಬಿಜೆಪಿ ಸೇರ್ಪಡೆಗೊಂಡಿರುವ ಡಾ| ಸಿದ್ದಲಿಂಗಪ್ಪ
ಪಾಟೀಲ ಈ ಕ್ಷೇತ್ರದ ಬಿಜೆಪಿ ಮುಂದಿನ ಉಮೇದುವಾರರು ಎಂಬತೆ ಗುರುತಿಸಿಕೊಂಡರು. ಇವರ ಆಗಮನದಿಂದ ಅನೇಕರು ವಿರೋಧ
ವ್ಯಕ್ತಪಡಿಸಿದರು. ಇನ್ನೂ ಅನೇಕರು ಸ್ವಾಗತ ಮಾಡಿಕೊಂಡಿದರು. ಎಲ್ಲ ಬಲಗಳು ಹೊಂದಿರುವ ಪಾಟೀಲ ಪರಿವಾರ ಬಿಜೆಪಿಗೆ ಬಂದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಆನೆ ಬಲ ಬಂತು ಎಂದು ಅನೇಕ ಪದಾಧಿಕಾರಿಗಳೂ ಹರ್ಷ ವ್ಯಕ್ಯಪಡಿಸಿ ನಿರಂತರ ಅವರ ಸಂಪರ್ಕ ಸಾಧಿಸುವ ಕೆಲಸ ಮಾಡಿದರು. ಆದರೆ, ಇದೀಗ ಎಲ್ಲವೂ ಸರಿ ಇಲ್ಲ ಅಂತ ಪದಾಧಿಕಾರಿಗಳೇ ಗೋಳು ಹೇಳಿಕೊಳ್ಳಲು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ:ಮತ ಏಣಿಕೆ ಕೇಂದ್ರದ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿ- ತಹಶೀಲ್ದಾರ್ ಶೈಲೇಶ ಪರಮಾನಂದ

ಅಧ್ಯಕ್ಷರ ಜೊತೆ ಮಾತುಕತೆ: ಶುಕ್ರವಾರ ಆರಂಭಗೊಂಡಿರುವ ರಾಜೀನಾಮೆ ನೀಡುವ ಕಾರ್ಯ ಶನಿವಾರ ಕೂಡ ಮುಂದುವರೆದಿದೆ. ಈ
ಕುರಿತು ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್‌ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ. ಪಕ್ಷಕ್ಕೆಹೊಸದಾಗಿಬಂದವರಿಗೆಪಕ್ಷದ ಸಿದ್ಧಾಂತಗಳು ತಿಳಿಸಿ ಎಂದು ಕೆಲವರು ಹೇಳಿದ್ದರೆ, ಪಕ್ಷದ ಹೆಸರಿಗೆಧಕ್ಕೆ ತರುವವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಈ ಮಧ್ಯೆ ಪದಾಧಿಕಾರಿಗಳ ಮನವೊಲಿಸುವ ಕಾರ್ಯ ಜಿಲ್ಲಾಧ್ಯಕ್ಷರು ನಡೆಸಿದ್ದು, ಮುಂದಿನಕೆಲ ದಿನಗಳಲ್ಲಿ ಎಲ್ಲವೂ ಸರಿ ಮಾಡುವ ಭರವಸೆ ನೀಡಿದ್ದಾರೆ. ಯಾರೂ ಪಕ್ಷದ ಹೆಸರಿಗೆ ಧಕ್ಕೆ ತರುವ ಕಾರ್ಯ ಮಾಡಬೇಡಿ ಎಂದು ತಿಳಿಸಿದ್ದಾರೆ. ಮೂಲಗಳ ಪ್ರಕಾರ ಅದ್ಧೂರಿ ಕಾರ್ಯಕ್ರಮ ನೋಡಿ ಸಹಿಸದ ಮುಖಂಡರು ಇಂತಹ ಚಟುವಟಿಕೆಗಳಿಗೆ ಬುನಾದಿ ಹಾಕಿದ್ದಾರೆಂದು ಪಕ್ಷದವರೆ ಮಾತಾಡಿಕೊಳ್ಳುತ್ತಿದ್ದು, ಇದಕ್ಕೆ ಪಕ್ಷದ ವರಿಷ್ಠರೆ ಉತ್ತರ ನೀಡಬೇಕಿದೆ.

ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿರುವ ಸದಸ್ಯರ ಜೊತೆಗೆ ಮಾತುಕತೆ ನಡೆಸಿದ್ದು, ಎಲ್ಲವೂ ಬಗೆಹರಿಯುತ್ತದೆ.ಯಾವ ಪದಾಧಿಕಾರಿ ಗಳು ಪಕ್ಷ ತೊರೆಯುತ್ತಿಲ್ಲ. ಎಲ್ಲ ಗೊಂದಲಗಳಿಗೆ ಪರಿಹಾರ ಇದ್ದು, ಪಕ್ಷದ ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಚರ್ಚೆ ಮಾಡುವುದು ತಪ್ಪಾಗುತ್ತದೆ.
-ಶಿವಾನಂದ ಮಂಠಾಳಕರ್‌,
ಬಿಜೆಪಿ ಜಿಲ್ಲಾಧ್ಯಕ್ಷರು

-ದುರ್ಯೋಧನ ಹೂಗಾರ

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.