ದೇಶದ್ರೋಹ ಆರೋಪ: ಜಾಮೀನು ಮಂಜೂರು

ಮುಖ್ಯಗುರು ಫರೀದಾಬೇಗಂ-ವಿದ್ಯಾರ್ಥಿನಿ ತಾಯಿ ನಾಜಮುನ್ನೀಸಾ ಬೇಗಂಗೆ ಜಾಮೀನು

Team Udayavani, Feb 14, 2020, 7:35 PM IST

ಬೀದರ: ಮಕ್ಕಳಿಂದ ನಾಟಕ ಪ್ರದರ್ಶನದಲ್ಲಿ ಪ್ರಧಾನಿಗೆ ಅವಹೇಳನ ಮಾಡಿದ ಆರೋಪದಡಿ ಶಾಹೀನ್‌ ಶಿಕ್ಷಣ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮುಖ್ಯಗುರು ಫರೀದಾಬೇಗಂ ಮತ್ತು ವಿದ್ಯಾರ್ಥಿನಿ ತಾಯಿ ನಾಜಮುನ್ನೀಸಾ ಬೇಗಂ ಅವರಿಗೆ ಶುಕ್ರವಾರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜಾಮೀನಿನ ಮೇಲಿನ ವಾದ-ಪ್ರತಿವಾದ ಆಲಿಸಿದ ಜಿಲ್ಲಾ ನ್ಯಾಯಾಧೀಶರಾದ ಮನಗೂಳಿ ಪ್ರೇಮಾವತಿ ಅವರು ಶುಕ್ರವಾರ ಆದೇಶ ಪ್ರಕಟಿಸಿದ್ದಾರೆ. ಎರಡು ಜಾಮೀನು ಅರ್ಜಿ, ಒಂದು ಲಕ್ಷ ರೂ. ವೈಯಕ್ತಿಕ ಬಾಂಡ್‌, ಜಿಲ್ಲಾ ನ್ಯಾಯಾಲಯ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ ಹಾಗೂ ಸಾಕ್ಷಿ ನಾಶ ಪಡಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮುಖ್ಯಗುರು, ತಾಯಿಯನ್ನು ಜ.30ರಂದು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಜಾಮೀನು ಮಂಜೂರಾತಿ ಬಳಿಕ ಕೆಲವು ಪ್ರಕ್ರಿಯೆಗಳು ಬಾಕಿ ಉಳಿದಿದ್ದು, ಶನಿವಾರ ಸಂಜೆ ವೇಳೆಗೆ ಇಬ್ಬರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ