ಕಾರ್ಖಾನೆಗಳಲ್ಲಿ ಅವಘಡ: ಎಚ್ಚೆತ್ತುಕೊಳ್ಳದ ಅಧಿಕಾರಿಗಳು

Team Udayavani, Jan 19, 2019, 9:04 AM IST

bid-5.jpg

ಬೀದರ: ಜಿಲ್ಲೆಯ ವಿವಿಧ ಕಾರ್ಖಾನೆಗಳಲ್ಲಿ ಪದೇ ಪದೇ ಅವಘಡಗಳು ಸಂಭವಿಸುತ್ತಿದ್ದರೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮಾತ್ರ ಜಾಗೃತರಾಗಿಲ್ಲ. ಹೌದು ಕಳೆದ ವರ್ಷ ಹುಮನಾಬಾದ ತಾಲೂಕಿನ ಮೂರು ಕಾರ್ಖಾನೆಗಳಲ್ಲಿ ಅವಘಡಗಳು ಸಂಭವಿಸಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು.

ಹತ್ತಾರು ಜನರು ಗಂಭೀರ ಗಾಯಗೊಂಡಿದ್ದರು. ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅವಘಡದಲ್ಲಿ ವ್ಯಕ್ತಿಯೊಬ್ಬ ಸಜೀವ ದಹನವಾಗಿದ್ದರು. ಇದೀಗ ಬೀದರ ಕೊಳಾರ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಾರ್ಖಾನೆಯಲ್ಲಿ ಜ.17ರಂದು ರಾತ್ರಿ ಸಂಭವಿಸಿದ ಅವಘಡದಲ್ಲಿ ಐವರು ಗಾಯಗೊಂಡಿದ್ದಾರೆ. ಇದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಧಿಕಾರಿಗಳ ನಿರ್ಲಕ್ಷ್ಯ: ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆಗಳು ಇಲ್ಲದ ಕಾರಣ ಅವಘಡಗಳಲ್ಲಿ ಕಾರ್ಮಿಕರು, ಸಿಬ್ಬಂದಿಗಳು ನರಳುವಂತಾಗುತ್ತಿದೆ. ಕಾರ್ಖಾನೆಗಳ ಮಾಲೀಕರು ಲಾಭಕ್ಕೆ ನೀಡುವ ಗೌರವ ಕಾರ್ಮಿಕರ ಹಾಗೂ ಸಿಬ್ಬಂದಿ ಜೀವನಕ್ಕೆ ನೀಡುತ್ತಿಲ್ಲ ಎಂಬ ಆರೋಪಗಳು ಹೆಚ್ಚಿವೆ. ಇದನ್ನು ಸೂಕ್ತ ಸಂದರ್ಭದಲ್ಲಿ ಪರಿಶೀಲಿಸಬೇಕಿರುವ ಅಧಿಕಾರಿಗಳು ಕಾರ್ಖಾನೆಗಳ ಮಾಲೀಕರ ಹಾಗೂ ಸ್ಥಳೀಯ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಕಾರ್ಖಾನೆಗಳ ಕಡೆಗೆ ತೆರಳುತ್ತಿಲ್ಲ ಎಂಬ ಆರೋಪಗಳು ಕೂಡ ಇವೆ.

ಸುರಕ್ಷತೆ ಕೊರತೆ: ಕೈಗಾರಿಕಾ ಪ್ರದೇಶದಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಹಾಗೂ ಸಿಬ್ಬಂದಿಗೆ ಸುರಕ್ಷತೆ ಕುರಿತು ತಿಳಿವಳಿಕೆ ನೀಡುವ ಕೆಲಸ ನಡೆಯುತ್ತಿಲ್ಲ. ಅಲ್ಲದೆ, ಕೆಲಸದ ಸಂದರ್ಭದಲ್ಲಿ ಜೀವ ರಕ್ಷಣೆಗಾಗಿ ಧರಿಸಬೇಕಾದ ಪರಿಕರ ಬಳಸದಿರುವುದು ಕೂಡ ಅವಘಡಗಳಲ್ಲಿ ಗಂಭೀರ ಗಾಯವಾಗಿ ನರಳುವ ಸ್ಥಿತಿ ಎದುರಾಗಿತ್ತಿದೆ. ಸದ್ಯ ಜಿಲ್ಲೆಯಲ್ಲಿ ಸಂಭವಿಸಿದ ವಿವಿಧ ಅವಘಡಗಳಲ್ಲಿ ಕಾರ್ಮಿಕರು ಹಾಗೂ ಸಿಬ್ಬಂದಿ ಸುರಕ್ಷತೆ ಪರಿಕರಗಳು ಬಳಸದಿರುವುದು ತಿಳಿದು ಬಂದಿದೆ. ಸುರಕ್ಷತೆ ಕುರಿತು ಕಾರ್ಖಾನೆಗಳ ಮುಖ್ಯಸ್ಥರಿಗೆ ತಿಳಿಸಿದರೆ ಕಿರುಕುಳ ನೀಡಿ ಕೆಲಸದಿಂದ ತೆಗೆದು ಹಾಕುತ್ತಾರೆ. ಈ ಬಗ್ಗೆ ಕಾರ್ಮಿಕ ಇಲಾಖೆ ಹೆಚ್ಚಾಗಿ ಕಾರ್ಮಿಕರ ಸುರಕ್ಷತೆ ಕುರಿತು ಕಾಳಜಿ ವಹಿಸುವಲ್ಲಿ ವಿಫಲಗೊಂಡಿದೆ ಎಂದು ಕೈಗಾರಿಕಾ ಕಾರ್ಮಿಕರು ನೋವು ತೊಡಿಕೊಂಡಿದ್ದಾರೆ.

ನ್ಯಾಯಾಧೀಶರ ಭೇಟಿ: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮನಗೋಳಿ ಪ್ರೇಮಾವತಿ ಅವರು ಶುಕ್ರವಾರ ಕೊಳಾರ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಗಾಯಗೊಂಡ ಕಾರ್ಮಿಕರ ಆರೋಗ್ಯ ವಿಚಾರಿಸಿದರು. ನಗರದ ಅಪೆಕ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಕಾರ್ಮಿಕರನ್ನು ಭೇಟಿಯಾದ ಅವರು, ಘಟನೆ ಕುರಿತು ಮಾಹಿತಿ ಪಡೆದರು. ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು. ಕಂಪನಿ ಮಾಲೀಕರೊಂದಿಗೆ ಮಾತನಾಡಿ ತಮಗೆ ಪರಿಹಾರ ಧನ ಕೊಡುವ ಬಗ್ಗೆ ಚರ್ಚಿಸುತ್ತೇನೆ. ಕಾನೂನಿನಡಿ ಪರಿಹಾರ ಧನ ಒದಗಿಸಲು ಪ್ರಯಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.