Udayavni Special

ಕೆಕೆಆರ್‌ಡಿಬಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ


Team Udayavani, Feb 25, 2020, 12:14 PM IST

BIDAR-TDY-1

ಬೀದರ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗಾಗಿ ಪೂರ್ಣ ಗೊಳಿಸುವಂತೆ ಜಿಲ್ಲಾಧಿಕಾರಿ ಡಾ|ಎಚ್‌. ಆರ್‌.ಮಹಾದೇವ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದಲ್ಲಿ ಸೋಮವಾರ ಜರುಗಿದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಅನುಷ್ಠಾಧಿನಾ ಕಾರಿಗಳು ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿ ಇನ್ನೂ ಆರಂಭವಾಗದೇ ಇರುವ ಕೆಲಸಗಳನ್ನು ಬೇಗ ಆರಂಭಿಸುವುದು, ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಮತ್ತು ಈಗಾಗಲೇ ಕೆಲಸಗಳು ಪೂರ್ಣಗೊಂಡಲ್ಲಿ ಅನುದಾನ ಖರ್ಚು ಮಾಡುವ ಕುರಿತಂತೆ ಚರ್ಚಿಸಿ, ಸೂಕ್ತ ಯೋಜನೆ ರೂಪಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೆಆರ್‌ಐಡಿಎಲ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಕೆಕೆಆರ್‌ಡಿಬಿ ಕಾಮಗಾರಿಗಳ ಸ್ಥಿತಿಗತಿಯ ಬಗ್ಗೆ ವಿವರಣೆ ಪಡೆದರು.

ಬೀದರ ನಗರಸಭೆಯಿಂದ 2016-17, 2018-19ನೇ ಸಾಲಿನ ಹಳೆಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದಾಗ, ನಗರಸಭೆ ಪೌರಾಯುಕ್ತರು ಮಾತನಾಡಿ, ಹಳೆಯ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಅಳವಡಿಸಬೇಕಿದೆ ಎಂದು ಮಾಹಿತಿ ನೀಡಿದರು.

ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿಗಳಲ್ಲಿ ಹಲವು ಕಟ್ಟಡ ಕಾಮಗಾರಿಗಳು, ಸಿಸಿ ರಸ್ತೆ, ಒಳಚರಂಡಿ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದರೂ ಸಹ ಅನುದಾನ ಖರ್ಚು ಮಾಡದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಯವರು, ಕಾಮಗಾರಿ ಪೂರ್ಣಗೊಳಿಸುವಲ್ಲಿ ನಿರ್ಲಕ್ಷತನ ತೋರಿಸುವ ಎಲ್ಲ ಅನುಷ್ಠಾನಾಧಿ ಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಗ್ರಾಮೀಣ ಸಡಕ್‌ ಯೋಜನೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ್‌, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The price of vegetables

“ಶತಕ’ ದಾಟಿದ ತರಕಾರಿಗಳ ಬೆಲೆ!

27

ಬಸವ ತತ್ವದ ಜಾಗತಿಕ ಪ್ರಚಾರ ಅಗತ್ಯ

21

ಕೈಗಾರಿಕೆಗಳ ತ್ಯಾಜ್ಯ ಅವೈಜ್ಷಾನಿಕ ವಿಲೇವಾರಿ

20

ರಸ್ತೆ ಸುಧಾರಣೆಗೆ ಮೊದಲ ಆದ್ಯತೆ

19

ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

hunasooru news

ಲಸಿಕಾಕರಣಕ್ಕೆ ಟಮಟೆ ಬಾರಿಸಿ, ಮೈಕ್ ಮೂಲಕ  ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.