ಕಾಲಮಿತಿಯಲ್ಲಿ ಬೆಳೆ ಸಮೀಕ್ಷೆ ಮುಗಿಸಿ

Team Udayavani, Sep 20, 2020, 5:46 PM IST

ಕಾಲಮಿತಿಯಲ್ಲಿ ಬೆಳೆ ಸಮೀಕ್ಷೆ ಮುಗಿಸಿ

ಬೀದರ: ಅತಿವೃಷ್ಟಿ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಜಂಟಿ ಸಮೀಕ್ಷೆ ಕಾರ್ಯಕ್ಕೆ ಜಿಲ್ಲಾಡಳಿತ ಆದೇಶಿಸಿದ್ದು, ಈಗ ಬಾಕಿ ಉಳಿದ ಬೆಳೆ ಸಮೀಕ್ಷೆ ಕಾರ್ಯವನ್ನುಕೂಡ ಕಾಲಮಿತಿಯೊಳಗಡೆ ಪೂರ್ಣಗೊಳಿಸಬೇಕು ಎಂದು ಡಿಸಿ ಆರ್‌. ರಾಮಚಂದ್ರನ್‌ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತೀವ್ರ ಮಳೆಯಿಂದಾಗಿ ವಿವಿಧೆಡೆಗಳಲ್ಲಿ ಭಾಗಶಃ ಹಾಗೂ ಸಂಪೂರ್ಣ ಮನೆಗಳು ಕುಸಿದಿವೆ. ರಸ್ತೆ ಮತ್ತು ಸೇತುವೆಗಳು ಹಾಳಾಗಿವೆ. ಪ್ರವಾಹ ಪರಿಸ್ಥಿತಿ ಎದುರಾದಂತಾಗಿದೆ. ಕೆಲವೆಡೆ ಜೀವಹಾನಿಯಾದ ಬಗ್ಗೆ ವರದಿಯಾಗಿದೆ. ಮನೆ ಹಾನಿ ಆಗಿರುವ ಬಗ್ಗೆ ನೋಟ್‌ ಕ್ಯಾಮ್‌ ಆ್ಯಪ್‌ ಮೂಲಕ ಛಾಯಾಚಿತ್ರಗಳೊಂದಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಾಂಜ್ರಾ ನದಿ ತೀರದಲ್ಲಿ ಇರುವ ಭಾಲ್ಕಿ ಮತ್ತು ಕಮಲನಗರ ಗಡಿ ಗ್ರಾಮಗಳು ವಿಶೇಷ ಗಮನ ಹರಿಸಬೇಕು. ಬಾಂದಾರ ಸೇತುವೆ, ಕೆರೆ ಹಳ್ಳಗಳ ಸಂಪೂರ್ಣ ಮಾಹಿತಿ ದಾಖಲಿಸಬೇಕು. ಪ್ರವಾಹದಿಂದ ಜನರಿಗೆ ತೊಂದರೆಯಾಗದಂತೆ ಕಂದಾಯ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು. ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಬೇಕು. ಪರಿಹಾರ ಕೇಂದ್ರಗಳಲ್ಲಿ ಆಹಾರ, ಶುದ್ಧ ಕುಡಿಯುವ ನೀರು, ಶುಚಿತ್ವ ಸೇರಿದಂತೆ ಮೂಲ ಸೌಕರ್ಯ ಒದಗಿಸಬೇಕು ಎಂದರು.

ಪರಿಹಾರ ಕೇಂದ್ರಗಳಲ್ಲಿ ಇರುವವರಿಗೆ ಕೋವಿಡ್‌ -19 ಹಿನ್ನೆಲೆಯಲ್ಲಿ ರ್ಯಾಪಿಡ್‌ ಆಂಟಿಜನ್‌ ಟೆಸ್ಟ್‌ ನಡೆಸಲು ಮತ್ತು ಸೊಳ್ಳೆ ಪರದೆ ವಿತರಿಸಲು ಡಿಎಚ್‌ಒ ಕ್ರಮ ವಹಿಸಬೇಕು. ಅಲ್ಲಿ ಆಹಾರ, ನೀರು ಸಿಕ್ಕಿಲ್ಲ ಎಂದು ದೂರು ಬಾರದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲು ತಾಪಂ ಇಒಗಳು ಕ್ರಮ ವಹಿಸಬೇಕು. ಜತೆಗೆ ಪರಿಹಾರ ಕೇಂದ್ರಗಳಲ್ಲಿ ಸುರಕ್ಷತೆಗಾಗಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಎಸ್‌ಪಿಗೆ ಸಲಹೆ ಮಾಡಿದರು.

ಪ್ರಕೃತಿ ವಿಕೋಪ ಪ್ರದೇಶಗಳಲ್ಲಿ ತುರ್ತು ಕೆಲಸಕ್ಕೆ ಸಲಕರಣೆಗಳು ಬೇಕಾದಲ್ಲಿ ಸ್ಥಳೀಯ  ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಖರೀದಿಸಲು ಅವಕಾಶ ನೀಡಲಾಗಿದೆ. ಯಾವುದೇ ಗ್ರಾಮ ಮಳೆಯಿಂದಾಗಿ ತೊಂದರೆಗೀಡಾದರೆ ಪರಿಹಾರ ಕೇಂದ್ರ ತೆರೆಯಲು ಅಲ್ಲಿನ ಯಾವುದಾದರೂ ಎತ್ತರದಲ್ಲಿರುವ ಪ್ರತ್ಯೇಕ ಸ್ಥಳವನ್ನು ಗುರುತಿಸಬೇಕು. ಪಿಡಿಒ, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಯಾವುದೇ ರೀತಿ ಜೀವಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಎಸ್‌ಪಿ ನಾಗೇಶ ಡಿ.ಎಲ್‌., ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಅಪರ ಡಿಸಿ ರುದ್ರೇಶ ಗಾಳಿ, ಸಹಾಯಕ ಆಯುಕ್ತೆ ಗರೀಮಾ ಪನವಾರ ಇದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.