ಸಂತ್ರಸ್ತರು ಸತ್ತ ಮೇಲೆ ಪರಿಹಾರ ನೀಡುತ್ತಾರಾ?: ಉಭಯ ಸರಕಾರಗಳ ವಿರುದ್ಧ ಈಶ್ವರ್ ಖಂಡ್ರೆ ಕಿಡಿ

Team Udayavani, Sep 12, 2019, 3:46 PM IST

ಬೀದರ: ಭೀಕರ ನೇರೆ ಸಂಭವಿಸಿದ ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದಿಗೂ ಸೂಕ್ತ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಎರಡೂ ವಿಫಲಗೊಂಡಿವೆ. ನೇರೆ ಪ್ರದೇಶದಲ್ಲಿನ ಸಂತ್ರಸ್ತರು ಸತ್ತ ಬಳಿಕ ಸರ್ಕಾರ ಪರಿಹಾರ ನೀಡುತ್ತದೆಯೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನು ಪ್ರಶ್ನಿಸಿದ್ದಾರೆ.

ನೇರೆಹಾವಳಿ ಸಂತ್ರಸ್ತರ ಬಗ್ಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಗುರುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ನೇರೆ ಪರಿಸ್ಥಿತಿ ಕುರಿತು  ಅಮಿತ್ ಶಾ  ಅವರು ವೈಮಾನಿಕ ಸಮೀಕ್ಷೆ ನಡೆಸಿ 40 ದಿನಗಳು ಕಳೆದರೂ ಕೂಡ ಈವರೆಗೆ ಕೇಂದ್ರ ಸರ್ಕಾರದಿಂದ ಚಿಕ್ಕಾಸು ಪರಿಹಾರ  ಬಂದಿಲ್ಲ. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇದೆ ಎಂದು ಹೇಳುತ್ತಿದ್ದಾರೆ ಹಾಗಾದರೆ ಇನ್ನು ಯಾವಾಗ ನೆರೆ ಸಂತ್ರಸ್ತರು ಸತ್ತಮೇಲೆ ಪರಿಹಾರ ಬರುತ್ತಾ ಎಂದು ಪ್ರಶ್ನಿಸಿದರು.

2008-09ರಲ್ಲಿ ರಾಜ್ಯದಲ್ಲಿ ನೆರೆ ಪರಿಸ್ಥಿತಿ ಉಂಟಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಹಾಗೂ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಆ ಸಂದರ್ಭದಲ್ಲಿ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದ್ದ ಕೇಂದ್ರ ಸರಕಾರತಕ್ಷಣಕ್ಕೆ ಎರಡು ಸಾವಿರ ಕೋಟಿ  ಪರಿಹಾರ ಒದಗಿಸಿತ್ತು. ಆದರೆ ಇಂದು ನೇರೆ ಸಂತ್ರಸ್ತರ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿವ್ಯ ನಿರ್ಲಕ್ಷ್ಯ ತೊರುತ್ತಿವೆ ಎಂದು ಖಂಡ್ರೆ ಆರೋಪಿಸಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನರು ಯಾಕೆ ಮತ ಹಾಕಿದರು ಎಂಬುದು ಇಂದಿಗೂ ಗೊತ್ತಾಗಿಲ್ಲ. ಜನರ ಸಂಕಷ್ಟದಲ್ಲಿ ಆಡಳಿತ ಪಕ್ಷದವರು ಸ್ಪಂದಿಸುತ್ತಿಲ್ಲ. ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ರಾಜ್ಯದಲ್ಲಿ ಸಂಭವಿಸಿದ ನೆರೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕಿತ್ತು ಈ ಮೂಲಕ ಕೇಂದ್ರ ಸರ್ಕಾರದ ವಿಶೇಷ ಅನುದಾನ ರಾಜ್ಯಕ್ಕೆ ದೊರೆಯುತ್ತಿತ್ತು. ಆದರೆ ಸದ್ಯ ಪ್ರತಿ ಜಿಲ್ಲೆಗೆ ಎರಡು ಮೂರು ಕೋಟಿ ಅನುದಾನ ಮಾತ್ರ ಕಲ್ಪಿಸಿದ್ದು, ಕೂಡಲೇ ಸರ್ಕಾರ ಪರಿಹಾರ ಕಲ್ಪಿಸಲು ಮುಂದಾಗಬೇಕು. ಇಲ್ಲವಾದಲ್ಲಿ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುವುದುವುದು ಅನಿವಾರ್ಯವಾಗಲಿದೆ ಎಂದು ಈಶ್ವರ್ ಖಂಡ್ರೆ ಅವರು ಎಚ್ಚರಿಕೆ ನೀಡಿದರು.

ಡಿಕೆಶಿಗೆ ಮಾನಸಿಕ ಕಿರುಕುಳ:
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಡಿಕೆಶಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ನಗರದ ಜಿಲ್ಲಾಧಿಕಾರಿ ಎದುರಿಗೆ ನಡೆದ ಪ್ರತಿಭಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಜತೆಗೆ ಅವರ ಕುಟುಂಬಸ್ಥರಿಗೂ ಸಹ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಆದರೆ, ಶಿವಕುಮಾರ್ ಅವರ ಜೊತೆ ಕಾಂಗ್ರೆಸ್ ಪಕ್ಷ ನಿಲ್ಲುತ್ತದೆ ಎಂದು ಅವರು ಹೇಳಿದರು.

ಹುಮನಾಬಾದ ಶಾಸಕ ರಾಜಶೇಖರ ಪಾಟೀಲ ಬಿಜೆಪಿ ಪಕ್ಷಕ್ಕೆ ಸೆರ್ಪಡೆ ಆಗುತ್ತಿದ್ದಾರೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಂಡ್ರೆ ಅವರು, ‘ರಾಜಶೇಖರ ಪಾಟೀಲ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಲ್ಲಾ ಗಾಳಿ ಸುದ್ದಿ’ ಎಂದು ಸ್ಪಷ್ಟಪಡಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಭಾಲ್ಕಿ: ಭಕ್ತಾದಿಗಳು ಶ್ರದ್ಧೆ-ಭಕ್ತಿಯಿಂದ ದೇವರ ಧ್ಯಾನ ಮಾಡಿದಲ್ಲಿ ದೇವರು ಒಲಿಯುವನು ಎಂದು ಶ್ರೀ ಜಗದ್ಗುರು ನಿರಂಜನ ಸಂಸ್ಥಾನ ಮಠ ಭಾತಂಬ್ರಾದ ಶ್ರೀ ಜಗದ್ಗುರು...

  • ಆಳಂದ: ಭಾರತ ಸರ್ಕಾರದ ಜಲಸಂಪನ್ಮೂಲ ಇಲಾಖೆ ಪ್ರತಿ ಐದು ವರ್ಷಗಳಿಗೊಮ್ಮೆ ಸಣ್ಣ ನೀರಾವರಿ ಗಣತಿ ಕಾರ್ಯವನ್ನು ಕೈಗೊಳ್ಳುತ್ತದೆ. ಈ ಗಣತಿ ಕಾರ್ಯಕ್ಕೆ ನೇಮಕವಾಗುವ...

  • ಹುಮನಾಬಾದ: ಈ ಹಿಂದಿನ ಶಿಕ್ಷಣ ಹಾಗೂ ಇಂದಿನ ಶಿಕ್ಷಣದ ವ್ಯವಸ್ಥೆಗಳು ಬದಲಾದಂತೆ ವಿದ್ಯಾರ್ಥಿಗಳು ಕೂಡ ಬದಲಾಗುತ್ತಿದ್ದಾರೆ. ಗುರುಶಿಷ್ಯರ ಮಧ್ಯೆ ಕೂಡ ಅಂತರ ಉಂಟಾಗುತ್ತಿರುವ...

  • ಔರಾದ: ಪಟ್ಟಣದ ಆರಾಧ್ಯ ದೈವ ಶ್ರೀ ಅಮರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ರವಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ರಥೋತ್ಸವ ಜರುಗಿತು. ಜಾತ್ರೋತ್ಸವ...

  • ಬಸವಕಲ್ಯಾಣ: ಇಷ್ಟಲಿಂಗ ಪೂಜೆ ಗುರು, ಲಿಂಗ, ಜಂಗಮ, ವಿಭೂತಿ ರುದ್ರಾಕ್ಷಿ ಸೇರಿದಂತೆ ಅಷ್ಟಾವರಣಗಳನ್ನು ಒಳಗೊಂಡಿದ್ದು, ನಿತ್ತ ಪೂಜೆ ಮಾಡಿದರೆ ಇಷ್ಟಾರ್ಥಗಳು ಈಡೇರುತ್ತವೆ...

ಹೊಸ ಸೇರ್ಪಡೆ