ಕಾಂಗ್ರೆಸ್ ನಾಯಕರಿಗೆ ಭಾರತಕ್ಕಿಂತ ಪಾಕಿಸ್ತಾನದ ಮೇಲೆ ಹೆಚ್ಚು ಪ್ರೀತಿ: ಶ್ರೀರಾಮಲು

Team Udayavani, Feb 18, 2020, 4:16 PM IST

ಬೀದರ್: ಕಾಂಗ್ರೆಸ್ ನಾಯಕರಿಗೆ ಭಾರತಕ್ಕಿಂತ ಪಾಕಿಸ್ತಾನದ ಮೇಲೆ ಹೆಚ್ಚು ಪ್ರೀತಿ ಇದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮಲು ಕೈ ನಾಯಕರ ವಿರುದ್ಧ ಗುಡುಗಿದ್ದಾರೆ.

ಬೀದರ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದವರ ಮೇಲೆ ಪ್ರಕರಣ ದಾಖಲಿಸಿದ್ದು ಹಾಗೂ ಬೀದರ್ ನ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಧಾನಿ ವಿರುದ್ದ ಅವಹೇಳನ ನಾಟಕ ಪ್ರದರ್ಶನದ ಕೇಸ್ ದಾಖಲಿಸಿದಕ್ಕೆ ಕೈ ನಾಯಕರು ಅವರ ಬೆನ್ನಿಗೆ ನಿಂತಿದ್ದಾರೆ. ಇದನ್ನು ನೋಡಿದರೆ ಕಾಂಗ್ರೆಸ್ ನಾಯಕರಿಗೆ ಪಾಕಿಸ್ಥಾನದ ಮೇಲೆ ಹೆಚ್ಚು ಪ್ರೀತಿ ಇದ್ದಹಾಗಿದೆ ಎಂದು ಕಿಡಿ ಕಾರಿದರು.

ಪ್ರತಿಯೊಬ್ಬ ಭಾರತೀಯ ನಾಗರಿಕ ಭಾರತ ಮಾತೆಗೆ ಜೈ ಎನ್ನಬೇಕೆ ಹೊರತು ಪಾಕಿಸ್ತಾಕ್ಕೆ ಜೈ ಅನ್ನಬಾರದು, ಹಾಗೆ ಮಾಡಿದರೆ ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲಾ. ಹಾಗೆ ಕೇಳಿಸಿಕೊಂಡು ಕೈಕಟ್ಟಿ ಕುಳಿತುಕೊಳ್ಲುವವರಲ್ಲ ಎಂದರು.

ವಿಪಕ್ಷಗಳು ಯಾವುದೇ ವಿಚಾರ ಅಧಿವೇಶನದಲ್ಲಿ ಚರ್ಚೆಗೆ ಬರಲಿ. ಅದಕ್ಕೆ ನಾವು ಚರ್ಚೆ ಮಾಡಲು ಸಿದ್ದರಿದ್ದೆವೆ. ಹೀಗೆ ಅಧೀವೇಶನ ಬಹಿಷ್ಕರಿಸುವುದು ಅವರಿಗೆ ಶೋಭೆ ತರುವಂತದಲ್ಲ. ಬಹಳಷ್ಟು ಜ್ವಲಂತ ಸಮಸ್ಯೆಗಳಿವೆ, ಅವುಗಳ ಬಗ್ಗೆ ಚರ್ಚೆ ಮಾಡಲಿ ಎಂದು ಶ್ರೀರಾಮುಲು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ