ದೇವಸ್ಥಾನ ಮುಖ್ಯದ್ವಾರದ ಕಾಮಗಾರಿಗೆ ಚಾಲನೆ


Team Udayavani, May 17, 2022, 2:53 PM IST

14temple

ಔರಾದ: ಉದ್ಭವಲಿಂಗ ಪಟ್ಟಣದ ಆರಾಧ್ಯ ದೈವ ಅಮರೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಸೋಮವಾರ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಚಾಲನೆ ನೀಡಿದರು.

ಇದಕ್ಕೂ ಮುನ್ನ ಬೀದರ ಸಹಾಯಕ ಆಯುಕ್ತ ಮಹಮ್ಮದ ನಯೀಮ್‌ ಮೋಮಿನ್‌, ಔರಾದ ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ, ದೇವಸ್ಥಾನ ಸಮಿತಿ ಸದಸ್ಯರು ಹಾಗೂ ಮುಖಂಡರೊಂದಿಗೆ ದೇವಸ್ಥಾನ ಜೀರ್ಣೋದ್ಧಾರ ಕುರಿತು ಸುದೀರ್ಘ‌ ಚರ್ಚಿಸಿದರು.

ಕರ್ನಾಟಕ ಮಾತ್ರವಲ್ಲದೇ ಪಕ್ಕದ ಮಹಾರಾಷ್ಟ್ರ ಹಾಗೂ ತೆಲಂಗಾಣಾ ರಾಜ್ಯಗಳಿಂದಲೂ ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರೇಶ್ವರ ದೇವರ ದರ್ಶನ ಪಡೆಯುತ್ತಾರೆ. ಈ ದೇವಸ್ಥಾನದ ಅಭಿವೃದ್ಧಿಯಿಂದಾಗಿ ಈ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೂ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.

ಔರಾದ ಜನತೆಯ ಆರಾಧ್ಯ ದೈವ ಸುಕ್ಷೇತ್ರ ಅಮರೇಶ್ವರ ದೇವಸ್ಥಾನವನ್ನು ಸುಂದರ ಗೊಳಿಸಬೇಕು. ಮಂದಿರವನ್ನು ಅಭಿವೃದ್ಧಿಪಡಿಸಲು ಸದಾ ನಿಮ್ಮೊಂದಿಗಿರುತ್ತೇನೆ. ತಾವು ಮುಂದೆ ನಿಂತು ಜೀರ್ಣೋದ್ಧಾರ ಕಾಮಗಾರಿ ಸರಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ದೇವಸ್ಥಾನ ಸಮಿತಿಯಲ್ಲಿ 1.35 ಕೋಟಿ ರೂ. ಅನುದಾನ ಲಭ್ಯವಿದೆ. ಇನ್ನೂ ಅವಶ್ಯಕತೆಯಿದ್ದಲ್ಲಿ ಶಾಸಕರ ನಿ ಧಿ, ಮುಜರಾಯಿ ಇಲಾಖೆ ಅಥವಾ ಪ್ರವಾಸೋದ್ಯಮ ಇಲಾಖೆ ಹೀಗೆ ಯಾವುದಾದರೂ ಯೋಜನೆಯಡಿ ಅನುದಾನ ಒದಗಿಸಲಾಗುವುದು. ಹಣಕ್ಕೆ ಕೊರತೆಯಿಲ್ಲ. ಕೆಲಸ ಸರಿಯಾಗಿ ಆಗಬೇಕು ಎಂದು ಸಚಿವರು ತಿಳಿಸಿದರು.

ದೇವಸ್ಥಾನದ ಪ್ರವೇಶದ್ವಾರ, ಗೋಪುರ, ಕಲ್ಲುಗಳ ಬಳಕೆ, ಕಾಂಪೌಂಡ್‌ ಗೋಡೆ ಸೇರಿದಂತೆ ದೇವಸ್ಥಾನವನ್ನು ಇನ್ನಷ್ಟು ಆಕರ್ಷಕವಾಗಿಸಲು ಅಗತ್ಯವಿರುವ ಕೆಲಸ-ಕಾರ್ಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ದೇವಸ್ಥಾನ ಸಮಿತಿಯ ಬಸವರಾಜ ದೇಶಮುಖ, ಡಾ| ಕಲ್ಲಪ್ಪ ಉಪ್ಪೆ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಬಂಡೆಪ್ಪ ಕಂಟೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ರವಿ ಮೀಸೆ, ಶರಣಪ್ಪ ಪಂಚಾಕ್ಷರಿ, ಸಂತೋಷ ಪೋಕಲವಾರ, ಪ್ರಕಾಶ ಅಲ್ಮಾಜೆ, ಬನ್ಸಿ ನಾಯಕ್‌, ಕೇರಬಾ ಪವಾರ್‌ ಸೇರಿದಂತೆ ದೇವಸ್ಥಾನ ಸಮಿತಿ ಸದಸ್ಯರು, ಪುರೋಹಿತರು ಹಾಗೂ ಸಾರ್ವಜನಿಕರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.