ಕೋವಿಡ್ ಕೇರ್ ಸೆಂಟರ್ ಆರಂಭ ಅಗತ್ಯ: ಖಾಶೆಂಪುರ
Team Udayavani, Jul 20, 2020, 12:15 PM IST
ಬೀದರ: ಜಿಲ್ಲೆಯಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಕೇರ್ ಸೆಂಟರ್ (ಸಿಸಿಸಿ) ತೆರೆಯುವುದು ಅವಶ್ಯಕವಾಗಿದೆ ಎಂದು ಬೀದರ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ ಜಿಲ್ಲಾ ಧಿಕಾರಿ ಮತ್ತು ಡಿಎಚ್ಒಗೆ ಸಲಹೆ ನೀಡಿದ್ದಾರೆ.
ಪ್ರಸ್ತಾವನೆಗೆ ಸಂಬಂಧಿಸಿದಂತೆ ನಗರದ ಹೊರವಲಯದ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿವಿ ಆವರಣದಲ್ಲಿರುವ ರೈತರ ವಸತಿ ನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾಡುವ ಸಲುವಾಗಿ ಕಾಯ್ದಿರಿಸಲಾಗಿತ್ತು. ಅದರಂತೆಯೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಂದು ಸ್ಥಳ ಪರಿಶೀಲನೆ ಮಾಡಿ ಕೋವಿಡ್ ಕೇರ್ ಸೆಂಟರ್
ಸ್ಥಾಪಿಸುವ ಕುರಿತು ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕೋವಿಡ್ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಕೋವಿಡ್ ಕೇರ್ ಸೆಂಟರ್ಗಳ ಅವಶ್ಯಕತೆ ಇದೆ. ಕೇರ್ ಸೆಂಟರ್ ತೆರೆಯುವ ಮೂಲಕ ಉತ್ತಮ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ ಅಧಿಕಾರಿಗಳಿಗೆ ತಿಳಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್., ಇದು ಸಿಸಿಸಿಗೆ ಸೂಕ್ತವಾದ ಸ್ಥಳವಾಗಿದ್ದು, ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಿ ಆದಷ್ಟು ಬೇಗ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವಂತೆ ಡಿಎಚ್ಒ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಡಿಎಚ್ಒ ವಿ.ಜಿ. ರೆಡ್ಡಿ, ಆರೋಗ್ಯ ಇಲಾಖೆ ಅಧಿಕಾರಿಗಳು, ಪಶು ವಿವಿ ಅಧಿಕಾರಿಗಳು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?