ಬೀದರನಲ್ಲಿ ಹೆಚ್ಚುತ್ತಿದೆ ಕೊರೊನಾರ್ಭಟ!

Team Udayavani, Mar 20, 2021, 7:24 PM IST

vbvbxcvb

ಬೀದರ : ಗಡಿನಾಡು ಬೀದರನಲ್ಲಿ ಎರಡನೇ ಅಲೆ ರೂಪದಲ್ಲಿ ಅಪ್ಪಳಿಸಿರುವ ಹೆಮ್ಮಾರಿ ಕೊರೊನಾ ತನ್ನ ಆರ್ಭಟ ಮತ್ತೆ ಮುಂದುವರೆಸಿದೆ. ಹೊಸದಾಗಿ ಶುಕ್ರವಾರ ಮತ್ತೆ 40 ಹೊಸ ಪಾಸಿಟಿವ್‌ ಪ್ರಕರಣ ದೃಢಪಟ್ಟಿದ್ದರೆ, ಓರ್ವ ವೃದ್ಧೆ ಸಾವು ಸಂಭವಿಸಿದೆ. ಕೇವಲ ಆರು ದಿನಗಳಲ್ಲಿ 250 ಸೋಂಕಿತರು ಪತ್ತೆಯಾಗಿರುವುದು ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ.

ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್‌ ಸೋಂಕು ತನ್ನ ಕೆನ್ನಾಲಿಗೆ ಚಾಚುತ್ತಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೀದರ ಜಿಲ್ಲೆಗೂ ನಿಧಾನವಾಗಿ ಹಬ್ಬುತ್ತಿದೆ ಎಂಬ ಆತಂಕ ಬಿಸಿಲೂರಿನ ಜನರನ್ನು ಕಾಡಲಾರಂಭಿಸಿದೆ. ಸೋಂಕಿತರ ಕೇಸ್‌ ಗಳು ಕುಸಿಯುತ್ತ ಬಂದಿದ್ದರಿಂದ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದರು. ಇದರಿಂದ ಸಾಮಾನ್ಯ ಜನಜೀವನ ಮೊದಲಿನಂತೆ ಯಥಾಸ್ಥಿತಿಗೆ ತಲುಪುತ್ತಿತ್ತು.

ಆದರೆ, ಈಗ ಮತ್ತೂಮ್ಮೆ ಕೋವಿಡ್‌ ಕಂಟಕವಾಗಿ ಪರಿಣಮಿಸುತ್ತಿದ್ದು, ಎರಡು ದಿನದಲ್ಲಿ ಇಬ್ಬರನ್ನು ಬಲಿ ಪಡೆದಿದೆ. ಸೋಂಕಿಗೆ ಗುರುವಾರ 47 ವರ್ಷದ ನ್ಯಾಯವಾದಿ ಮೃತಪಟ್ಟಿದ್ದರೆ, ಶುಕ್ರವಾರ 75 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಸಾರಿ ಹಿನ್ನೆಲೆ ಹೊಂದಿದ್ದ ಈಕೆ ಮಾ. 16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಾ. 14ರಿಂದ ಆರು ದಿನಗಳಲ್ಲಿ 250 ಪಾಸಿಟಿವ್‌ ಕೇಸ್‌ ವರದಿಯಾಗಿವೆ. ಮಾ. 14 ರಂದು 36, 15ಕ್ಕೆ 27, 16ಕ್ಕೆ 52, 17ಕ್ಕೆ 55 ಮತ್ತು 18ಕ್ಕೆ 41 ಸೋಂಕಿತರು ಪತ್ತೆಯಾಗಿದ್ದಾರೆ.

ನ್ಯಾಯಾಧೀಶರು ಸೇರಿ ಸಿಬ್ಬಂದಿಗೆ ಸೋಂಕು ತಗುಲಿರುವುದು ಮತ್ತು ನ್ಯಾಯವಾದಿ ಸಾವು ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯ ಪರಿಸರವನ್ನು ಕಂಟೈನ್ಮೆಂಟ್‌ ಝೋನ್‌ ಎಂದು ಘೋಷಿಸಲಾಗಿದೆ. ಮಾ. 22ರವರೆಗೆ ಕೋರ್ಟ್‌ ಎಲ್ಲ ಶ್ರೇಣಿ ನ್ಯಾಯಾಲಯಗಳಲ್ಲಿ ಕಲಾಪಗಳನ್ನು ಬಂದ್‌ ಮಾಡಲಾಗಿದೆ. ಅಷ್ಟೇ ಅಲ್ಲದೆ ನಗರಸಭೆ ಸಿಬ್ಬಂದಿಗೆ ಪಾಸಿಟಿವ್‌ ಬಂದಿರುವುದರಿಂದ ಇಡೀ ಕಚೇರಿಯನ್ನು ಸೀಲ್‌ಡೌನ್‌ ಮಾಡಿ ಸ್ಯಾನಿಟೈಜ್‌ ಮಾಡಲಾಗಿದೆ.

ಕಚೇರಿ ಮುಖ್ಯ ದ್ವಾರದದಲ್ಲಿ ಸೀಲ್‌ಡೌನ್‌ ಫಲಕ ಹಾಕಲಾಗಿದೆ. ಸೋಂಕಿತರ ಸಂಪರ್ಕ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿ, ಸಿಬ್ಬಂದಿ ಹಾಗೂ ಪೌರ ಕಾರ್ಮಿಕರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಶನಿವಾರದವರೆಗೆ ಕಚೇರಿ ಸೀಲ್‌ ಡೌನ್‌ ಇರಲಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗಿದೆ.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.