ಕೋವಿಡ್‌ ಆಸ್ಪತ್ರೆ ವ್ಯವಸ್ಥೆ ಪರಿಶೀಲಿಸಿದ ಜಿಲ್ಲಾಧಿಕಾರಿ

Team Udayavani, Jul 24, 2020, 10:18 AM IST

ಕೋವಿಡ್‌ ಆಸ್ಪತ್ರೆ ವ್ಯವಸ್ಥೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಬೀದರ: ನಗರದಲ್ಲಿ ಕೋವಿಡ್  ಸೋಂಕಿತರು ದಾಖಲಿರುವ ಬ್ರಿಮ್ಸ್‌ ಕೋವಿಡ್‌-19 ಆಸ್ಪತ್ರೆಗೆ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಗುರುವಾರ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.

ಪಿಪಿಇ ಕಿಟ್‌ ಧರಿಸಿ, ವೈದ್ಯರ ತಂಡದೊಂದಿಗೆ ಆಸ್ಪತ್ರೆ ಪ್ರವೇಶಿಸಿದ ಡಿಸಿ, ಅಲ್ಲಿನ ಐಸಿಯು ವಾರ್ಡ್‌ಗಳಲ್ಲಿ ಸಂಚರಿಸಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಕೋವಿಡ್‌ ಆಸ್ಪತ್ರೆಯಲ್ಲಿ ಊಟ, ಉಪಹಾರ, ಚಿಕಿತ್ಸೆ ಮತ್ತು ಆರೈಕೆ ವ್ಯವಸ್ತೆ ಕುರಿತು ವಿಚಾರಿಸಿದರು. ಎಲ್ಲವೂ ಸರಿಯಾಗಿ ಸಿಗುತ್ತಿದೆ ಎಂದು ರೋಗಿಗಳು ಪ್ರತಿಕ್ರಿಯಿಸಿದರು.

ಕೋವಿಡ್‌ ಮತ್ತು ಕೋವಿಡ್‌ ಅಲ್ಲದವರು ಯಾರೆಂದು ಗುರುತಿಸಲು ಗಂಟಲು ದ್ರವದ ಮಾದರಿ ಕಳುಹಿಸಿದ ಕೂಡಲೇ ವರದಿ ಬರುವವರೆಗೆ ಅಂಥವರನ್ನು ವಿಂಗಡಣಾ ಘಟಕಗಳಲ್ಲಿ ದಾಖಲು ಮಾಡಲಾಗುತ್ತದೆ. ವರದಿ ಬಂದ ಕೂಡಲೇ ಕೋವಿಡ್‌ ಸೋಂಕಿತರನ್ನು ಕೋವಿಡ್‌-19 ನಿಗದಿತ ಆಸ್ಪತ್ರೆಯ ವಾರ್ಡ್‌ಗೆ ಕಳುಹಿಸಲಾಗುತ್ತದೆ ಎಂದು ವೈದ್ಯಾಧಿಕಾರಿಗಳು ಡಿಸಿಗೆ ಮಾಹಿತಿ ನೀಡಿದರು.

ಇದಕ್ಕೂ ಮೊದಲು ಡಿಸಿ ಫೀವರ್‌ ಕ್ಲಿನಿಕ್‌ಗೆ ಭೇಟಿ ನೀಡಿ ಅಲ್ಲಿ ಇಡಲಾಗಿದ್ದ ಹಲವಾರು ವಹಿಗಳನ್ನು ಪರಿಶೀಲಿಸಿದರು. ಆಸ್ಪತ್ರೆಗೆ ಬರುವ ರೋಗಿಗಳನ್ನು ಇಲ್ಲಿ ಪರಿಶೀಲಿಸಿ ವಿಂಗಡಿಸಲಾಗುತ್ತದೆ. ಈ ವೇಳೆ ಕೋವಿಡ್‌ ಸೋಂಕಿನ ಲಕ್ಷಣಗಳು ಕಂಡುಬಂದ ಕೂಡಲೇ ಅಂಥ ರೋಗಿಗಳ ಗಂಟಲು ದ್ರವದ ಪರೀಕ್ಷೆಗೆ ಏರ್ಪಾಡು ಮಾಡಲಾಗುತ್ತದೆ ಎಂದು ವೈದ್ಯಾಧಿ ಕಾರಿಗಳು ಮಾಹಿತಿ ನೀಡಿದರು.

ಹೆಲ್ಪ್ ಡೆಸ್ಕ್ ಪರಿಶೀಲನೆ: ಹೆಲ್ಪ್ ಡೆಸ್ಕ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ರಕ್ತದ ಪರೀಕ್ಷೆ ಕಳುಹಿಸಿದ ಸಮಯ, ಕಳುಹಿಸಬೇಕಾದ ಸಮಯ, ರೋಗಿಗಳು ದಾಖಲು ಮತ್ತು ಬಿಡುಗಡೆ ವಿವರ ಸೇರಿದಂತೆ ಯಾವುದೇ ಮಾಹಿತಿಯು ಹೊರಗಿನಿಂದ ಒಳಗೆ, ಒಳಗಿನಿಂದ ಹೊರಗೆ ಹೋಗುವಾಗ ಈ ಹೆಲ್ಪ್ ಡೆಸ್ಕ್ನಲ್ಲಿ ದಾಖಲಾಗುತ್ತದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ರ್ಯಾಪಿಡ್‌ ಎಂಟಿಜೆನ್‌ ಟೆಸ್ಟಿಂಗ್‌ ಬಗ್ಗೆ ಕೂಡ ಮಾಹಿತಿ ಪಡೆದರು. ಬ್ರಿಮ್ಸ್‌ ನಿರ್ದೇಶಕ ಡಾ| ಶಿವಕುಮಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ರತಿಕಾಂತ ಸ್ವಾಮಿ, ವೈದ್ಯಕೀಯ ಅಧಿಧೀಕ್ಷಕ ಡಾ| ವಿಜಯಕುಮಾರ ಅಂತಪ್ಪನವರ ಇದ್ದರು.

ಬ್ರಿಮ್ಸ್‌ ವ್ಯವಸ್ಥೆಗೆ ಮೆಚ್ಚುಗೆ : ಕೋವಿಡ್ ಸೋಂಕು ನಿಯಂತ್ರಣ ಕಾರ್ಯಾಚರಣೆಯಲ್ಲಿ ಬ್ರಿಮ್ಸ್‌ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಎಲ್ಲ ವೈದ್ಯಾಧಿಕಾರಿಗಳು, ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್‌-19 ನಿಗದಿತ ಆಸ್ಪತ್ರೆಯಲ್ಲಿನ ರೋಗಿಗಳಿಗೆ ತಾವು ಖುದ್ದು ಭೇಟಿ ಮಾಡಿದ್ದು, ಚಿಕಿತ್ಸೆ ಮತ್ತು ಆರೈಕೆ ಉತ್ತಮವಾಗಿ ಸಿಗುತ್ತಿರುವುದಾಗಿ ಸೋಂಕಿತರು ಹೇಳಿದ್ದಾರೆ. ರೋಗಿಗಳ ಮೇಲೆ ತಾಯಿ ಪ್ರೀತಿ ತೋರುತ್ತ ಚಿಕಿತ್ಸೆ ನೀಡುತ್ತಿರುವ ಎಲ್ಲ ಆರೋಗ್ಯ ಸಿಬ್ಬಂದಿಗೆ ನಮನ ಸಲ್ಲಿಸುತ್ತೇನೆ.  –ಆರ್‌. ರಾಮಚಂದ್ರನ್‌, ಡಿಸಿ, ಬೀದರ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.