ಬೆಳೆ ಹಾನಿ: ಸರ್ಕಾರ ನೆರವಿಗೆ ಧಾವಿಸಲಿ


Team Udayavani, Aug 11, 2022, 6:23 PM IST

14-crop

ಬೀದರ: ಜಿಲ್ಲೆಯಲ್ಲಿ ಮಳೆಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಮೊದಲನೇ ಕಂತಿನಲ್ಲಿ ಕೂಡಲೇ ಎಕರೆಗೆ 25 ಸಾವಿರ ರೂ. ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್‌ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಭಾರಿ ಮಳೆಯಿಂದ ಬೆಳೆ ಹಾನಿ ಸಂಭವಿಸಿದ ಬೀದರ ದಕ್ಷಿಣ ಕ್ಷೇತ್ರದ ಕೋಳಾರ (ಬಿ) ಮತ್ತು ಆಣದೂರ ಜಮೀನುಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ನಿರಂತರ ಮಳೆಯಿಂದ ಕ್ಷೇತ್ರದ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ನಾಶವಾಗಿವೆ. ಕ್ಷೇತ್ರದಲ್ಲಿ ಸುಮಾರು 53 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮುಂಗಾರು ಬಿತ್ತನೆ ಮಾಡಲಾಗಿತ್ತು. ಬಿತ್ತನೆ ಮಾಡಿದ ಬಹುತೇಕ ಬೆಳೆ ಸಂಪೂರ್ಣವಾಗಿ ಹಾನಿಗಿಡಾಗಿದ್ದು, ಸರ್ಕಾರ ಕೂಡಲೇ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ಕ್ಷೇತ್ರದಲ್ಲಿ ಸಂಭವಿಸಿದ ಬೆಳೆ ಹಾನಿಯ ಸಮೀಕ್ಷೆ ಕೃಷಿ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸಮೀಕ್ಷೆ ವರದಿಯನ್ನು ಎರಡ್ಮೂರು ದಿನಗಳಲ್ಲಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಶಾಸಕರು, ವರದಿಯನ್ನು ತಕ್ಷಣವೇ ಸಿಎಂ ಗಮನಕ್ಕೆ ತಂದು ಜಿಲ್ಲೆಯಲ್ಲಿ ಸಂಭವಿಸಿರುವ ಬೆಳೆ ಹಾನಿಯ ಬಗ್ಗೆ ಮಾಹಿತಿ ನೀಡಿ ಪರಿಹಾರ ಒದಗಿಸಿಕೊಡುವ ಪ್ರಯತ್ನ ಮಾಡುತ್ತೇನೆ ಎಂದರು.

ರಸ್ತೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರಿಗೆ 15 ದಿನಗಳಲ್ಲಿ ಪರಿಹಾರ ನೀಡುತ್ತಾರೆ. ರೈತರಿಗೆ ಸಮಸ್ಯೆಯಾದರೆ ಏಕೆ 15 ದಿನಗಳಲ್ಲಿ ಪರಿಹಾರ ನೀಡಲಾಗುತ್ತಿಲ್ಲ. ಸರ್ಕಾರ ರೈತರ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಏಕೆ? ಈ ಬಗ್ಗೆ ಅಧಿವೇಶನದಲ್ಲಿ ಕೂಡ ಪ್ರಶ್ನೆ ಮಾಡಿದ್ದೇನೆ. ರೈತರ ಪರವಾಗಿ ನಾವು ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಪರವಾಗಿ ಕೆಲಸ ಮಾಡುತ್ತೇವೆ. ರೈತ ಸಾಲಗಾರ ಆಗಬಾರದು. ಆ ರೀತಿಯ ಯೋಜನೆಗಳನ್ನು ನಾವು ಜಾರಿಗೆ ತರುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಸಹಾಯಕ ಕೃಷಿ ನಿರ್ದೇಶಕ ದೂಳಪ್ಪ ಹೊಸಳ್ಳಿ, ಕಮಠಾಣಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸುನೀಲ, ಕಂದಾಯ ನಿರೀಕ್ಷಕ ಜೈಭೀಮ್‌, ಗ್ರಾಮ ಲೆಕ್ಕಾಧಿಕಾರಿ ರೇಣುಕಾ, ಗ್ರಾಪಂ ಸದಸ್ಯರಾದ ಖಾಶಿನಾಥ ಮೇತ್ರೆ, ಶ್ರೀಮಂತ ಸಂಗಪ್ಪ, ಗೌತಮ ಸೇರಿದಂತೆ ರೈತ ಮುಖಂಡರು ಇದ್ದರು.

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.