ಪಡಿತರ ಕದೀಮರ ಹೆಡೆಮುರಿ ಕಟ್ಟಲು ಡಿಸಿ ತಾಕೀತು

Team Udayavani, Oct 6, 2018, 11:44 AM IST

bid-1.jpg

ಬೀದರ: ಜಿಲ್ಲೆಯ ವಿವಿಧೆಡೆ ಅಕ್ರಮ ಪಡಿತರ ಅಕ್ಕಿ ಪತ್ತೆಯಾಗುತ್ತಿರುವ ಬೆನ್ನಲ್ಲೇ ಶುಕ್ರವಾರ ಹುಮನಾಬಾದ ಪಟ್ಟಣದ ಗೋದಾಮು ಒಂದರಲ್ಲಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಪ್ಯಾಕ್‌ಗಳು ಪತ್ತೆಯಾಗಿದ್ದು, ಅನೇಕ ಅನುಮಾನಗಳು ಹುಟ್ಟುವಂತೆ ಮಾಡಿದೆ.

ಜಿಲ್ಲೆಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಹಾಗೂ ಸಂಗ್ರಹಣೆಯಲ್ಲಿ ತೊಡಗಿರುವ ಆರೋಪಿಗಳ ಹೆಡೆಮುರಿ ಕಟ್ಟಲು ಜಿಲ್ಲಾಧಿಕಾರಿ ಡಾ.ಎಚ್‌.ಆರ್‌. ಮಹಾದೇವ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೆ.5ರಂದು “ಉದಯವಾಣಿ’ಯಲ್ಲಿ “ಪಡಿತರ ಅಕ್ಕಿ ಅಕ್ರಮ ಸಾಗಾಟ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ, ಆಹಾರ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮಕ್ಕೆ ಕಡಿವಾಣ ಹಾಕಬೇಕೆಂದು ಜಿಲ್ಲಾಧಿಕಾರಿಗಳು ಆಹಾರ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ಕಳೆದ ತಿಂಗಳಲ್ಲಿ ಕೂಡ ಹುಮನಾಬಾದ ಪಟ್ಟಣದಲ್ಲಿ ಅಕ್ಕಿ ಗೋದಾಮಿನ ಮೇಲೆ
ದಾಳಿ ನಡೆದ ಸಂದರ್ಭದಲ್ಲಿ ಕ್ಷೀರ ಭಾಗ್ಯ ಯೋಜನೆಯ 50 ಪ್ಯಾಕ್‌ ಹಾಲಿನ ಪೌಡರ್‌ ಪತ್ತೆಯಾಗಿದ್ದವು. ನಂತರ ಚಿಟಗುಪ್ಪ ಪಟ್ಟಣದಲ್ಲಿ ದಾಳಿ ನಡೆದ ಸಂದರ್ಭದಲ್ಲಿ ಕ್ಷೀರ ಭಾಗ್ಯ ಯೋಜನೆಯ ಸುಮಾರು ನಾಲ್ಕು ಕ್ವಿಂಟಲ್‌ ಹಾಲಿನ ಪ್ಯಾಕ್‌ಗಳು ಪತ್ತೆಯಾಗಿದ್ದವು. ಇದೀಗ ಹುಮನಾಬಾದ ಪಟ್ಟಣದ ಎಪಿಎಂಸಿ ಪ್ರಾಂಗಣದ ಗೋದಾಮಿನಲ್ಲಿ ದಾಳಿ ನಡೆದ ಸಂದರ್ಭದಲ್ಲಿ 74 ಪ್ಯಾಕ್‌ಗಳು ಪತ್ತೆಯಾಗಿದ್ದು, ವಿವಿಧ ಇಲಾಖೆ ಅಧಿಕಾರಿಗಳು ಕಳ್ಳ ದಂಧೆಯಲ್ಲಿ ಭಾಗಿಯಾಗಿದ್ದಾರೆ
ಎಂಬ ಅನುಮಾನಕ್ಕೆ ಪುಷ್ಟಿ ಬಂದಿದೆ.

ಕ್ಷೀರ ಭಾಗ್ಯ ಯೋಜನೆ: ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ಅವಶ್ಯವಿರುವ ಪೌಷ್ಟಿಕ ಆಹಾರ ಒದಗಿಸುವ ದಿಸೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಹಾಲು ಮಹಾಮಂಡಳಿಯ ಸಹಯೋಗದೊಂದಿಗೆ ರಾಜ್ಯದ ಶಾಲಾ ಮಕ್ಕಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಹಾಲು ಒದಗಿಸುವ ಕ್ಷೀರಭಾಗ್ಯ ಯೋಜನೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಆಗಸ್ಟ್‌ 2013ರಲ್ಲಿ ಜಾರಿಗೆ ತರಲಾಗಿತ್ತು.

ಯಾರಿಗೆ ವಿತರಣೆ?: ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ 500 ಗ್ರಾಂ, ಹಾಗೂ 1 ಕೆಜಿ ಪ್ಯಾಕ್‌ ಗಳನ್ನು ವಿತರಣೆ ಮಾಡಲಾಗುತ್ತಿದೆ. ರಾಜ್ಯದ 55,683 ಶಾಲೆಗಳ 64 ಲಕ್ಷ ಮಕ್ಕಳಿಗೆ, 5 ಲಕ್ಷ ಲೀಟರ್‌ ಹಾಲು ಹಾಗೂ 64,000 ಅಂಗನವಾಡಿ ಕೇಂದ್ರಗಳ 40 ಲಕ್ಷ ಮಕ್ಕಳಿಗೆ 3 ಲಕ್ಷ ಲೀಟರ್‌ ಹಾಲು ವಿತರಣೆ ಮಾಡಲಾಗುತ್ತಿದೆ ಎಂದು ಹಾಲು ಮಹಾಮಂಡಳಿ ಆನ್‌ಲೈನ್‌ಲ್ಲಿ ಪ್ರಕಟಿಸಿದೆ.

ಎಷ್ಟು ಪ್ರಮಾಣ?: ಪ್ರತಿ ವಿದ್ಯಾರ್ಥಿಗೆ 80 ಗ್ರಾಂ ಅಂದರೆ 150 ಮಿ.ಲೀ. ಹಾಲಿಗೆ ಸಮವಾಗಿ ವಾರದ ಐದು ದಿನಗಳು ಕೆನೆಭರಿತ ಹಾಲು ವಿತರಣೆ ಮಾಡಬೇಕು. ಈ ಯೋಜನೆಯ ಮೂಲಕ ಸರ್ಕಾರ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆ ಮಾಡುವ ಉದ್ದೇಶ ಹೊಂದಿದ್ದು, ಇದೀಗ ಹಾಲಿನ ಪೌಡರ್‌ ಕೂಡ ಕಳ್ಳಸಂತೆಗೆ ಸೇರುತ್ತಿದೆ. ಮಕ್ಕಳ ಆರೋಗ್ಯ ಕಾಪಾಡಬೇಕಾದವರೆ ಈ ಅಕ್ರಮದಲ್ಲಿ ಭಾಗಿಯಾಗಿ, ಮಕ್ಕಳ ಭವಿಷ್ಯದ ಜೊತೆಗೆ ಚಲ್ಲಾಟ ಆಡುತ್ತಿದ್ದಾರೆ.

ಕಾಣದ ಕೈಗಳು: ಅಕ್ರಮ ಪಡಿತರ ಅಕ್ಕಿ, ಗೋಧಿ ಹಾಗೂ ಮಕ್ಕಳ ಕ್ಷೀರಭಾಗ್ಯ ಯೋಜನೆಯ ಹಾಲಿ ಪ್ಯಾಕ್‌ಗಳು ಖಾಸಗಿ ಗೋದಾಮುಗಳಲ್ಲಿ ಪತ್ತೆಯಾಗುತ್ತಿದ್ದು, ಈ ದಂಧೆಕೋರರ ಹಿಂದೆ ಪ್ರಭಾವಿ ರಾಜಕಾರಣಿಗಳು ಇದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಣದ ಕೈಗಳು ಈ ಅಕ್ರಮಕ್ಕೆ ಸಾಥ್‌ ನೀಡುತ್ತಿವೆ ಎಂಬ ಆರೋಪಗಳು ಇದ್ದು, ಸದ್ಯ ಜಿಲ್ಲಾಧಿಕಾರಿಗಳು ತೆಗೆದುಕೊಂಡ ದಿಟ್ಟ ಹೆಜ್ಜೆಯಿಂದ ಅಕ್ರಮ ದಂಧೆಗೆ ಕಡಿವಾಣ ಬೀಳಬಹುದೇ ಎಂಬುದನ್ನು ಕಾದುನೊಡಬೇಕಾಗಿದೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.