ಕಲ್ಯಾಣದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ

ನಗರ ಪ್ರದೇಶದಲ್ಲಿ ಮುಸ್ಲಿಂ ವೋಟ್‌ ಗಳು ಜೆಡಿಎಸ್‌ನತ್ತ ಬಿದ್ದಿದ್ದರೂ ಹಳ್ಳಿಗಳಲ್ಲಿ ಕಾಂಗ್ರೆಸ್‌ ನತ್ತ ವಾಲಿದೆ

Team Udayavani, Apr 19, 2021, 6:57 PM IST

kalyana

ಬೀದರ: ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ಮುಗಿಯುತ್ತಿದ್ದಂತೆ ಈಗ ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಡುವೆಯೂ ಮತಗಳ ವಿಭಜನೆ ಲೆಕ್ಕದಲ್ಲಿ ಕಾಂಗ್ರೆಸ್‌ಗೆ ಲಾಭವಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಬಸವಣ್ಣನ ಕರ್ಮಭೂಮಿಯಲ್ಲಿ ಹಿಡಿತ ಸಾಧಿಸಬೇಕೆಂದು ಪಣ ತೊಟ್ಟು ಆಡಳಿತಾರೂಢ ಬಿಜೆಪಿ, ವಿಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ಚುನಾವಣೆ ಪ್ರಚಾರ ನಡೆಸಿವೆ. ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್‌ನಿಂದ ಮಾಲಾ ನಾರಾಯಣರಾವ್‌, ಜೆಡಿಎಸ್‌ನಿಂದ ಸೈಯದ್‌ ಯಸ್ರಬ್‌ ಅಲಿ ಖಾದ್ರಿ, ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮತದಾನದ ಕೊನೆ ಹಂತದವರೆಗೂ ವೋಟಿನ ಬೇಟೆ ನಡೆಸಿದ್ದು, ಮತದಾರರು ಈಗ ಯಾರ ಕೈ ಹಿಡಿದಿದ್ದಾರೆ ಎಂಬ ಆಂತರಿಕ ಸಮೀಕ್ಷೆಯಲ್ಲಿ ತೊಡಗಿದ್ದಾರೆ.

ಮತದಾನ ನಡೆದ ಮತಗಟ್ಟೆ ಕೇಂದ್ರಗಳ ಪಟ್ಟಿ ಹಿಡಿದಿರುವ ಮುಖಂಡರು ಗೆಲುವಿನ ಲೆಕ್ಕಾಚಾರ ನಡೆಸಿದ್ದಾರೆ. ಬೂತ್‌ ಮಟ್ಟದಲ್ಲಿ ಜಾತಿವಾರು ಮತದಾರರ ಸಂಖ್ಯೆ, ಯಾವ ಪಕ್ಷಕ್ಕೆ ಬೆಂಬಲ ಸಿಕ್ಕಿದೆ ಎಂಬಿತ್ಯಾದಿ ಪ್ರಶ್ನೆ ಮುಂದಿಟ್ಟುಕೊಂಡು ಮಾಹಿತಿ ಕಲೆ ಹಾಕುತ್ತಿದ್ದಾರೆ. ತಮ್ಮ ಪಕ್ಷಗಳ ಆಂತರಿಕ ಸಮೀಕ್ಷೆ, ವರದಿ ನೋಡಿ ಕಾರ್ಯಕರ್ತರು ನಮ್ಮದೇ ಪಕ್ಷದ ಅಭ್ಯರ್ಥಿ ಗೆಲುವು ಖಚಿತ ಎಂದು ಬೀಗುತ್ತಿದ್ದಾರೆ. ಆದರೆ ಇದಕ್ಕೆ ಸ್ಪಷ್ಟ ಉತ್ತರ ಮಾತ್ರ ಮೇ 2ರ ಫಲಿತಾಂಶದಂದೇ ಸಿಗಲಿದೆ.

ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಶೇ.4 ಮತದಾನ (ಶೇ.61.49) ಕಡಿಮೆ ದಾಖಲಾಗಿದ್ದು, ಮತ ವಿಭಜನೆ ಸಾಧ್ಯತೆ ದಟ್ಟವಾಗಿದ್ದು, ಬಿಜೆಪಿಗೆ ಹೊಡೆತ ಬೀಳಬಹುದು ಎನ್ನಲಾಗುತ್ತಿದೆ. ಬಿಜೆಪಿ ಸಾಂಪ್ರದಾಯಿಕ ಲಿಂಗಾಯತ ಮತ್ತು ಮರಾಠಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಸ್ಪರ್ಧೆಯಿಂದ ನಗರ ಪ್ರದೇಶದಲ್ಲಿ ಈ ಮತಗಳ ವಿಭಜನೆಯಾಗಿದೆ. ಗ್ರಾಮೀಣ ಭಾಗದಲ್ಲಿ ಈ ಸಮುದಾಯದ ಮತ ಪ್ರಮಾಣ ಈ ಬಾರಿ ಕಡಿಮೆಯಾಗಿದ್ದು, ಇದು ಬಿಜೆಪಿ ಮತಗಳ ಕುಸಿತಕ್ಕೆ ಕಾರಣವಾಗಬಹುದು.

ಮಾಜಿ ಸಚಿವ ಪಿಜಿಆರ್‌ ಸಿಂಧ್ಯಾ “ಕೈ’ ಪರ ಪ್ರಚಾರ ಹಿನ್ನೆಲೆ ಪಕ್ಷಕ್ಕೆ ವರ ಆಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಕಾಂಗ್ರೆಸ್‌ ಮುಸ್ಲಿಂ ಸಮುದಾಯದ ಮತ ನೆಚ್ಚಿಕೊಂಡಿದೆ. ಆದರೆ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಸ್ಪರ್ಧೆಯಿಂದ “ಕೈ’ಗೆ ಹಿನ್ನಡೆಯಾಗಬಹುದು ಎಂಬ ಲೆಕ್ಕ ತಪ್ಪಿದಂತಿದೆ. ನಗರ ಪ್ರದೇಶದಲ್ಲಿ ಮುಸ್ಲಿಂ ವೋಟ್‌ ಗಳು ಜೆಡಿಎಸ್‌ನತ್ತ ಬಿದ್ದಿದ್ದರೂ ಹಳ್ಳಿಗಳಲ್ಲಿ ಕಾಂಗ್ರೆಸ್‌ ನತ್ತ ವಾಲಿದೆ. ಜತೆಗೆ ಕೋಲಿ-ಕಬ್ಬಲಿಗ ಮತಗಳು ಸಹ “ಕೈ’ ಹಿಡಿದಿವೆ ಎಂಬ ಜನಾಭಿಪ್ರಾಯ ವ್ಯಕ್ತವಾಗುತ್ತಿದೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಾಲಾ ನಾರಾಯಣರಾವ್‌ ಗೆಲ್ಲುವುದು ನಿಶ್ಚಿತ. ಬಿಜೆಪಿ ಅಧಿಕಾರದ ದುರ್ಬಳಕೆ ಜತೆಗೆ ಹಣದ ಹೊಳೆ ಹರಿಸಿ, ಮತದಾರರ ಖರೀದಿಗೆ ಮುಂದಾಗಿದೆ. ಆದರೆ, ಪ್ರಬುದ್ಧ ಮತದಾರರು ಈ ಅಕ್ರಮದ ನಡುವೆಯೂ ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಕಾಂಗ್ರೆಸ್‌ ಎಲ್ಲ ವರ್ಗದವರ ಅಭಿವೃದ್ಧಿ ಪರ ನಿಂತಿರುವ ಜಾತ್ಯತೀತ ಪಕ್ಷವಾಗಿರುವುದರಿಂದ ಮತದಾರರು ಜಾತಿ, ಧರ್ಮ ಮರೆತು ನಮ್ಮ ಅಭ್ಯರ್ಥಿ ಕೈ ಹಿಡಿದಿದ್ದಾರೆ.
*ಈಶ್ವರ ಖಂಡ್ರೆ, ಕಾರ್ಯಾಧ್ಯಕ್ಷರು, ಕೆಪಿಸಿಸಿ

ಬಸವಣ್ಣನ ಕಾರ್ಯಕ್ಷೇತ್ರ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ತೀವ್ರ ಪೈಪೋಟಿ ನಡುವೆ ಜೆಡಿಎಸ್‌ ಅಭ್ಯರ್ಥಿ ಸೈಯದ್‌ ಯಸ್ರಬ್‌ ಅಲಿ ಖಾದ್ರಿ ಗೆಲ್ಲುವ ವಿಶ್ವಾಸವಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಸಾಲ ಮನ್ನಾ ಸೇರಿ ರೈತರ ಹಿತಕ್ಕಾಗಿ ರೂಪಿಸಿದ್ದ ಕಾರ್ಯಕ್ರಮಗಳನ್ನು ಜನ ಇಂದಿಗೂ ಮರೆತಿಲ್ಲ. ಗ್ರಾಮೀಣ ಭಾಗವಷ್ಟೇ ಅಲ್ಲ ನಗರ ಪ್ರದೇಶದಲ್ಲೂ ಪಕ್ಷಕ್ಕೆ ಹೆಚ್ಚಿನ ಬೆಂಬಲ ಸಿಕ್ಕಿದೆ. ಅಲ್ಪಸಂಖ್ಯಾತರ ಜತೆ ಎಲ್ಲ ಸಮುದಾಯಗಳ ಮತಗಳು ಪಕ್ಷಕ್ಕೆ ಬಿದ್ದಿವೆ.
*ಬಂಡೆಪ್ಪ ಖಾಶೆಂಪುರ, ಜೆಡಿಎಸ್‌ ಶಾಸಕ

*ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.