ಜಲಕ್ಷಾಮ: ಪರಿಹಾರಕ್ಕೆ ಆಗ್ರಹಿಸಿ ಸಭೆ ಬಹಿಷ್ಕಾರ

Team Udayavani, May 26, 2022, 5:45 PM IST

21releft

ಮುದಗಲ್ಲ: ಪುರಸಭೆಯಲ್ಲಿ ಬುಧವಾರ ಕರೆಯಲಾಗಿದ್ದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಪಟ್ಟಣದಲ್ಲಿ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆಗೆ ಸದಸ್ಯ ಎಸ್‌. ಆರ್‌.ರಸೂಲ ಮುಖ್ಯಾಧಿಕಾರಿಗಳಿಗೆ ತರಾಟೆ ತೆಗೆದುಕೊಂಡು ಸಭೆ ಬಹಿಷ್ಕರಿಸಿ ಹೊರ ನಡೆದ ಪ್ರಸಂಗ ಜರುಗಿತು.

ಸಭೆಯಲ್ಲಿ ಮುಖ್ಯಾಧಿಕಾರಿ ಮರಿಲಿಂಗಪ್ಪ ಸ್ವಾಗತಿಸಿ ಸಭೆ ಆರಂಭಿಸಿದ್ದರು. ನಂತರ ಬಂದ ಸದಸ್ಯ ಎಸ್‌.ಆರ್‌.ರಸೂಲ ಸಭೆಯ ಬಾವಿಗೀಳಿದು ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿರುವದು ನಿಮಗೆ ಗೊತ್ತಿಲ್ಲವೇ? ಜನತೆ ಚುನಾಯಿತ ಸದಸ್ಯರಿಗೆ ಛೀಮಾರಿ ಹಾಕುತ್ತಿದ್ದಾರೆ. ನೀವು ಸಭೆ ನಡೆಸುತ್ತಿದ್ದರೀ. ಹೊರಗಡೆ ಕರವೇ ಸಂಘಟನೆ ಪ್ರತಿಭಟಿಸುತ್ತಿದೆ. ಸಾಕಷ್ಟು ಬಾರಿ ಪತ್ರಿಕೆಗಳಲ್ಲಿ ನೀರಿನ ಸುದ್ದಿಯಾಗಿದೆ. ಪುರಸಭೆ ಸದಸ್ಯರಿಗೆ, ಆಡಳಿತ ಮಂಡಳಿಗೆ ಧಿಕ್ಕಾರ ಕೂಗುತ್ತಿದ್ದಾರೆ. ಇದಕ್ಕೆ ಯಾರು ಹೊಣೆ?, ನಿಮ್ಮ ಕರ್ತವ್ಯ ಏನು? ಎಂದು ಪ್ರಶ್ನಿಸಿದರು.

ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥ ಮಾಡುವವರಿಗೆ ಕುರ್ಚಿಯಲ್ಲಿ ಕೂಡಲು ನಾವು ಅರ್ಹರಲ್ಲ. ಸಭೆ ನಡೆಸುವುದು ಬೇಡ, ಮುಂದೂಡಿ ಎಂದು ಸಭೆಯನ್ನು ಬಹಿಷ್ಕರಿಸಿ ಹೊರ ನಡೆದರು.

2022-23ನೇ ಸಾಲಿನ ಎಸ್‌ಎಫ್‌ಸಿಯ 33 ಲಕ್ಷ ರೂ. ಮತ್ತು 15ನೇ ಹಣಕಾಸು ಯೋಜನೆಯ 113 ಲಕ್ಷ ರೂ. ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯ್ನಾರಿಸಲು ಅನುಮೋದನೆ ನೀಡಲಾಯಿತು. ಎಸ್‌ಎಫ್‌ಸಿ 24.10%, 7.25% ಮತ್ತು 5% ಸರಕಾರದ ನಿರ್ದೇಶನದಂತೆ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು. ಕಾರ್ಮಿಕರಿಗೆ ಬೆಳಗಿನ ಉಪಾಹಾರ, ಮುಖ್ಯಾ ಧಿಕಾರಿಗಳ ಆಡಳಿತ ನಿರ್ವಹಣೆ, ವಾಹನಕ್ಕೆ ಟೆಂಡರ್‌ ಅನುಮೋದನೆ, ಪುರಸಭೆ ವ್ಯಾಪ್ತಿಯ ಚರಂಡಿಗಳ ಹೂಳೆತ್ತಲು 15 ಜನ ಕಾರ್ಮಿಕರನ್ನು ತಾತ್ಕಾಲಿಕ ಗುತ್ತಿಗೆ ಮೇಲೆ ತೆಗೆದುಕೊಳ್ಳುವುದು, ವಸತಿ ವಿನ್ಯಾಸಗಳಿಗೆ ಅನುಮೋದನೆ ನೀಡುವ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಸದಸ್ಯರಾದ ತಸ್ಲಿಂ ಮುಲ್ಲಾ, ಶ್ರೀಕಾಂತಗೌಡ, ಬಾಬು ಉಪ್ಪಾರ, ಹನುಮಂತ ವಾಲ್ಮೀಕಿ, ಅಮೀನಾಬೇಗಂ ಸೇರಿದಂತೆ 10 ಜನ ಸದಸ್ಯರು, ಪುರಸಭೆ ಸಿಬ್ಬಂದಿ ವರ್ಗ, ಕಿರಿಯ ಅಭಿಯಂತರ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.