Udayavni Special

ದೇವೇಗೌಡ ಸ್ವಯಂ ಘೋಷಿತ ಮಣ್ಣಿನ ಮಗ


Team Udayavani, Dec 4, 2018, 10:39 AM IST

bid-2.jpg

ಹುಮನಾಬಾದ: ದೇವೇಗೌಡ ಸ್ವಯಂ ಘೋಷಿಕ ಮಣ್ಣಿನ ಮಗ. ಅವರು ನಿಜವಾಗಿಯೂ ಮಣ್ಣಿನ ಮಗ ಆಗಿದ್ದರೆ ಅದನ್ನು ಸ್ವತಃ ರೈತರೇ ಹೇಳುತ್ತಿದ್ದರು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಟೀಕಿಸಿದರು. ಬರ ಪರಿಶೀಲನೆಗೆ ಹಳ್ಳಿಖೇಡ(ಬಿ) ಗ್ರಾಮದ ಕೆಲ ರೈತರ ಹೊಲಗಳಿಗೆ ಭೇಟಿ ನೀಡಿದ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಣ್ಣಿನ ಮಗನೆಂದು ಹೇಳಿಕೊಳ್ಳುವ ದೇವೇಗೌಡರು, ಹಿಂದುಳಿದ ವರ್ಗಗಳ ನಾಯಕನೆಂದೇ ಹೇಳಿಕೊಳ್ಳುವ ರಾಜ್ಯ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಯಾವತ್ತಾದರೂ ರಾಜ್ಯದ ರೈತರ ಕಣ್ಣೀರೊರೆಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರಾ? ರಾಜ್ಯದ ರೈತರ ಸಾಲ ಮನ್ನಾ ಮಾಡದೇ ಮಾಡಿದ್ದೇವೆ ಎಂದು ಪತ್ರಿಕೆಗಳಲ್ಲಿ ಎರಡೆರಡು ಪುಟ ಜಾಹೀರಾತು ನೀಡುತ್ತಿದ್ದಾರೆ ಎಂದರು.

ಹಳ್ಳಿಖೇಡ(ಬಿ) ಗ್ರಾಮದ ಕೆಲ ರೈತರ ಹೊಲಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬೇರು ಸಮೇತ ಕಿತ್ತು ಬಂದ ಎಳೆ ಕಬ್ಬು, ಒಣಗಿದ ಕಡಲೆ, ಜೋಳದ ಬೆಳೆಗಳನ್ನು ನೋಡಿದಾಗ ಎಂಥವರ ಕಣ್ಣಲ್ಲೂ ನೀರು ಬರುತ್ತದೆ. ಮುಖ್ಯಮಂತ್ರಿ ಬಲಗೈ ಬಂಟ್‌ ಎನ್ನಲಾಗುವ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಯಾವತ್ತಾದರು ಸೌಜನ್ಯಕ್ಕಾಗಿಯಾದರೂ ರೈತರ ಹೊಲಗಳಿಗೆ ಭೇಟಿ ನೀಡಿದ್ದಾರಾ ಎಂದು ಪ್ರಶ್ನಿಸಿದರು.

ಜಿಲ್ಲಾಮಟ್ಟದ ಕೆಡಿಪಿ ಸಭೆ ನಡೆಸಿ: ಬರ ಅಧ್ಯಯನಕ್ಕಾಗಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಂಡಗಳನ್ನು ರಚಿಸಲಾಗಿದೆ ಎಂದು ಸಚಿವ ಆರ್‌ .ವಿ.ದೇಶಪಾಂಡೆ ಹೇಳಿದ್ದಾರೆ. ಸರ್ಕಾರ ನಿಮ್ಮದೇ ಆಗಿರುವ ಈ ಸಂದರ್ಭದಲ್ಲಿ 4 ಪ್ರತ್ಯೇಕ ತಂಡಗಳ ಅಗತ್ಯವೇನಿತ್ತು. ಆಯಾ ಜಿಲ್ಲಾ ಉಸ್ತುವಾರಿ ಮಂತ್ರಿಗಳೇ ಜಿಲ್ಲಾ ಮಟ್ಟದಲ್ಲೇ ಕೆಡಿಪಿ ಸಭೆ ನಡೆಸಿ, ವಸ್ತುಸ್ಥಿತಿ ಅರಿತುಕೊಳ್ಳಲಿ. ಹಾನಿ ಕುರಿತು ಈಗಾಗಲೇ ಕಳುಹಿಸಿರುವ ವರದಿ ಆಧರಿಸಿ ರಾಜ್ಯ ಸರ್ಕಾರ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು ಎಂದರು.

ಸಂಸದ ಭಗವಂತ ಖೂಬಾ, ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಮಾಜಿ ಶಾಸಕ ಸುಭಾಷ ಕಲ್ಲೂರ, ಪಕ್ಷದ ರಾಜ್ಯ ಉಪಾಧ್ಯಕ್ಷ ರವಿ ಕುಮಾರ, ಬಸವರಾಜ ಚವ್ಹಾಣ, ಬಸವರಾಜ ಆರ್ಯ, ರಜಗನ್ನಾಥ ಚಿಲ್ಲಾಬಟ್ಟೆ, ಸುರೇಶಕುಮಾರ ಮಾಶೆಟ್ಟಿ, ರವಿ ಬಿರಾದಾರ, ಜೈಕುಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮನಾಥ ಪಾಟೀಲ, ತಾಲೂಕು ಅಧ್ಯಕ್ಷ ವಿಶ್ವನಾಥ ಪಾಟೀಲ ಮಾಡುಳ್‌, ತಾಪಂ ಸದಸ್ಯ ನಾಗೇಶ ಕಲ್ಲೂರ, ಮಾಧ್ಯಮ ಪ್ರಮುಖ ಪ್ರವೀಣ ಸಿರಂಜಿ, ಓಂಕಾರ ತುಂಬಾ, ಮಲ್ಲಿಕಾರ್ಜು ಕುಂಬಾರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27

ಬಸವ ತತ್ವದ ಜಾಗತಿಕ ಪ್ರಚಾರ ಅಗತ್ಯ

21

ಕೈಗಾರಿಕೆಗಳ ತ್ಯಾಜ್ಯ ಅವೈಜ್ಷಾನಿಕ ವಿಲೇವಾರಿ

20

ರಸ್ತೆ ಸುಧಾರಣೆಗೆ ಮೊದಲ ಆದ್ಯತೆ

19

ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

18

28ರಂದು ಸಿಂಧನೂರಿನಲ್ಲಿ ರೈತರ ಸಮಾವೇಶ: ಶರಣಪ್ಪ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.