ಡಾ| ವೀರೇಂದ್ರ ಹೆಗ್ಗಡೆ ರಾಷ್ಟ್ರದ ಸಂಪತ್ತು

ಗುರುಕುಲದಲ್ಲಿ ಹೆಗ್ಗಡೆ ಅವರ 73ನೇ ಜನ್ಮದಿನಾಚರಣೆ

Team Udayavani, Nov 26, 2020, 4:51 PM IST

ಡಾ| ವೀರೇಂದ್ರ ಹೆಗ್ಗಡೆ ರಾಷ್ಟ್ರದ ಸಂಪತ್ತು

ಭಾಲ್ಕಿ: ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡಿರುವ ಡಾ| ವೀರೇಂದ್ರ ಹೆಗ್ಗಡೆ ಅವರು ರಾಷ್ಟ್ರ ಮತ್ತು ಸಮಾಜದ ಬಹುದೊಡ್ಡ ಸಂಪತ್ತು ಆಗಿದ್ದಾರೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ನ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.

ತಾಲೂಕಿನ ಕರಡ್ಯಾಳ ಗ್ರಾಮದ ಚನ್ನಬಸವೇಶ್ವರ ಗುರುಕುಲದಲ್ಲಿ ಬುಧವಾರ ಆಯೋಜಿಸಿದ್ದ ಡಾ| ವೀರೇಂದ್ರ ಹೆಗ್ಗಡೆ ಅವರ 73ನೇ ಜನ್ಮದಿನ ಕಾರ್ಯಕ್ರಮದಲ್ಲಿ ದತ್ತು ಕೇಂದ್ರದ ಸುದೈವಿ (ಅನಾಥ) ಮಕ್ಕಳಿಗೆ ಸ್ವೇಟರ್‌, ಬೆಡ್‌ಶೀಟ್‌, ಚಾಪೆ ಇರುವ ಕಿಟ್‌ ವಿತರಿಸಿ ಅವರು ಮಾತನಾಡಿದರು. ಎಡದ ಕೈಯಲ್ಲಿ ಲಿಂಗ ಪೂಜೆ, ಬಲದ ಕೈಯಲ್ಲಿ ಜಂಗಮ ಪೂಜೆ ಎನ್ನುವ ಹಾಗೆ ಡಾ| ವೀರೇಂದ್ರ ಹೆಗ್ಗಡೆ ಅವರು ದೇವರ ಸೇವೆ ಜತೆಗೆ ಸಮಾಜದ ಸೇವೆಯನ್ನು ತಮ್ಮ ಬದುಕಾಗಿಸಿಕೊಂಡಿದ್ದಾರೆ. ಸಾವಿರಾರೂ ಸಂಘ-ಸಂಸ್ಥೆಗಳ ಚಟುವಟಿಕೆಗಳ ನಡುವೆಯು ಪರಿಶುದ್ಧ ವ್ಯಕ್ತಿತ್ವ, ಮನಸ್ಸು ಮೈಗೂಡಿಸಿಕೊಂಡು ದಿನದ 24 ಗಂಟೆಗಳ ಕಾಲ ನಿರ್ಲಿಪ್ತವಾಗಿ ಕೆಲಸ ಮಾಡುವ ಮೂಲಕ ಪ್ರತಿಯೊಬ್ಬರಿಗೂ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಡಾ| ವೀರೇಂದ್ರ ಹೆಗ್ಗಡೆ ಅವರು ಬಸವಾದಿ ಶರಣರ ಚಿಂತನೆಗಳು ತಮ್ಮ ಬದುಕಿನ ಭಾಗವಾಗಿಸಿಕೊಂಡಿದ್ದಾರೆ. ಸಮಾಜದಲ್ಲಿ ತುಳಿತಕ್ಕೆ ಒಳಾಗಾಗಿರುವ ಜನರನ್ನು ಮೇಲೆತ್ತುವ ಅವರು ಎಲ್ಲರಿಗೂ ಆದರ್ಶರಾಗಿದ್ದಾರೆ ಎಂದು ತಿಳಿಸಿದರು.

ಸದ್ಗುರು ವಿದ್ಯಾ ಸಂಸ್ಥೆಯ ಸಂಸ್ಥಾಪಕ ಸೋಮನಾಥ ಮುದ್ದಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಉಮರಬ್ಬ ಮಾತನಾಡಿದರು. ಭಾಲ್ಕಿ  ತಾಲೂಕು ಯೋಜನಾಧಿಕಾರಿ ಮಹಾಂತೇಶ. ಎಸ್‌ ಅವರು ಧರ್ಮಸ್ಥಳ ಯೋಜನೆ ಬಡ ಜನರಿಗೆ ನೀಡುತ್ತಿರುವ ಯೋಜನೆಗಳನ್ನು ವಿವರಿಸಿದರು. ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಸೋಮನಾಥಪ್ಪ ಅಷ್ಟೂರೆ, ಡಿವೈಎಸ್ಪಿ ಡಾ| ದೇವರಾಜ.ಬಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಹುಮನಾಬಾದ್‌ ಯೋಜನಾಧಿಕಾರಿ ಸುರೇಶ, ಬಸವಕಲ್ಯಾಣ ಯೋಜನಾಧಿಕಾರಿ ಸೋಮನಾಥ, ಬೀದರ ಯೋಜನಾಧಿಕಾರಿ ರಮೇಶ ನಾಯಕ್‌, ಔರಾದ್‌ ಯೋಜನಾಧಿಕಾರಿ ಮಾಸ್ತಪ್ಪ, ಜಯಕ್ಕ ಗಾಂವಕರ್‌ ಇದ್ದರು.

ಡಾ| ವೀರೇಂದ್ರ ಹೆಗ್ಗಡೆ ಅವರು 73ನೇ ವಸಂತಕ್ಕೆ ಕಾಲಿಡುತ್ತಿರುವುದು ಸಂತಸದ ಸಂಗತಿ. ಅವರ ಸೇವೆ ರಾಷ್ಟ್ರಕ್ಕೆ ಅಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಶತಮಾನೋತ್ಸವ ಆಚರಿಸಿಕೊಳ್ಳುವಂತಾಗಲಿ. -ಡಾ| ಬಸವಲಿಂಗ ಪಟ್ಟದ್ದೇವರು, ಹಿರೇಮಠ ಸಂಸ್ಥಾನ, ಭಾಲ್ಕಿ

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.