ಬೀದರ-ಮಚಲಿಪಟ್ಟಣಂ ರೈಲಿಗೆ ಚಾಲನೆ


Team Udayavani, Mar 3, 2018, 11:24 AM IST

bid-1.jpg

ಬೀದರ: ಬೀದರ-ಮಚಲಿಪಟ್ಟಣಂ ಸೂಪರ್‌ಫಾಸ್ಟ್‌ ನೂತನ ರೈಲಿಗೆ ಸಂಸದ ಭಗವಂತ ಖೂಬಾ ಅವರು ಶುಕ್ರವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು. ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೈಲು ಸಂಚಾರದಿಂದ ದೂರದ ಮುಂಬೈ, ದೆಹಲಿಯಂತಹ ರಾಜಧಾನಿ ಪ್ರದೇಶಗಳಿಗೆ ಕಡಿಮೆ ಅವಧಿಯಲ್ಲಿ ತಲುಪಲು ಅನುಕೂಲವಾಗಲಿದೆ. ಜೊತೆಗೆ ಇತರೆ ರೈಲುಗಳಿಗೆ ಸಂಪರ್ಕ ಕಲ್ಪಿಸಲು ಸಾಧ್ಯವಾಗುತ್ತದೆ. ಒಟ್ಟಾರೆ ಇದರಿಂದ ಕರ್ನಾಟಕ, ತೆಲಂಗಾಣ ಹಾಗೂ ಸೀಮಾಂದ್ರ ರಾಜ್ಯಗಳ ಆಂತರಿಕ ಸಂಬಂಧ ಹಾಗೂ ಸಂಪರ್ಕ ಉತ್ತಮಗೊಳ್ಳಲಿದೆ ಎಂದು ತಿಳಿಸಿದರು.

ಈ ರೈಲು ಸಂಚಾರದಿಂದ ಈ ಭಾಗದ ವ್ಯಾಪಾರದ ಅಭಿವೃದ್ಧಿಗೆ ಅನುಕೂಲವಾಗಲಿದೆ. ರೈತರು, ಕಾರ್ಮಿಕರಿಗೆ ಇದು ಉತ್ತಮ ವರದಾನದಂತಿದ್ದು, ಉನ್ನತ ದರ್ಜೆಯ ಚಿಕಿತ್ಸೆಗೆ ಬೇರೆಡೆ ಸಂಚರಿಸಲು ರೋಗಿಗಳಿಗೂ ಕೂಡ ಸಹಾಯವಾಗಲಿದೆ. ಜಿಲ್ಲೆಯ ಜನತೆ ಇದರ ಸದುಪಯೋಗ ಪಡೆಯಬೇಕೆಂದು ಮನವಿ ಮಾಡಿದರು.

ದಕ್ಷಿಣ ಮಧ್ಯ ರೈಲ್ವೆ ವಿಭಾಗದ ವಿಭಾಗೀಯ ಸಹಾಯಕ ವ್ಯವಸ್ಥಾಪಕ ಶೈಲೇಂದ್ರ ಸಿಂಗ್‌ ಮಾತನಾಡಿ, 12750 ಸಂಖ್ಯೆಯ ನೂತನ ಈ ರೈಲು ಪ್ರತಿದಿನ ಸಂಜೆ 7:25ಕ್ಕೆ ಬೀದರನಿಂದ ಹೊರಟು ಮರುದಿನ ಬೆಳಗ್ಗೆ 6:23ಕ್ಕೆ ಮಚಲಿಪಟ್ಟಣವನ್ನು ತಲುಪಲಿದೆ. 

ಬೀದರ ನಿಂದ ಜಹೀರಾಬಾದ್‌, ವಿಕಾರಬಾದ್‌, ಲಿಂಗಂಪಲ್ಲಿ, ಸಿಕಿಂದ್ರಾಬಾದ್‌, ಜಣಗಾಂವ್‌, ಕಾಜಿಪೇಟ್‌, ವಾರಂಗಲ್‌, ಕೇಸಮುದ್ರಂ, ಮಹಬೂಬಾದ್‌, ದೋರಣಕಲ್‌, ಖಮ್ಮಾಮ್‌, ಮದೀರಾ, ಕೊಂಡಪಲ್ಲಿ, ಗುಡಿವಿಡಾ, ಮುಜಲ್ಲಾ, ಗುದ್ಲಾವಲ್ಲೇರು, ಕೌತ್ರಂ, ವಡ್ಲಮನ್ನುಡು, ಪೆದನಾ, ಚಿಲಕಲಪುಡಿ ಮಾರ್ಗವಾಗಿ ಈ ರೈಲು ಸಂಚರಿಸಲಿದೆ. ಈ ರೈಲು ಎಸಿ 2 ಟೈರ್‌, ಎಸಿ 3 ಟೈರ್‌, ಸ್ಲೀಪರ್‌ ಕ್ಲಾಸ್‌ ಮತ್ತು ಜನರಲ್‌ 2 ಕ್ಲಾಸ್‌ ಬೋಗಿಗಳನ್ನು ಹೊಂದಿರುತ್ತದೆ ಎಂದು ಹೇಳಿದರು.

ರೈಲ್ವೆ ನಿಲ್ದಾಣದ ಅಧೀಕ್ಷಕ ಎ.ಆರ್‌. ಮೀನಾ, ವ್ಯವಸ್ಥಾಪಕ ರಮೇಶ, ಬಿಜೆಪಿ ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಪ್ರಮುಖರಾದ ಬಾಬು ವಾಲಿ, ಜಗದೀಶ ಖೂಬಾ, ಬಾಬುರಾವ್‌ ಮದಕಟ್ಟಿ, ಈಶ್ವರಸಿಂಗ್‌ ಠಾಕೂರ್‌ ಹಾಗೂ ಇತರರು ಇದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.