ಐದು ದಶಕದ ಯಶಸ್ಸಿಗೆ ಒಗ್ಗಟ್ಟು ಕಾರಣ

Team Udayavani, Sep 15, 2018, 12:19 PM IST

bid-1.jpg

ಹುಮನಾಬಾದ: ಅದೆಷ್ಟೋ ಸಮಿತಿಗಳು ಆರಂಭಿಕ ಶೂರತನ ಎಂಬಂತೆ ಅಸ್ತಿತ್ವಕ್ಕೆ ಬಂದ ಕೆಲವೇ ವರ್ಷಗಳಲ್ಲಿ ಕಾಣೆಯಾಗುತ್ತವೆ. ಆದರೆ ಹಳೆ ಅಡತ್‌ ಬಜಾರ ಗಣೇಶ ಸಮಿತಿಯ ಐದು ದಶಕಗಳ ಯಶಸ್ಸಿಗೆ ಸಮಿತಿ ಪದಾಧಿಕಾರಿಗಳ ಒಕ್ಕಟ್ಟು ಕಾರಣವಾಗಿದೆ ಎಂದು ಗಣಿ, ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ಹೇಳಿದರು.

1969ರಲ್ಲಿ 12ರ ಬಾಲಕರಾಗಿದ್ದಾಗ ಆರಂಭಿಸಿ 2018ರ ವರೆಗೆ (50 ವರ್ಷ) ಮುನ್ನಡೆಸಿಕೊಂಡು ಬಂದಿರುವುದು ಅಸಾಮಾನ್ಯ ಸಾಧನೆ. ಯಾರೊಬ್ಬರಿಂದಲೂ ಬಿಡಿ ಕಾಸು ನಿರೀಕ್ಷಿಸದೇ ಸಮಿತಿ ಪದಾಧಿ ಕಾರಿಗಳೆ ಸ್ವಂತ ಬಲದ ಉತ್ಸವ ನಿರ್ವಹಿಸುತ್ತಿರುವ ಜಿಲ್ಲೆಯ ಏಕೈಕ ಗಣೇಶ ಸಮಿತಿ ಹಳೆ ಅಡತ್‌ ಬಜಾರ ಸಮಿತಿ ಎಂದರೆ ಅತಿಶಯೋಕ್ತಿಯಾಗದು ಎಂದರು. 

ಉತ್ಸವದ ಬೆಳ್ಳಿಹಬ್ಬವನ್ನು ತಂದೆ ಮಾಜಿ ಸಚಿವ ಬಸವರಾಜ ಪಾಟೀಲ ಅವರು ಉದ್ಘಾಟಿಸಿದರೆ, ಸುವರ್ಣಮಹೋತ್ಸವ ಸಮಾರಂಭವನ್ನು ಉದ್ಘಾಟಿಸುವ ಯೋಗ ನನಗೆ ಲಭಿಸಿದ್ದು ಪುಣ್ಯ. ಪಾಟೀಲ ಪರಿವಾರದ ಜನಸ್ನೇಹಿ ಕಾರ್ಯ ಮೆಚ್ಚಿ ಜನ ಕೈ ಹಿಡಿಯುತ್ತಿರುವ ಏಕೈಕ ಕಾರಣ ರಾಜಕೀಯ ಕ್ಷೇತ್ರದಲ್ಲಿ ಬೆಳೆಯಲು ಸಾಧ್ಯವಾಯಿತು. ಸಿದ್ದರಾಮಯ್ಯ ಸರ್ಕಾರದಲ್ಲಿ ಕೆಆರ್‌ಐಡಿಎಲ್‌ ಚೇರಮನ್‌ ಹುದ್ದೆ ಲಭಿಸಿತ್ತು. ಈ ಬಾರಿ ಗಣಿ, ಭೂವಿಜ್ಞಾನ ಜೊತೆಗೆ ಮುಜರಾಯಿ ಖಾತೆ ಲಭಿಸಿದೆ. ಅಭಿವೃದ್ಧಿ ಮೂಲಕ ಜನರ ಋಣ ತೀರಿಸುವ ಶಕ್ತಿ ದಯಪಾಲಿಸುವಂತೆ ಮೈಸೂರಿನ ತಾಯಿ ಚಾಮುಂಡಿ, ಇಲ್ಲಿನ ವೀರಭದ್ರೇಶ್ವರರಲ್ಲಿ ಪ್ರಾರ್ಥಿಸಿದ್ದಾಗಿ ಹೇಳಿದರು.

ರಾಜ್ಯಸಭೆ ಮಾಜಿ ಸದಸ್ಯ, ವಿಕಾಸ ಅಕಾಡೆಮಿ ಸಂಸ್ಥಾಪಕ ಬಸವರಾಜ ಪಾಟೀಲ ಸೇಡಂ ಮಾತನಾಡಿ, ಒಬ್ಬರು ಇನ್ನೊಬ್ಬರಿಂದ ಹಣ ಸುಲಿಗೆ ಮಾಡುವುದು ವಿದೇಶಿ ಸಂಸ್ಕೃತಿಯಾದರೇ, ಎಲ್ಲರೂ ನನ್ನವರೆಂದು ನೆರವಾಗುವುದು ಭಾರತೀಯ ಸಂಸ್ಕೃತಿ. ಮಾನಸಿಕ ನೆಮ್ಮದಿ ಸಿಗುವುದು ಹಣ ಮತ್ತು ಅಧಿಕಾರದಿಂದಲ್ಲ, ಆಧ್ಯಾತ್ಮ ಮತ್ತು ಪರೋಪಕಾರ ಮನೋಭಾವನೆಯಿಂದ. ಕಾರಣ ಬದುಕಿರುವಷ್ಟು ಕಾಲ ನೆಮ್ಮದಿಯಿಂದ ಬಾಳಿ ಬದುಕಬೇಕು ಎಂದರು.
 
ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ ಮಾತನಾಡಿ, ಪಂಚಧಾತು ಗಣೇಶ ಪ್ರತಿಮೆ ಪ್ರತಿಷ್ಠಾಪಿಸಿದ್ದು ಪ್ರಶಂಸನೀಯ. ಸಮಿತಿ ಪದಾಧಿಕಾರಿಗಳ ಬೇಡಿಕೆ ಗಂಭೀರವಾಗಿ ಪರಿಗಣಿಸಿ, ಅಗತ್ಯ ನಿವೇಶನ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಗಣೇಶ ಉತ್ಸವ ಸಮಿತಿ ಅಧ್ಯಕ್ಷ ನಾಗರಾಜ ರಘೋಜಿ ಮಾತನಾಡಿ, ಹಿರಿಯರಾದ ಬಸವರಾಜ ಪಾಟೀಲ ಸೇಡಂ ಅವರ ಆಶಯದಂತೆ ಸಮಿತಿಯು ಜನೋಪಯೋಗಿ ಕೆಲಸಗಳನ್ನೇ ಮಾಡುತ್ತಿದೆ. ಭವಿಷ್ಯದಲ್ಲಿ ಇನ್ನಷ್ಟು ಜನಪರ ಕಾರ್ಯ ಕೈಗೊಳ್ಳಲು ಯತ್ನಿಸಲಾಗುವುದು ಎಂದು ಹೇಳಿದರು.
 
ಸಾನ್ನಿಧ್ಯ ವಹಿಸಿದ್ದ ಹಿರೇಮಠದ ಶ್ರೀ ರೇಣುಕ ಗಂಗಾಧರ ಸ್ವಾಮೀಜಿ ಮಾತನಾಡಿ, ಭವಿಷ್ಯದಲ್ಲಿ ವಜ್ರ ಮಹೋತ್ಸವ, ಶತಮಾನೋತ್ಸವ ಆಚರಿಸುವ ಯೋಗ ಕೂಡಿ ಬರಲಿ ಎಂದು ಹಾರೈಸಿದರು. ಕೆಎಂಎಫ್‌ ಅಧ್ಯಕ್ಷ ರೇವಣಸಿದ್ದಪ್ಪ ಪಾಟೀಲ, ಎಪಿಎಂಸಿ ಅಧ್ಯಕ್ಷ ಡಾ| ಭದ್ರೇಶ ಎಸ್‌.ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಡಾ| ಸಿದ್ದಲಿಂಗಪ್ಪ ಪಾಟೀಲ, ಜಿಪಂ ಮಾಜಿ ಸದಸ್ಯ ವೀರಣ್ಣ ಪಾಟೀಲ, ಡಾ| ಶಶಿಕಾಂತ ಹಾರಕೂಡ್‌ ಇದ್ದರು.
 
ರಾಜೆಶ್ರೀ ಜಾಜಿ, ಮಹಾನಂದಾ ಮಾಡಗಿ ಪ್ರಾರ್ಥಿಸಿದರು. ಸುಭಾಷ ಭಗೋಜಿ ಸ್ವಾಗತಿಸಿದರು. ಕಾರ್ಯದರ್ಶಿ ಡಿ.ಆರ್‌. ಚಿದ್ರಿ ಪ್ರಾಸ್ತಾವಿಕ ಮಾತನಾಡಿದರು. ಕೋಶಾಧ್ಯಕ್ಷ ಪ್ರೇಮ ಜಾಜಿ 50 ವರ್ಷಗಳ ಸಾಧನೆ ಕುರಿತು ವರದಿ ವಾಚನ
ಮಾಡಿದರು. ಸಾರಿಕಾ ಗಂಗಾ ನಿರೂಪಿಸಿದರು. ಸಮಿತಿ ಉಪಾಧ್ಯಕ್ಷ ಚಂದ್ರಕಾಂತ ಶಂಕರಶಟ್ಟಿ ವಂದಿಸಿದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.