ಪರಿಸರ ಸಂರಕ್ಷಣೆ ಎಲ್ಲರ ಹೊಣೆ


Team Udayavani, Nov 24, 2017, 2:11 PM IST

Envo.jpg

ಬೀದರ: ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದ್ದು, ಕಾಲಕಾಲಕ್ಕೆ ವಾಹನಗಳ ತಪಾಸಣೆ ಮತ್ತು ಸರ್ವೀಸ್‌ ಮಾಡುವ ಮೂಲಕ ಕಪ್ಪು ಹೊಗೆ ಬಿಡುವುದನ್ನು ನಿಯಂತ್ರಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ
ಕೆ.ಟಿ. ವಿಶ್ವನಾಥ ಹೇಳಿದರು.

ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಭಾಗ್ಯವಂತಿ ಮೋಟಾರ್‌ ಡ್ರೈವಿಂಗ್‌ ಸ್ಕೂಲ್‌ ವತಿಯಿಂದ ಗುರುವಾರ ನಗರದ ಬಿ.ವಿ.ಭೂಮರೆಡ್ಡಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಾಯು ಮಾಲಿನ್ಯ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ನೀವು ಬದುಕಿ, ಇನ್ನೊಬ್ಬರನ್ನು ಬದುಕುಲು ಬಿಡಿ’ ಎನ್ನುವ ಮಾತಿನಂತೆ ಪರಿಸರ ಸಂರಕ್ಷಣೆಯ ಜವಾಬ್ದಾರಿ ಹೊತ್ತುಕೊಳ್ಳಬೇಕು. ವಾಹನಗಳಿಂದ ಹೊರಸೂಸುವ ಹಾನಿಕಾರಕ ಅಂಶಗಳನ್ನು ನಿಯಂತ್ರಿಸಲು ಯತ್ನಿಸಬೇಕು.
ವಿದ್ಯಾರ್ಥಿಗಳು ವಾಹನ ಚಾಲನೆ ವೇಳೆ ಜಾಗ್ರತೆ ವಹಿಸಬೇಕು ಎಂದು ಹೇಳಿದರು.

ದೇಶದಲ್ಲಿ ಪ್ರತಿ ವರ್ಷ 1.50 ಲಕ್ಷ ಜನರಿಗೆ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಶೇ.80ರಷ್ಟು ಯುವಕರು ಅಪಘಾತಕ್ಕೆ ಒಳಗಾಗುತ್ತಿದ್ದಾರೆ. ಮನುಷ್ಯ ಎಲ್ಲದರಲ್ಲೂ ಮುಂಚೂಣಿಯಲ್ಲಿರಬೇಕು ಎನ್ನುವ ಹಂಬಲ ಹೊಂದಿದ್ದು,
ವಾಹನ ಚಾಲನೆ ವಿಷಯದಲ್ಲಿ ಸೋಲುವ ಗುಣ ಬೆಳೆಸಿಕೊಳ್ಳಬೇಕು. ಅಂದಾಗಲೇ ಅಮೂಲ್ಯವಾದ ಜೀವ
ಉಳಿಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.

ಮೋಟಾರು ವಾಹನ ನಿರೀಕ್ಷಕರಾದ ನಾಗರಾಜ ಡಿ.ಜಿ.ಮಾತನಾಡಿ, ಎಲ್ಲರೂ ಕಡ್ಡಾಯ ಸಂಚಾರಿ ನಿಯಮಗಳನ್ನು
ಪಾಲಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಅಲ್ಲದೇ ಪ್ರತಿಯೊಬ್ಬರು ಕನಿಷ್ಠ ಒಂದು ಗಿಡ ನೆಡಲು ಮುಂದಾಗಬೇಕು.

ಇದರಿಂದ ಶಬ್ದ ಮತ್ತು ವಾಯ ಮಾಲಿನ್ಯ ತಡೆಯಬಹುದು ಎಂದರು. ಭಾಗ್ಯವಂತಿ ಮೋಟಾರ್‌ ಡ್ರೈವಿಂಗ್‌ ಸ್ಕೂಲ್‌
ಪ್ರಾಂಶುಪಾಲ ಶಿವರಾಜ ಜಮಾದಾರ್‌ ಮಾತನಾಡಿ, ನಾವು ಪರಿಸರ ರಕ್ಷಿಸಿದಲ್ಲಿ ಅದು ನಮ್ಮನ್ನು ಉಳಿಸುತ್ತದೆ. ಹೆಚ್ಚು
ಪ್ರಮಾಣದಲ್ಲಿ ಗಿಡಗಳನ್ನು ಬೆಳೆಸುವುದರಿಂದ ಶಬ್ದ, ವಾಯು ಮಾಲಿನ್ಯ ನಿಯಂತ್ರಿಸಿ ಪರಿಸರ ಸಂರಕ್ಷಿಸಬಹುದು ಎಂದು ಹೇಳಿದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರಾಘವೇಂದ್ರ ಡಿ.ಎಚ್‌. ಅವರು ಅಧ್ಯಕ್ಷತೆ ವಹಿಸಿದ್ದರು.

ಸಂತೋಷ ರಾಯ್ಕೋಡಿ ವೇದಿಕೆಯಲ್ಲಿದ್ದರು. ರೇಣುಕಾ ಸ್ವಾಮಿ, ಸಿದ್ರಾಮ್‌ ನೆಂಗಾ, ವಿದ್ಯಾರ್ಥಿಗಳು ಸಿಬ್ಬಂದಿ
ಕಾರ್ಯಕ್ರಮದಲ್ಲಿ ಇದ್ದರು. ಪ್ರೊ| ಮೀರಾ ಖೇಣಿ ನಿರೂಪಿಸಿದರು. ಪ್ರೊ| ಉಮಾದೇವಿ ಧನ್ನೂರೆ ಸ್ವಾಗತಿಸಿದರು.
ಗಾಯತ್ರಿ ನೇಳಗೆ ವಂದಿಸಿದರು. 

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.