ಸಂಪರ್ಕಿತರ ಗುರುತು ಪತ್ತೆ ಪ್ರಥಮಾದ್ಯತೆ ಆಗಲಿ: ಡಿಸಿ

Team Udayavani, Jun 14, 2020, 7:43 AM IST

ಸಂಪರ್ಕಿತರ ಗುರುತು ಪತ್ತೆ ಪ್ರಥಮಾದ್ಯತೆ ಆಗಲಿ: ಡಿಸಿ

ಬೀದರ: ಕೋವಿಡ್‌-19 ಪಾಸಿಟಿವ್‌ ದೃಢಪಟ್ಟ 24 ತಾಸಿನೊಳಗೆ ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಹಚ್ಚಲು ಪ್ರಥಮ ಆದ್ಯತೆ ಆಗಬೇಕು ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು. ಯಾವುದೇ ಕಾರ್ಯವಿರಲಿ ಅದನ್ನು ಬದಿಗೊತ್ತಿ, ಕೋವಿಡ್‌ -19 ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವ ಕಾರ್ಯ ನಡೆಸಬೇಕು ಎಂದರು.

ಕಂಟೈನ್ಮೆಂಟ್‌ ಝೋನ್‌ ವ್ಯಾಪ್ತಿಯಲ್ಲಿ ಗುರುತಿಸಿ ಪಟ್ಟಿ ಮಾಡಿದ ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ವಿಳಂಬ ಸಲ್ಲದು. ಪ್ರಯೋಗಾಲಯದಿಂದ ಬೇಗನೆ ವರದಿ ಪಡೆಯಲು ಕ್ರಮ ವಹಿಸಬೇಕು ಎಂದು ಸೂಚಿಸಿದರು. ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ ಪೂರ್ಣಗೊಳಿಸಿದವರು ಮತ್ತೆ ಏಳು ದಿನ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಈ ಅವಧಿಯಲ್ಲಿ ಕ್ವಾರಂಟೈನ್‌ಗೆ ಒಳಗಾದವರು ಹೊರಗಡೆ ಸುತ್ತಾಡುವುದು ಮತ್ತು ಹೋಮ್‌ ಕ್ವಾರಂಟೈನ್‌ಗೆ ವಿರೋಧಿಸುವುದು ಕಂಡು ಬಂದಲ್ಲಿ ಅಂಥವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಡಿಎಚ್‌ಒ ಡಾ| ವಿ.ಜಿ. ರೆಡ್ಡಿ ಮತ್ತು ತಾಲೂಕು ವೈದ್ಯಾಧಿಕಾರಿಗಳಿಗೆ ಡಿಸಿ ನಿರ್ದೇಶನ ನೀಡಿದರು.

ಕೋವಿಡ್‌-19 ತಡೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ನಿತ್ಯದ ಕಚೇರಿ ಕೆಲಸದ ಜೊತೆಗೆ ಕೋವಿಡ್‌-19 ಕೆಲಸಕ್ಕೂ ಆದ್ಯತೆ ಕೊಡಬೇಕು ಎಂದು ಡಿಸಿ ಸೂಚಿಸಿದರು. ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಎಸ್‌ಪಿ ಡಿ.ಎಲ್‌.ನಾಗೇಶ, ಸಹಾಯಕ ಆಯುಕ್ತರಾದ ಅಕ್ಷಯ ಶ್ರೀಧರ, ಭಂವರಸಿಂಗ್‌ ಮೀನಾ, ಡಿಎಸ್‌ಒ ಡಾ| ಕೃಷ್ಣಾ ರೆಡ್ಡಿ ಇತರರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.