ಲಾಳಗೊಂಡ ಸಮಾಜಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗಲಿ

Team Udayavani, Oct 18, 2021, 2:49 PM IST

17

ಸಿಂಧನೂರು: ಲಿಂಗಾಯತ ಸಮುದಾಯದ ಎಲ್ಲ ಉಪಜಾತಿಗಳು ಜಾತಿ ಪಟ್ಟಿಯಲ್ಲಿದ್ದರೂ ಲಾಳಗೊಂಡ ಸಮಾಜಕ್ಕೆ ನ್ಯಾಯ ದೊರಕಿಲ್ಲ. ನಮ್ಮ ಜಾತಿಯನ್ನು ಕೂಡ ಪಟ್ಟಿಯಲ್ಲಿ ಸೇರಿಸಲು ಒತ್ತಾಯಿಸಿ ಕೆಲವೇ ದಿನಗಳಲ್ಲಿ ಬೃಹತ್‌ ಸಮಾವೇಶ ನಡೆಸಲಾಗುವುದು ಎಂದು ಅಖೀಲ ಕರ್ನಾಟಕ ಲಾಳಗೊಂಡ ಸಮಾಜದ ರಾಜ್ಯಾಧ್ಯಕ್ಷ ಹರವಿ ಬಸನಗೌಡ ಕಂಪ್ಲಿ ಹೇಳಿದರು.

ನಗರದ ಗಂಗಾವತಿ ರಸ್ತೆಯ ದುದ್ದುಪುಡಿ ಮಹಿಳಾ ಮಹಾವಿದ್ಯಾಲಯದಲ್ಲಿ ಭಾನುವಾರ ತಾಲೂಕು ಲಾಳಗೊಂಡ ಸಮಾಜದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದ 14 ಜಿಲ್ಲೆಗಳಲ್ಲಿ ಲಾಳಗೊಂಡ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಅತ್ಯಧಿಕ ಜನಸಂಖ್ಯೆಯಿದೆ. ಆದರೂ, ಸಮಾಜಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದರು.

ಜಾತಿ ಪಟ್ಟಿಯಲ್ಲಿ ಲಾಳಗೊಂಡ ಸೇರಿಸುವಂತೆ ಮೊದಲ ಬಾರಿಗೆ ಯಡಿಯೂರಪ್ಪ ಅವರನ್ನು ಭೇಟಿ ಯಾಗಿ ಮನವಿ ಸಲ್ಲಿಸಲಾಗಿತ್ತು. ಅವರು ಹಿಂದುಳಿದ ವರ್ಗಕ್ಕೆ ಬರೆದಿದ್ದರು. ಕಾಂತರಾಜ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಸಮಿತಿ ಲಾಳಗೊಂಡ ಜಾತಿ ಪಟ್ಟಿಯಲ್ಲಿ ಸೇರಿಸಲು ಶಿಫಾರಸು ಮಾಡಿತ್ತು. ಎರಡನೇ ಬಾರಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮತ್ತೊಮ್ಮೆ ಭೇಟಿಯಾಗಿ ಒತ್ತಡ ಹಾಕಲಾಗಿತ್ತು. ಅದನ್ನು ಸಚಿವ ಸಂಪುಟ ಸಭೆಗೆ ಶಿಫಾರಸು ಮಾಡಿದ್ದರು. ಜಗದೀಶ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದಾಗ ಕಲುಬರಗಿಯಲ್ಲಿ ನಡೆದ ಸಂಪುಟ ಸಭೆಗೆ ಈ ವಿಷಯ ಬಂದಿತು. ಸಿ.ಎಂ. ಉದಾಸಿ ನೇತೃತ್ವದ ಉಪ ಸಮಿತಿಗೆ ವಹಿಸಲಾಗಿತ್ತು. ಉಪ ಸಮಿತಿಯೂ ವರದಿ ನೀಡಿದೆ. ಸರಕಾರದ ಮೇಲೆ ಒತ್ತಡ ಹಾಕಿ ಈ ಸೌಲಭ್ಯವನ್ನು ಪಡೆಯಲು ನಾವು ಹೋರಾಟ ನಡೆಸಬೇಕಿದೆ ಎಂದರು.

ನಾವು ಯಾವುದೇ ಲಿಂಗಾಯತ ಉಪಜಾತಿಗಳನ್ನು ವಿರೋಧ ಮಾಡುವುದಿಲ್ಲ. ನಮಗೆ ಸಿಗಬೇಕಾದ ಸೌಲಭ್ಯಗಳನ್ನು ಕೊಡಿ ಎಂದು ಒತ್ತಾಯಿಸುವುದು ನಮ್ಮ ಉದ್ದೇಶ. ಈಗ ಎಲ್ಲ ಉಪಜಾತಿ ಸೌಲಭ್ಯ ಪಡೆಯುತ್ತಿವೆ. ನಮ್ಮ ಮುಂದಿನ ಪೀಳಿಗೆ ಭವಿಷ್ಯಕ್ಕಾಗಿ ಜಾತಿ ಪಟ್ಟಿಯಲ್ಲಿ ಸೇರುವುದು ಅನಿವಾರ್ಯವಾಗಿದೆ. ಯಾರು ಯಾವ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಸಮಾಜದ ವಿಷಯ ಬಂದಾಗ ಎಲ್ಲರೂ ಒಗ್ಗಟ್ಟಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಮಾಜದ ತಾಲೂಕಾಧ್ಯಕ್ಷ ಶರಣಬಸವ ವಕೀಲರು ವಲ್ಕಂದಿನ್ನಿ ಮಾತನಾಡಿ, ನಮ್ಮ ಸಮಾಜ ರಾಜಕೀಯವಾಗಿ ಬಲಿಷ್ಠರಾಗಲು ಸಂಘಟನೆ ಅನಿವಾರ್ಯವಾಗಿದೆ. ಸಂಘಟನೆಯಿದ್ದರೆ ರಾಜಕೀಯವಾಗಿ ನಾವು ಗುರುತಿಸಿಕೊಳ್ಳಬಹುದು ಎಂದರು.

ಮಾನವಿ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನಗೌಡ ಪೋತ್ನಾಳ, ಸಿರುಗುಪ್ಪ ತಾಲೂಕಾಧ್ಯಕ್ಷ ಪಂಪನಗೌಡ ಮಾತನಾಡಿ, ಸಮಾಜದಲ್ಲಿ ಒಗ್ಗಟ್ಟಿನ ಕೊರತೆ ಹಿನ್ನಡೆಗೆ ಕಾರಣ ಎಂದರು.

ಅಖೀಲ ಕರ್ನಾಟಕ ಲಾಳಗೊಂಡ ಸಮಾಜದ ಗೌರವಾಧ್ಯಕ್ಷ ಬಸವರಾಜ ಪಾಟೀಲ್‌ ಅತ್ತನೂರು, ಪ್ರಧಾನ ಕಾರ್ಯದರ್ಶಿ ಪಂಪಾಪತಿ ವಕೀಲರು, ಉಪಾಧ್ಯಕ್ಷ ಮಹಾಂತಪ್ಪಗೌಡ ಭೋಗಾವತಿ, ಎಚ್‌.ಕೆ. ಬಸವರಾಜ ಸೇರಿದಂತೆ ತಾಲೂಕು ಘಟಕದ ಪದಾಧಿಕಾರಿಗಳು, ಸಮಾಜದ ಮುಖಂಡರು ಪಾಲ್ಗೊಂಡಿದ್ದರು. ಚಂದ್ರೇಗೌಡ ಹರೇಟನೂರು ನಿರೂಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.