ರೈತರ ಆದಾಯ ದ್ವಿಗುಣ ಸರ್ಕಾರದ ಗುರಿ

Team Udayavani, Mar 4, 2022, 11:31 AM IST

7farmers

ಬೀದರ: ರೈತರ ಆದಾಯ ದ್ವಿಗುಣಗೊಳಿಸಿ, ಅವರ ಜೀವನ ಮಟ್ಟವನ್ನು ಸುಧಾರಿಸುವುದು ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಯತ್ನಿಸುತ್ತಿವೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಹೇಳಿದರು.

ಔರಾದ ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆಗಳ ರೈತ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣ ಹಾಗೂ ಇನ್ನಿತರೆ ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡಿದರು.

ರೈತರು ನಮ್ಮ ದೇಶದ ಬೆನ್ನೆಲುಬಾಗಿದ್ದಾರೆ. ಅವರು ಸುಖವಾಗಿದ್ದರೆ ಎಲ್ಲರೂ ನೆಮ್ಮದಿಯಿಂದ ಜೀವಿಸಲು ಸಾಧ್ಯ. ಹಾಗಾಗಿ ಸರ್ಕಾರವು ರೈತರನ್ನು ಆರ್ಥಿಕವಾಗಿ ಸುಧಾರಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರುತ್ತಿದೆ. ರೈತರು ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಳ್ಳುವಂತಾಗಲು ಸಬ್ಸಿಡಿಯೊಂದಿಗೆ ಕೃಷಿ ಯಂತ್ರೋಪಕರಣ ವಿತರಿಸಲಾಗುತ್ತಿದೆ. ಮಣ್ಣು ಪರೀಕ್ಷೆ ನಡೆಸಲಾಗುತ್ತಿದೆ. ರೈತರಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹೀಗೆ ರೈತರಿಗಾಗಿ ಇರುವ ಎಲ್ಲ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಯೋಜನೆಗಳು ಸಾಕಾರವಾಗಬೇಕಾದರೆ ಅಧಿಕಾರಿಗಳ ಪಾತ್ರ ಅತ್ಯಂತ ಮುಖ್ಯವಾಗಿದೆ. ಎಲ್ಲ ಯೋಜನೆಗಳು ಸರಿಯಾದ ಫಲಾನುಭವಿಗೆ ತಲುಪಿಸಲು ಪ್ರಮಾಣಿಕವಾಗಿ ಪ್ರಯತ್ನಿಸಬೇಕು. ಕಚೇರಿಗಳಿಗೆ ಬರುವ ರೈತರೊಂದಿಗೆ ಸೌಜನ್ಯದಿಂದ ಮಾತನಾಡಿಸಿ, ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಬೇಕು. ರೈತರಿಗಾಗಿ ಇರುವ ಯೋಜನೆಗಳ ಬಗ್ಗೆ ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಪ್ರಚಾರ ನೀಡಬೇಕು ಎಂದು ನಿರ್ದೇಶನ ನೀಡಿದರು.

ರೈತರಿಗೆ ಯಂತ್ರೋಪಕರಣ ವಿತರಣೆ

ಔರಾದ ತಾಲೂಕಿನ ರೈತರಿಗೆ ಸಬ್ಸಿಡಿಯೊಂದಿಗೆ ಸುಮಾರು 16 ಲಕ್ಷ ಮೊತ್ತದ ವಿವಿಧ ಕೃಷಿ ಯಂತ್ರೋಪಕರಣಗಳನ್ನು ಮತ್ತು ಸಬ್ಸಿಡಿಯೊಂದಿಗೆ 1.86 ಲಕ್ಷ ಮೊತ್ತದ ಸ್ಪ್ರಿಂಕ್ಲರ್ಸ್‌ ಹಾಗೂ ಟಾರ್ಪಲಿನ್‌ಗಳನ್ನು ವಿತರಿಸಿದರು.

ಇದೇ ವೇಳೆ ಮುಖ್ಯಮಂತ್ರಿಯವರ ರೈತ ವಿದ್ಯಾನಿ ಧಿ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಚಿವರು ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್‌, ಕೆಂಗೆಗೌಡ ಎನ್‌., ಅರುಣಕುಮಾರ ಕುಲಕರ್ಣಿ, ಅನ್ಸಾರಿ ಎಂ.ಎ.ಕೆ, ಮಲ್ಲಿಕಾರ್ಜುನ ಲಿಂಗದಳ್ಳಿ, ತಾಪಂ ಇಒ ಮಾಣಿಕರಾವ ಪಾಟೀಲ, ಸಂತೋಷ ಹಜಾರಿ, ರಾಮಶೆಟ್ಟಿ ಪನ್ನಾಳೆ, ಸುರೇಶ ಭೋಸ್ಲೆ, ಮಾರುತಿ ಚವ್ಹಾಣ, ನಾಗನಾಥ ಮೋರ್ಗೆ, ಸಂಜು ಇದ್ದರು.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.